Tumakuru Accident: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚನೆ: ಸಚಿವ ಶ್ರೀರಾಮುಲು
ಚಾಲಕನ ನಿರ್ಲಕ್ಷ್ಯ ಮತ್ತು ರಸ್ತೆ ತಿರುವಿನಲ್ಲಿ ಅಜಾಗರೂಕತೆಯಿಂದ ಚಾಲನೆ ಮಾಡಿರೋದೇ ಪಾವಗಡ ಬಸ್ ಅಪಘಾತಕ್ಕೆ ಕಾರಣವೆಂದು ಮೇಲ್ನೋಟಕ್ಕೆ ಗೊತ್ತಾಗಿದೆ. ಘಟನೆಯಲ್ಲಿ ಯಾರೆಲ್ಲ ತಪ್ಪಿತಸ್ಥರು ಇದ್ದಾರೋ ಶಿಕ್ಷೆ ಜೊತೆಗೆ ಅಧಿಕಾರಿಗಳನ್ನು ಅಮಾನತ್ತು ಮಾಡುತ್ತೇವೆ ಎಂದು ಸಚಿವ ಶ್ರೀರಾಮುಲು ಸುವರ್ಣ ನ್ಯೂಸ್‌ಗೆ ಹೇಳಿದ್ದಾರೆ.
ಬಳ್ಳಾರಿ (ಮಾ.19): ಚಾಲಕನ ನಿರ್ಲಕ್ಷ್ಯ ಮತ್ತು ರಸ್ತೆ ತಿರುವಿನಲ್ಲಿ ಅಜಾಗರೂಕತೆಯಿಂದ ಚಾಲನೆ ಮಾಡಿರೋದೇ ಪಾವಗಡ ಬಸ್ ಅಪಘಾತಕ್ಕೆ (Accident) ಕಾರಣವೆಂದು ಮೇಲ್ನೋಟಕ್ಕೆ ಗೊತ್ತಾಗಿದೆ. ಘಟನೆಯಲ್ಲಿ ಯಾರೆಲ್ಲ ತಪ್ಪಿತಸ್ಥರು ಇದ್ದಾರೋ ಶಿಕ್ಷೆ ಜೊತೆಗೆ ಅಧಿಕಾರಿಗಳನ್ನು ಅಮಾನತ್ತು ಮಾಡುತ್ತೇವೆ ಎಂದು ಸಚಿವ ಶ್ರೀರಾಮುಲು (Sriramulu) ಸುವರ್ಣ ನ್ಯೂಸ್‌ಗೆ ಹೇಳಿದ್ದಾರೆ. ಇದೊಂದು ದುರದೃಷ್ಟಕರ ಘಟನೆಯಾಗಿದೆ ಸದ್ಯ ಘಟನೆಯಲ್ಲಿ 8 ಜನರ ಸಾವಾಗಿದೆ 25 ಜನರಿಗೆ ಗಾಯವಾಗಿದೆ. ಹಿರಿಯ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿದ್ದೆನೆ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದ್ದೇನೆ ಎಂದು ಅವರು ಹೇಳಿದ್ದಾರೆ.
ಬಸ್ ಫಿಟ್ನೆಸ್ ಬಗ್ಗೆ ಅನುಮಾನ: ಇನ್ನೂ ಬಸ್ಸಿನ ಪರ್ಮಿಟ್ ಮತ್ತು ಫಿಟ್ನೆಸ್ ಆಗಿತ್ತೇ ಅನ್ನೋ ಬಗ್ಗೆ ಅನುಮಾನ ಇದೆ. ಈ ಬಗ್ಗೆ ಪರಿಶೀಲಿಸಲಾಗ್ತಿದೆ. ಮೇಲ್ನೋಟಕ್ಕೆ ಓವರ್ ಲೋಡ್ ಮತ್ತು ಅತಿ ವೇಗ ಮತ್ತು ಟಾಪ್ ಮೇಲೆ ಜನರು ಕೂಡಿಸಿರೋದೇ ಘಟನೆಗೆ ಕಾರಣವಾಗಿದೆ. ಹೀಗಾಗಿ ಎಲ್ಲ ಆಯಾಮದಿಂದ ತನಿಕೆ ಮಾಡಲಾಗುತ್ತಿದೆ..
