ಸಹಕಾರ ಕ್ಷೇತ್ರದ ಬ್ಯಾಂಕ್‌ಗಳ ಸಾಲ ಮನ್ನಾ, ಬಡ್ಡಿ ಮನ್ನಾ ಇಲ್ಲ| ಈ ರೀತಿಯ ಯಾವ ಪ್ರಸ್ತಾವನೆಯೂ ನಮ್ಮ ಮುಂದೆ ಇಲ್ಲ| ಇಂದಿನ ಪರಿಸ್ಥಿತಿ ನಿಭಾಯಿಸುವುದು ಅಷ್ಟೇ ನಮ್ಮ ಗುರಿ. ತಾಂತ್ರಿಕ ಸಲಹಾ ಸಮಿತಿ ಸಲಹೆಯಂತೆ ಜನತಾ ಕರ್ಫ್ಯೂ: ಸೋಮಶೇಖರ್|
ಮೈಸೂರು(ಏ.28): ರಾಜ್ಯದಲ್ಲಿ ಜನತಾ ಕರ್ಫ್ಯೂ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ವಲಯಕ್ಕೂ ಯಾವ ಪ್ಯಾಕೇಜ್ ಬಗ್ಗೆ ಚರ್ಚೆ ಆಗಿಲ್ಲ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸ್ಪಷ್ಟಪಡಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಹಕಾರ ಕ್ಷೇತ್ರದ ಬ್ಯಾಂಕ್‌ಗಳ ಸಾಲ ಮನ್ನಾ, ಬಡ್ಡಿ ಮನ್ನಾ ಇಲ್ಲ. ಈ ರೀತಿಯ ಯಾವ ಪ್ರಸ್ತಾವನೆಯೂ ನಮ್ಮ ಮುಂದೆ ಇಲ್ಲ ಎಂದು ಸ್ಪಷ್ಪಡಸಿದ್ದಾರೆ.
14 ದಿನ ಕರ್ನಾಟಕ ಲಾಕ್‌ಡೌನ್: ಏನಿರುತ್ತೆ? ಏನಿರಲ್ಲ? ಇಲ್ಲಿದೆ ಮಾಹಿತಿ
ಇಂದಿನ ಪರಿಸ್ಥಿತಿ ನಿಭಾಯಿಸುವುದು ಅಷ್ಟೇ ನಮ್ಮ ಗುರಿ. ತಾಂತ್ರಿಕ ಸಲಹಾ ಸಮಿತಿ ಸಲಹೆಯಂತೆ ಜನತಾ ಕರ್ಫ್ಯೂ ಮಾಡಲಾಗಿದೆ. ಇದು ಜನರ ಹಿತದೃಷ್ಟಿಯಿಂದ ತೆಗೆದುಕೊಂಡ ಕ್ರಮ ಎಂದು ಅವರು ಹೇಳಿದರು.
