ಸಿಂಧನೂರು(ಡಿ.26): ವಾಲ್ಮೀಕಿ ಸಮಾಜಕ್ಕೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು. ಇಲ್ಲದಿದ್ದರೇ ಶಾಸಕರೆಲ್ಲರೂ ವಾಲ್ಮೀಕಿ ಸಮಾಜದ ಸ್ವಾಮೀಜಿ ಹೇಳಿದಂತೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿದ್ದೇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ. 

ಉಪಮುಖ್ಯಮಂತ್ರಿ ಸ್ಥಾನದ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಶ್ರೀರಾಮುಲು, ಉಪಮುಖ್ಯಮಂತ್ರಿ ಸ್ಥಾನ ರಮೇಶ್‌ ಜಾರಕಿಹೊಳಿ ಸೇರಿದಂತೆ ವಾಲ್ಮೀಕಿ ಸಮುದಾಯದ ಯಾರಿಗೆ ನೀಡರೂ ಸ್ವಾಗತಿಸುತ್ತೇನೆ. ಇಲ್ಲದಿದ್ದರೆ ಸಮಾಜದ ಸ್ವಾಮೀಜಿ ಹೇಳಿದಂತೆ ಶಾಸಕರ ಸ್ಥಾನಕ್ಕೆ ರಾಜೀನಾಮೆ ನೀಡಲು ಬದ್ಧರಾಗಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ನನಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂಬುದು ಜನರ ಒತ್ತಾಸೆಯಾಗಿದೆ. ಆದರೆ, ನಿರ್ಧಾರ ಕೈಗೊಳ್ಳುವುದು ಹೈಕಮಾಂಡ್‌ಗೆ ಬಿಟ್ಟದ್ದು. ಏನೇ ಜವಾಬ್ದಾರಿ ನೀಡಿದರೂ ಸಮರ್ಥವಾಗಿ, ತತ್ವಕ್ಕೆ ಬದ್ಧನಾಗಿ ಕಾರ್ಯ ನಿರ್ವಹಿಸುತ್ತೇನೆ ಎಂದು ಹೇಳಿದರು.