Asianet Suvarna News Asianet Suvarna News

ಬಿಜೆಪಿಯಿಂದ ಮನೆ ಬಾಗಿಲಿಗೆ ಸರ್ಕಾರ: ಸಚಿವ ಮುನೇನಕೊಪ್ಪ

*   ಹುಬ್ಬಳ್ಳಿಯಲ್ಲಿ ನವಭಾರತ ಮೇಳಕ್ಕೆ ಚಾಲನೆ 
*   ಹುಬ್ಬಳ್ಳಿ- ಧಾರವಾಡ ಹಿಂದೆಂದಿಗಿಂತಲೂ ವೇಗವಾಗಿ ಅಭಿವೃದ್ಧಿ
*  ಪ್ರಧಾನಿ ಮೋದಿ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿರುವ ರಾಜ್ಯ ಸರ್ಕಾರ 

Minister Shankar Patil Munenkoppa Talks Over BJP Government grg
Author
Bengaluru, First Published Oct 4, 2021, 10:40 AM IST
  • Facebook
  • Twitter
  • Whatsapp

ಹುಬ್ಬಳ್ಳಿ(ಅ.04): ಪ್ರಧಾನಿ ನರೇಂದ್ರ ಮೋದಿ(Narendra Modi) ನೇತೃತ್ವದ ಕೇಂದ್ರ ಸರ್ಕಾರ ಕಳೆದ ಏಳು ವರ್ಷಗಳಲ್ಲಿ ಅಗಾಧ ಸಾಧನೆ ಮಾಡಿದ್ದು, ಜನರ ಮನೆ ಬಾಗಿಲಿಗೆ ಆಡಳಿತ ಕೊಂಡೊಯ್ದಿದೆ ಎಂದು ಜವಳಿ, ಸಕ್ಕರೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಶಂಕರಪಾಟೀಲ್‌ ಮುನೇನಕೊಪ್ಪ(Shankar Patil Munenkoppa) ಹೇಳಿದ್ದಾರೆ. 

ನಗರದ ಮೂರುಸಾವಿರ ಮಠದ ಸಭಾಂಗಣದಲ್ಲಿ ನವಭಾರತ ಮೇಳಕ್ಕೆ ಚಾಲನೆ ನೀಡಿ ಮಾತನಾಡಿ, ದೇಶದ ಹೆಮ್ಮೆಯ ಪ್ರಧಾನಿ ಮೋದಿ ಕುರಿತು ಜನತೆಗೆ ತಿಳಿಸಲು ಮೇಳ ಆಯೋಜನೆ ಮಾಡಲಾಗಿದೆ. ಮೋದಿ ಅವರ ಜೀವನಚರಿತ್ರೆಯನ್ನು ವಸ್ತು ಪ್ರದರ್ಶನದಲ್ಲಿ ಬಿಂಬಿಸಲಾಗಿದೆ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ(BJP) ಸರ್ಕಾರ ಇರುವುದು ಹೆಚ್ಚಿನ ಅಭಿವೃದ್ಧಿ ಸಾಧಿಸಲು ಅನುಕೂಲವಾಗಿದೆ ಎಂದರು. ಮುಂದಿನ ದಿನಗಳಲ್ಲಿ ಜನತೆ ಸಾಕಷ್ಟು ಅಭಿವೃದ್ಧಿಯನ್ನು ಕಾಣಲಿದ್ದಾರೆ ಎಂದರು.

ದೇಶಕ್ಕಾಗಿ ದುಡಿಯುತ್ತಿರುವ ಏಕೈಕ ಪಕ್ಷ ಬಿಜೆಪಿ: ಮುನೇನಕೊಪ್ಪ

ಶಾಸಕ ಅರವಿಂದ ಬೆಲ್ಲದ ಮಾತನಾಡಿ, ಬಿಜೆಪಿಯಿಂದಾಗಿ ಜನತೆಯ ದಶಕಗಳ ಕನಸು, ಅಭಿವೃದ್ಧಿ ಈಡೇರುತ್ತಿದೆ. ಹುಬ್ಬಳ್ಳಿ- ಧಾರವಾಡ ಹಿಂದೆಂದಿಗಿಂತಲೂ ವೇಗವಾಗಿ ಬದಲಾವಣೆಗಳನ್ನು ಕಾಣುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ರಾಜ್ಯ ಸರ್ಕಾರ ಮುನ್ನಡೆಯುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯವರ ಜೀವನವನ್ನು ಕಟ್ಟಿಕೊಡುವ ಹಾಗೂ ಕೇಂದ್ರ ಸರ್ಕಾರದ ಸಾಧನೆಯನ್ನು ತಿಳಿಸುವ ಫಲಕವನ್ನು ಪ್ರದರ್ಶಿಸಲಾಯಿತು. ಕಾರ್ಯಕರ್ತರು ಮೋದಿ ಅವರನ್ನು ಅಭಿನಂದಿಸಿ ಪತ್ರ ಅಭಿಯಾನ ನಡೆಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್‌ ಸದಸ್ಯ ಪ್ರದೀಪ ಶೆಟ್ಟರ್‌, ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ತಿಪ್ಪಣ್ಣ ಮಜ್ಜಗಿ ಸೇರಿದಂತೆ ಹಲವರಿದ್ದರು.
 

Follow Us:
Download App:
  • android
  • ios