ಹಿರಿಯೂರಿನಲ್ಲಿ 6 ಕೋಟಿ ವೆಚ್ಚದಲ್ಲಿ ಬಸ್ ಡಿಪೋ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿದ ಸಚಿವ ಶ್ರೀರಾಮುಲು
ಸಾರಿಗೆ ಇಲಾಖೆಯಲ್ಲಿ ಸಂಪೂರ್ಣ ಬದಲಾವಣೆ ತರಲು ಚಿಂತಿಸಲಾಗಿದೆ. ಪರಿಸರ ಸ್ನೇಹಿ ವಿದ್ಯುತ್ ಚಾಲಿತ ಬಸ್ ಖರೀದಿ ಮುನ್ನುಡಿ ಬರೆಯಲಾಗಿದೆ. 2030ರ ವೇಳೆಗೆ ಹಳೆಯ 30 ಸಾವಿರ ಸಾರಿಗೆ ಬಸ್‌ಗಳಿಗೆ ಬದಲಾಗಿ ವಿದ್ಯುತ್ ಚಾಲಿತ ಬಸ್‌ಗಳನ್ನು ಖರೀದಿಸಲಾಗುವುದು ಎಂದು ಸಚಿವ ಶ್ರೀರಾಮುಲು ಮಾಹಿತಿ ನೀಡಿದ್ದಾರೆ.
ವರದಿ: ಕಿರಣ್ಎಲ್ ತೊಡರನಾಳ್ ಏಷ್ಯಾನೆಟ್ ಸುವರ್ಣ ನ್ಯೂಸ್
ಚಿತ್ರದುರ್ಗ (ಡಿ.6): ಸಾರಿಗೆ ಇಲಾಖೆಯಲ್ಲಿ ಸಂಪೂರ್ಣ ಬದಲಾವಣೆ ತರಲು ಚಿಂತಿಸಲಾಗಿದೆ. ಪರಿಸರ ಸ್ನೇಹಿ ವಿದ್ಯುತ್ ಚಾಲಿತ ಬಸ್ ಖರೀದಿ ಮುನ್ನುಡಿ ಬರೆಯಲಾಗಿದೆ. 2030ರ ವೇಳೆಗೆ ಹಳೆಯ 30 ಸಾವಿರ ಸಾರಿಗೆ ಬಸ್‌ಗಳಿಗೆ ಬದಲಾಗಿ ವಿದ್ಯುತ್ ಚಾಲಿತ ಬಸ್‌ಗಳನ್ನು ಖರೀದಿಸಲಾಗುವುದು. ಜನವರಿ ಅಂತ್ಯದ ವೇಳೆಗೆ 50 ವಿದ್ಯುತ್ ಚಾಲಿತ, 600 ಡೀಸೆಲ್ ಚಾಲಿತ, 60 ವೋಲ್ವೋ ಬಸ್ ಖರೀದಿಸಾಗುತ್ತಿದೆ ಎಂದು ಸಾರಿಗೆ ಮತ್ತು ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಹೇಳಿದರು. ಹಿರಿಯೂರು ನಗರದ ಹುಳಿಯಾರು ರಸ್ತೆಯ ತಾಲ್ಲೂಕು ಕ್ರೀಡಾಂಗಣದ ಹತ್ತಿರ ಮಂಗಳವಾರ ನೂತನ ಬಸ್ ಘಟಕದ ಶಂಕುಸ್ಥಾಪನೆ ಹಾಗೂ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಕೇಂದ್ರ ಸರ್ಕಾರ ರಸ್ತೆ ಸುರಕ್ಷತೆ ಅಡಿ ರೂ.250 ಕೋಟಿ ಅನುದಾನ ನೀಡಿದೆ. ರಾಜ್ಯಾದ್ಯಂತ ರಸ್ತೆ ಅಪಘಾತ ತಡೆಯಲು ಬ್ಲಾಕ್ ಸ್ಪಾಟ್ ಗುರುತಿಸಲಾಗುವುದು. ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ನೀಡಲಾಗಿದೆ ಎಂದರು. ಹಿರಿಯೂರು ಶಾಸಕರಾದ ಸಹೋದರಿ ಪೂರ್ಣಿಮಾ ಶ್ರೀನಿವಾಸ್ ಬಹಳ ದಿನಗಳಿಂದ ಬಸ್ ಡಿಪೋ ನಿರ್ಮಾಣಕ್ಕೆ ದುಂಬಾಲು ಬಿದ್ದಿದ್ದರು. ಇಂದು ರೂ. 6 ಕೋಟಿ ವೆಚ್ಚದಲ್ಲಿ ಬಸ್ ಡಿಪೋ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ.
