ರಿಪಬ್ಲಿಕ್ ಆಫ್ ಭಾರತ್, ಬಿಜೆಪಿಯರಿಗೆ ಲಾಭ ಆಗುತ್ತದೆ ಅಂದ್ರೆ ಏನು ಬೇಕಾದರೂ ಮಾಡ್ತಾರೆ, ಜಾರಕಿಹೊಳಿ
ಕೆಪಿಸಿಸಿ ಕಾರ್ಯಾಧ್ಯಕ್ಷನಾಗಿ ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸಿದ್ದೇನೆ. ಈಗ ಸಚಿವನಾಗಿದ್ದು, ಎಲ್ಲಾ ಕೆಲಸಗಳನ್ನು ಒಬ್ಬನೇ ಮಾಡಲು ಸಾಧ್ಯವಿಲ್ಲ. ಅದೇ ಕಾರಣ ಪಕ್ಷ ಸಂಘಟಿಸುವ ಹೊಸಬರಿಗೆ ಅವಕಾಶ ಕಲ್ಪಿಸಲು ಹೈಕಮಾಂಡ್ ಮುಂದೆ ಕಳೆದ ಎರಡು ತಿಂಗಳ ಮುಂಚೆಯೇ ಈ ವಿಷಯ ಪ್ರಸ್ತಾಪಿಸಿದ್ದೇನೆ: ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ(ಸೆ.06): ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಯನ್ನು ವಿಡಿಯೋದಲ್ಲಿ ನೋಡಿದ್ದೇನೆ. ಅವರು ತಮಿಳು ಭಾಷೆಯಲ್ಲಿ ಮಾಡನಾಡಿದ್ದಾರೆ. ನನಗೆ ತಮಿಳು ಬರಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉದಯನಿಧಿ ಸ್ಟಾಲಿನ್ ಹೇಳಿಕೆಯನ್ನು ಸಂಪೂರ್ಣ ಭಾಷಾಂತರ ಮಾಡಬೇಕು. ಅವರು ಯಾವ ಅರ್ಥದಲ್ಲಿ ಹೇಳಿದ್ದಾರೆ ಗೊತ್ತಿಲ್ಲ. ಆ ಹೇಳಿಕೆ ಬಗ್ಗೆ ಆಮೇಲೆ ಪ್ರತಿಕ್ರಿಯೆ ನೀಡುತ್ತೇನೆ ಎಂದರು.
ಸತೀಶ್ ಜಾರಕಿಹೊಳಿ ನನ್ನ ನಡುವಿನ ವಾರ್ ಬಗ್ಗೆ ಅವರನ್ನೇ ಕೇಳಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಹೊಸಬರನ್ನು ನೇಮಕ ಮಾಡುವ ಕುರಿತು ಪ್ರತಿಕ್ರಿಯಿಸಿದ ಅವರು, ಕೆಪಿಸಿಸಿ ಕಾರ್ಯಾಧ್ಯಕ್ಷನಾಗಿ ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸಿದ್ದೇನೆ. ಈಗ ಸಚಿವನಾಗಿದ್ದು, ಎಲ್ಲಾ ಕೆಲಸಗಳನ್ನು ಒಬ್ಬನೇ ಮಾಡಲು ಸಾಧ್ಯವಿಲ್ಲ. ಅದೇ ಕಾರಣ ಪಕ್ಷ ಸಂಘಟಿಸುವ ಹೊಸಬರಿಗೆ ಅವಕಾಶ ಕಲ್ಪಿಸಲು ಹೈಕಮಾಂಡ್ ಮುಂದೆ ಕಳೆದ ಎರಡು ತಿಂಗಳ ಮುಂಚೆಯೇ ಈ ವಿಷಯ ಪ್ರಸ್ತಾಪಿಸಿದ್ದೇನೆ ಎಂದು ಹೇಳಿದರು.
ಕೇಂದ್ರ ಸರ್ಕಾರ ದೇಶಕ್ಕೆ ರಿಪಬ್ಲಿಕ್ ಆಫ್ ಭಾರತ್ ಎಂದು ಮರುನಾಮಕರಣ ಮಾಡುವ ಬಗ್ಗೆ ಪ್ರತಿಕ್ರಿಯಿಸಿ, ಭಾರತವನ್ನು ಸಂವಿಧಾನದಲ್ಲಿ ಇಂಡಿಯಾ ಎಂದೇ ಉಲ್ಲೇಖಿಸಲಾಗಿದ್ದು, ಇಂಡಿಯಾ ಎಂಬುದು ಎಲ್ಲರೂ ಒಪ್ಪಿರುವ ಹೆಸರಾಗಿದೆ. ಭಾರತ ಎಂದು ಮರುನಾಮಕರಣ ಮಾಡುವ ಅಗತ್ಯ ಇಲ್ಲ. ಬಿಜೆಪಿಯವರು ಲಾಭ ಆಗುತ್ತದೆ ಅಂದರೆ ಏನು ಬೇಕಾದರೂ ಮಾಡುತ್ತಾರೆ ಎಂದು ಆರೋಪಿಸಿದರು.