Asianet Suvarna News Asianet Suvarna News

ದಸರಾ ಆಚರಣೆ ನನ್ನೊಬ್ಬನ ತೀರ್ಮಾನವಲ್ಲ: ಎಸ್‌.ಟಿ.ಸೋಮಶೇಖರ್‌

ನಾನೊಬ್ಬನೇ ತೀರ್ಮಾನ ತೆಗೆದುಕೊಳ್ಳಲಾಗದು. 27ಕ್ಕೂ ಹೆಚ್ಚು ಮಂದಿ ಕಮಿಟಿಯಲ್ಲಿರುತ್ತಾರೆ ಎಂದು ಪರೋಕ್ಷವಾಗಿ ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ಗೆ ಟಾಂಗ್‌ ಕೊಟ್ಟ ಸಚಿವ ಎಸ್‌.ಟಿ.ಸೋಮಶೇಖರ್‌ 

Minister S T Somashekhar Talks Over Mysuru Dasara
Author
Bengaluru, First Published Oct 8, 2020, 10:39 AM IST
  • Facebook
  • Twitter
  • Whatsapp

ಮೈಸೂರು(ಅ.08): ದಸರಾ ಹೇಗೆ ಆಚರಿಸಬೇಕು ಎಂಬುದು ನನ್ನೊಬ್ಬನ ನಿರ್ಧಾರವಲ್ಲ. ಇದಕ್ಕೆಂದು ಹೈಪವರ್‌ ಕಮಿಟಿ ಇದೆ. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿರುವ ಹೈಪವರ್‌ ಕಮಿಟಿಯಲ್ಲಿ ಒಮ್ಮತದ ನಿರ್ಧಾರಕ್ಕೆ ಬಂದು ತೀರ್ಮಾನವನ್ನು ತೆಗೆದುಕೊಳ್ಳಲಾಗುತ್ತದೆ. ಆ ಬಳಿಕ ನಿರ್ಧಾರ ಹೇಳಲಾಗುತ್ತದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲ್ಲಿ ನಾನೊಬ್ಬನೇ ತೀರ್ಮಾನ ತೆಗೆದುಕೊಳ್ಳಲಾಗದು. 27ಕ್ಕೂ ಹೆಚ್ಚು ಮಂದಿ ಕಮಿಟಿಯಲ್ಲಿರುತ್ತಾರೆ ಎಂದು ಪರೋಕ್ಷವಾಗಿ ಬಿಜೆಪಿಯ ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ಗೆ ಟಾಂಗ್‌ ನೀಡಿದ್ದಾರೆ. 

ಮೈಸೂರು ಡಿಸಿ ದಿಢೀರ್ ವರ್ಗ : ಅ.14ಕ್ಕೆ ವಿಚಾ​ರ​ಣೆ

ಇಲ್ಲಿ ತೆಗೆದುಕೊಳ್ಳಲಾಗುವ ತೀರ್ಮಾನವನ್ನು ಅನುಷ್ಠಾನ ಮಾಡುವ ಹೊಣೆ ಇಲ್ಲಿನ ಜಿಲ್ಲಾಡಳಿತ ಹಾಗೂ ಉಸ್ತುವಾರಿ ಸಚಿವನಾಗಿ ನನ್ನದಾಗಿರುತ್ತದೆ. ಇಲ್ಲಿ ಯಾವುದೇ ಗೊಂದಲ ಮಾಡಿಕೊಳ್ಳುವುದು ಬೇಡ ಎಂದು ಪರೋಕ್ಷವಾಗಿ ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ಗೆ ಟಾಂಗ್‌ ನೀಡಿದರು.

ಪಕ್ಷದ ನಾಯಕರಾದ ಎಚ್‌.ವಿಶ್ವನಾಥ್‌ ಸೇರಿದಂತೆ ಎಲ್ಲರೂ ಅವರವರ ಅಭಿಪ್ರಾಯಗಳನ್ನು ತಿಳಿಸಬಹುದು. ಒಳ್ಳೆಯದಿದ್ದರೆ ನಾನು ಅದನ್ನು ಸ್ವಾಗತಿಸುತ್ತೇನೆ. ಅಂತಿಮವಾಗಿ ಎಲ್ಲ ತೀರ್ಮಾನವನ್ನು ಹೈಪವರ್‌ ಕಮಿಟಿ ತೆಗೆದುಕೊಳ್ಳುತ್ತದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. 
 

Follow Us:
Download App:
  • android
  • ios