ಕಾರವಾರ(ಡಿ.14): ಕೋಡಿಹಳ್ಳಿ ಚಂದ್ರಶೇಖರ ಸಾರಿಗೆ ಸಂಸ್ಥೆ ನೌಕರರ ಮುಷ್ಕರದಲ್ಲಿ ಅನಗತ್ಯ ಹಸ್ತಕ್ಷೇಪ ಮಾಡಿರುವುದು ಸರಿಯಲ್ಲ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್‌ ಹರಿಹಾಯ್ದಿದ್ದಾರೆ. 

ಭಾನುವಾರ ಈ ಕುರಿತು ಪ್ರಕ​ಟಣೆ ನೀಡಿ​ರುವ ಅವರು, ಕೋಡಿಹಳ್ಳಿ ಚಂದ್ರಶೇಖರ ಅನಗತ್ಯವಾಗಿ ಮೂಗು ತೂರಿಸುತ್ತಿದ್ದಾರೆ. ಅವರು ರಾಜ್ಯದಲ್ಲಿ ಶಾಂತಿ ಕದಡುವ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ಇದು ಖಂಡನೀಯ ಎಂದು ಹರಿಹಾಯ್ದಿದ್ದಾರೆ. 

ಪಟೇಲರ ಸಂಪುಟದಲ್ಲಿ ಪ್ರಮುಖ ಖಾತೆ ನಿರ್ವಹಿಸಿದ್ದ ಮಾಜಿ ಸಚಿವ ಜೈವಂತ ನಿಧನ

ಕೋಡಿಹಳ್ಳಿ ಚಂದ್ರಶೇಖರ ಅವರ ಮಾತುಗಳನ್ನು ಕೇಳಿ ಯಾವುದೇ ಇಲಾಖೆ ಮುಷ್ಕರದಲ್ಲಿ ಭಾಗವಹಿಸಬಾರದು ಎಂದು ಸಚಿವ ಶಿವರಾಮ ಹೆಬ್ಬಾರ್‌ ತಿಳಿಸಿದ್ದಾರೆ.