ಶೀಘ್ರದಲ್ಲೇ ಸಾರಿಗೆ ಸಿಬ್ಬಂದಿಗೆ ವೇತನ ಪರಿಷ್ಕರಣೆ
ಸಾರಿಗೆ ನೌಕರರ ಬಹುದಿನದ ಬೇಡಿಕೆಯಾದ ವೇತನ ಪರಿಷ್ಕರಣೆ ಸಂಬಂಧವಾಗಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಲಾಗಿದೆ. ಮುಖ್ಯಮಂತ್ರಿ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಆದಷ್ಟು ಶೀಘ್ರವಾಗಿ ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.
ಈ ಹಿಂದೆ 2015-16 ನೇ ಸಾಲಿನಲ್ಲಿ ವೇತನ ಪರಿಷ್ಕರಣೆಯಾಗಿತ್ತು. ಆದರೆ ಇಲ್ಲಿಯವರೆಗೂ ವೇತನ ಪರಿಷ್ಕರಣೆ ಆಗಿರುವುದಿಲ್ಲ. ಸಾರಿಗೆ ಸಿಬ್ಬಂದಿ ಯೂನಿಯನ್‌ಗಳು ಈ ಕುರಿತು ಗಮನ ಸೆಳೆದಿವೆ. ಸರ್ಕಾರ ಸಿಬ್ಬಂದಿ ವೇತನ ಪರಿಷ್ಕರಣೆ ಸಿದ್ದವಿದೆ. ಸರ್ಕಾರದಿಂದ ಸಾರಿಗೆ ಸಿಬ್ಬಂದಿಗೆ ರೂ.1ಕೋಟಿ ಮೊತ್ತದ ಜೀವವಿಮೆ ನೀಡಲಾಗಿದೆ. ನೌಕರರು ಕರ್ತವ್ಯದ ವೇಳೆ ಅಥವಾ ಅನ್ಯ ಸಂದರ್ಭದಲ್ಲಿ ಮೃತರಾದರೆ ವಿಮೆ ಪಾವತಿಸಲಾಗುವುದು ಎಂದರು.
ದಾವಣಗೆರೆ: ಬಸ್ ಡಿಪೋದಿಂದಾಗಿ ಪ್ರತಿ ಗ್ರಾಮಕ್ಕೂ ಸಾರಿಗೆ ಸಂಪರ್ಕ
ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳ ಹೇಗೆ ಮಾಡಬೇಕು ಎನ್ನುವುದು ಶಾಸಕ ಮಾಡಾಳು ವಿರೂಪಾಕ್ಷಪ್ಪರಿಂದ ಕಲಿತಿದ್ದು ಸಾರ್ವಜನಿಕರ ಕೆಲಸ ನನ್ನ ಕೆಲಸವೆಂದು ಮಾಡುವವರು ನಿಮ್ಮ ಶಾಸಕರಾಗಿರುವುದು ನಿಮ್ಮ ಪೂರ್ವಜನ್ಮದ ಪುಣ್ಯ ಎಂದು ಹೊಳಲ್ಕೆರೆ ಶಾಸಕ, ಕೆಎಸ್‌ಆರ್‌ಟಿಸಿ ಅಧ್ಯಕ್ಷ ಎಂ.ಚಂದ್ರಪ್ಪ ಹೇಳಿದರು.