ಪ್ರೈವೇಟ್ ವಾಹನಕ್ಕೆ ಕಡಿವಾಣ: ಘಟನೆ ಬಗ್ಗೆ ಎಚ್ಚತ್ತಿರೋ ಸಾರಿಗೆ ಇಲಾಖೆ ಪಾವಗಡ ವ್ಯಾಪ್ತಿಯ ಎಲ್ಲ ಖಾಸಗಿ ಬಸ್ ಪರವಾನಗಿ ರದ್ದು ಮಾಡಲು ಮುಂದಾಗಿದೆ. ಅಲ್ಲದೇ ಆ ಭಾಗದಲ್ಲಿ ಹೆಚ್ಚು ಹೆಚ್ಚು ಸರ್ಕಾರಿ ಬಸ್ ಬಿಡೋ ಕೆಲಸ ಮಾಡಲಾಗುತ್ತದೆ ಎಂದು ಸಾರಿಗೆ ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.
ರಸ್ತೆ ಗುಂಡಿಯಿಂದ ಸಂಭವಿಸುವ ಅಪಘಾತಕ್ಕೆ ಬಿಬಿಎಂಪಿ ಹೊಣೆ: ಪರಿಹಾರ ಕೊಡ್ತೀವಿ ಅಂದ್ರೂ ಅರ್ಜಿ ಬರ್ತಿಲ್ಲ!
ಪರಿಹಾರದ ಬಗ್ಗೆ ಚರ್ಚೆ: ಇನ್ನೂ ಯಾದಗಿರಿಗೆ ಹೋಗೋ ಮಾರ್ಗ ಮಧ್ಯೆ ಜಿಂದಾಲ್ ಏರ್ಪೋರ್ಟ್‌ನಲ್ಲಿ ಮುಖ್ಯಮಂತ್ರಿ ಬೊಮ್ಮಯಿ ಭೇಟಿಯಾಗಿರೋ ಶ್ರೀರಾಮುಲು ಘಟನೆ ಬಗ್ಗೆ ವಿವರಣೆ ನೀಡಿದ್ದಾರೆ. ಪರಿಹಾರ ಕುರಿತಂತೆ ಚರ್ಚೆ ಮಾಡಿದ್ದು, ಶೀಘ್ರದಲ್ಲೇ ಪರಿಹಾರ ಘೋಷಣೆ ಮಾಡ್ತಾರೆ ಎನ್ನಲಾಗ್ತಿದೆ..
ಅಪಘಾತದಲ್ಲಿ ಮಡಿದ ಕುಟುಂಬಸ್ಥರಿಗೆ ದೊಡ್ಡ ಮೊತ್ತದ ಪರಿಹಾರ ನೀಡಿ: ರಾಜ್ಯದಲ್ಲಿ ಇಂದು(ಶನಿವಾರ) ಮೂರು ಕಡೆ ಅವಘಡಗಳು ಸಂಭವಿಸಿವೆ. ಬಸ್ ದುರಂತದಲ್ಲಿ 8 ರಿಂದ 10 ಜನರು ಸಾವನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನೂ ಹಲವರ ಸ್ಥಿತಿ ಚಿಂತಾಜನಕವಾಗಿದೆ. ಸರ್ಕಾರ ಆದಷ್ಟು ಬೇಗ ಸ್ಥಳಕ್ಕೆ ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳನ್ನ ಕಳಿಸಿ ಮಾಹಿತಿ ಕಲೆ ಹಾಕಬೇಕು. ದುರಂತದಲ್ಲಿ ಸಾವಿಗೀಡಾಗಿದ ಕುಟುಂಬಸ್ಥರಿಗೆ ದೊಡ್ಡ ಮಟ್ಟದಲ್ಲಿ ಪರಿಹಾರ ನೀಡಬೇಕು ಅಂತ ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಆಗ್ರಹಿಸಿದ್ದಾರೆ.