ಹೊಸವರ್ಷದಿಂದ ಈ ನಗರದಲ್ಲಿ ಓಡಲಿದೆ ಡಬಲ್ ಡೆಕ್ಕರ್ ಇ-ಬಸ್
ಚನ್ನಗಿರಿ ತಾಲೂಕಿನ ಅಜ್ಜಿಹಳ್ಳಿ ಗ್ರಾಮದ ಬಳಿ 8ಕೋಟಿ ರು.ವೆಚ್ಚದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಘಟಕದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ ಸರ್ಕಾರದಿಂದ ಹೇಗೆ ಅನುದಾನ ತಂದು ಅಭಿವೃದ್ಧಿಗೊಳಿಸಬೇಕು ಎಂಬ ಬಗ್ಗೆ ತಿಳಿದಿರುವ ವಿರೂಪಾಕ್ಷಪ್ಪ ಕ್ಷೇತ್ರದಲ್ಲಿ ಅಭಿವೃದ್ಧಿಯ ಪರ್ವವನ್ನೇ ಪ್ರಾರಂಭಿಸಿದ್ದಾರೆ ಎಂದರು. ದಾವಣಗೆರೆಯಲ್ಲಿ 128 ಕೋಟಿ ರು. ವೆಚ್ಚದಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ನಿರ್ಮಿಸುತ್ತಿದ್ದು, ಚಿತ್ರದುರ್ಗದಲ್ಲಿ 75 ಕೋಟಿ, ತುಮಕೂರಿನಲ್ಲಿ 100 ಕೋಟಿ ರು.ವೆಚ್ಚದಲ್ಲಿ ಬಸ್ ನಿಲ್ದಾಣ ನಿರ್ಮಿಸಲಾಗುತ್ತಿದೆ. ಚನ್ನಗಿರಿಯಲ್ಲಿ ಡಿಪೋ ನಿರ್ಮಾಣವಾದರೆ ತಾಲೂಕಿನ ಪ್ರತಿ ಗ್ರಾಮಗಳಿಗೂ ಸಾರಿಗೆ ಸಂಪರ್ಕ ದೊರೆಯಲಿದೆ ಎಂದರು.
ಶಾಲಾ ಮಕ್ಕಳಿಗೆ ಖಾಸಗಿ ಸಹಭಾಗಿತ್ವದಲ್ಲಿ ಬಸ್ ಸೌಲಭ್ಯ, ನನ್ನ ಕ್ಷೇತ್ರದಿಂದಲೇ ಆರಂಭಿಸುವ ಉದ್ದೇಶ: ಸಿಎಂ ಬೊಮ್ಮಾಯಿ
ಈ ಹಿಂದೆ 2008ರಲ್ಲಿ ಶಾಸಕನಾಗಿದ್ದಾಗಲೇ ಕೆಎಸ್‌ಆರ್‌ಟಿಸಿ ಡಿಪೋಗೆ ಸರ್ಕಾರದಿಂದ ಅನುದಾನ ಮಂಜೂರಾಗಿತ್ತು ಆದರೆ ಜಾಗದ ಕೊರತೆಯಿಂದ ಬಂದ ಹಣ ಸರ್ಕಾರಕ್ಕೆ ವಾಪಸ್ ಹೋಗಿತು. ಆದರೆ ಪ್ರಸ್ತುತ ಸಾರಿಗೆ ನಿಗಮದ ಅಧ್ಯಕ್ಷರ ಸಹಕಾರದಿಂದ 8 ಕೋಟಿ ರು.ವೆಚ್ಚದಲ್ಲಿ 4ಎಕರೆ ಪ್ರದೇಶದಲ್ಲಿ ಡಿಪೋ ನಿರ್ಮಿಸುತ್ತಿರುವುದು ಸಂತಸ ತಂದಿದೆ ಎಂದು ಮಾಡಾಳು ವಿರೂಪಾಕ್ಷಪ್ಪ ಹೇಳಿದರು.