ಇಂದು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕದುರಮಂಗಲದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಾವಗಡ ಅತ್ಯಂತ ಬರಗಾಲ ಪ್ರದೇಶವಾಗಿದೆ. ಆ ಜನರು ಕೂಲಿ ನಾಲಿ ಮಾಡಿಕೊಂಡು ಜೀವನ ಸಾಗಿಸುತ್ತಾರೆ. ಅವರಿಗೆ ಹೆಚ್ಚು ಪರಿಹಾರ ನೀಡಬೇಕು, ಅಲ್ಲದೇ ಉಡುಪಿ ಹಾಗೂ ಬಳ್ಳಾರಿಯಲ್ಲಿ ಆ್ಯಕ್ಸಿಜನ್ ಸ್ಫೋಟಗೊಂಡಿದೆ. ಇದರ ಬಗ್ಗೆ ಸರ್ಕಾರ ಗಮನ ಹರಿಸಿ ದೊಡ್ಡ ಮಟ್ಟದಲ್ಲಿ ನೊಂದಿರುವವರಿಗೆ ನೆರವು ನೀಡಬೇಕು ಕುಮಾರಸ್ವಾಮಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಕಂದಕಕ್ಕೆ ಉರುಳಿ ಬಿದ್ದ ಖಾಸಗಿ ಬಸ್: ಚಾಲಕನ ನಿಯಂತ್ರಣ ತಪ್ಪಿದ ಬಸ್‌ವೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 8 ಮಂದಿ ಮೃತಪಟ್ಟು 25ಕ್ಕೂ ಹೆಚ್ಚು ಜನರಿಗೆ ಗಾಯಗಳಾದ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ಇಂದು(ಶನಿವಾರ) ನಡೆದಿದೆ. ಮೃತಪಟ್ಟವರ ಹೆಸರು, ವಿಳಾಸ ಇನ್ನೂ ತಿಳಿದು ಬಂದಿಲ್ಲ. ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಗಾಯಾಳುಗಳನ್ನ ಪಾವಗಡದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
Road Accident: ಮರಣದ ಮನೆಗೆ ಹೋಗಿದ್ದವರೆ ಮಸಣಕೆ.. ಬೆಳ್ತಂಗಡಿ ಭೀಕರ ಅಪಘಾತ, ಸಹೋದರರ ದುರ್ಮರಣ
ಖಾಸಗಿ ಬಸ್ ವೈ.ಎನ್ ಹೊಸಕೋಟೆಯಿಂದ ಪಾವಗಡಕ್ಕೆ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಈ ದರ್ಘಟನೆ ಸಂಭವಿಸಿದೆ. ದುರ್ಘಟನೆಯಲ್ಲಿ ಗಾಯಾಳುಗಳನ್ನ ಸ್ಥಳೀಯರು ರಕ್ಷಿಸಿ ಆಸ್ಪತ್ರೆ ದಾಖಲಿಸುವ ವ್ಯವಸ್ಥೆ ಮಾಡುತ್ತಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಪಾವಗಡ ಪೊಲೀಸರು ದೌಡಾಯಿಸಿದ್ದಾರೆ. ಬಸ್‌ನಲ್ಲಿ 80ಕ್ಕೂ ಹಚ್ಚು ಜನರು ಪ್ರಯಾಣಿಸುತ್ತಿದ್ದರು. ಬಸ್‌ನ ಟಾಪ್ ಮೇಲೂ ಕೂಡ ಕುಳಿತಿದ್ದರು ಎಂದು ತಿಳಿದು ಬಂದಿದೆ. ಬಸ್ ಪಲ್ಟಿಯಾಗುತ್ತಿದ್ದಂತೆ ಚಾಲಕ ಹಾಗೂ ನಿರ್ವಾಹಕ ಪರಾರಿಯಾಗಿದ್ದಾರೆ. ವೈ.ಎನ್ ಹೊಸಕೋಟೆ ಮೂಲದ ಬಸ್ ಇದಾಗಿದ್ದು ಬಸ್ ಮಾಲೀಕನ ಹೆಸರು ಶ್ರೀನಿವಾಸ್ ಅಂತ ತಿಳಿದು ಬಂದಿದೆ.