ಸುಳ್ಳು ಹೇಳುವುದೇ ಪ್ರತಿಪಕ್ಷಗಳ ಕಾಯಕ: ಡಾ.ಸುಧಾಕರ್‌

 ಬಿಜೆಪಿ ವಿರುದ್ಧ ಜನರಿಗೆ ತಪ್ಪು ತಿಳಿವಳಿಕೆ ಮೂಡಿಸುವ ಪ್ರಯತ್ನ ನಿರಂತರವಾಗಿ ನಡೆದಿದೆ. ಸುಳ್ಳು ಆರೋಪ ಮಾಡುವುದನ್ನೇ ವಿರೋಧ ಪಕ್ಷಗಳು ಕಾಯಕ ಮಾಡಿಕೊಂಡಿವೆ ಎಂದು ಕಾಂಗ್ರೆಸ್‌, ಜೆಡಿಎಸ್‌ ವಿರುದ್ಧ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ವಾಗ್ದಾಳಿ ನಡೆಸಿದರು.

Minister Sudhakar Slams Opposition Parties snr

 ಚಿಕ್ಕಬಳ್ಳಾಪುರ (ಅ.10): ಬಿಜೆಪಿ ವಿರುದ್ಧ ಜನರಿಗೆ ತಪ್ಪು ತಿಳಿವಳಿಕೆ ಮೂಡಿಸುವ ಪ್ರಯತ್ನ ನಿರಂತರವಾಗಿ ನಡೆದಿದೆ. ಸುಳ್ಳು ಆರೋಪ ಮಾಡುವುದನ್ನೇ ವಿರೋಧ ಪಕ್ಷಗಳು ಕಾಯಕ ಮಾಡಿಕೊಂಡಿವೆ ಎಂದು ಕಾಂಗ್ರೆಸ್‌, ಜೆಡಿಎಸ್‌ ವಿರುದ್ಧ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ವಾಗ್ದಾಳಿ ನಡೆಸಿದರು.

ತಾಲೂಕಿನ ಮುದ್ದೇನಹಳ್ಳಿಯಲ್ಲಿ ಭಾನುವಾರ ಆಯೋಜಿಸಿದ್ದ ವಾಲ್ಮೀಕಿ ಜಯಂತ್ಯುತ್ಸವದಲ್ಲಿ (Valmiki Jayanthi ಪಾಲ್ಗೊಂಡು ಮಾತನಾಡಿದ ಅವರು, ಕಳೆದ 40 ವರ್ಷಗಳಿಂದ ಪರಿಶಿಷ್ಟಪಂಗಡದ ಸಮುದಾಯ ನಿರಂತರ ಹೋರಾಟ ಮಾಡುತ್ತಲೇ ಇತ್ತು. ಆದರೆ ಈ ಹಿಂದೆ ಬಂದ ಯಾವುದೇ ಸರ್ಕಾರಗಳು ಇತ್ತ ಗಮನ ಹರಿಸಿದ ಉದಾಹರಣೆ ಇಲ್ಲ ಎಂದು ಸಚಿವ ಸುಧಾಕರ್‌ ಹೇಳಿದರು.

ವಾಲ್ಮೀಕಿ ಹೆಸರಿನಲ್ಲಿ ಹಲವು ಯೋಜನೆ

ಎಸ್‌ಸಿ (SC)  ಮತ್ತು ಎಸ್‌ಟಿ ಸಮುದಾಯಗಳ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಕಂಕಣ ಬದ್ಧವಾಗಿದೆ ಎಂಬುದನ್ನು ಮೀಸಲಾತಿ ಹೆಚ್ಚಳ ಮಾಡುವ ಮೂಲಕ ತೋರಿಸಿದ್ದೇವೆ. ಎಸ್‌ಟಿ ಸಮುದಾಯದ ವಾಲ್ಮೀಕಿ ಜಯಂತಿ, ವಾಲ್ಮೀಕಿ ಪ್ರಶಸಿ, ವಾಲ್ಮೀಕಿ ಸಮುದಾಯ ಭವನ ನಿರ್ಮಾಣ, ಮಹರ್ಷಿ ವಾಲ್ಮೀಕಿ ಹೆಸರಿನಲ್ಲಿ ಅಭಿವೃದ್ಧಿ ನಿಗಮ ಸ್ಥಾಪಿಸಿದ್ದು ಬಿಜೆಪಿ. ಅಲ್ಲದೆ ಪರಿಶಿಷ್ಟವರ್ಗಗಳಿಗಾಗಿಯೇ ಪ್ರತ್ಯೇಕ ಇಲಾಖೆ ಮಾಡಲಾಗಿದೆ. ಎಲ್ಲವನ್ನೂ ಮಾಡಿರುವುದು ಬಿಜೆಪಿ ಸರ್ಕಾರವಾದರೆ ವಿಪಕ್ಷಗಳು ಬರೀ ಸುಳ್ಳು ಹೇಳುವುದನ್ನು ಕಾಯಕ ಮಾಡಿಕೊಡಿವೆ ಎಂದರು.

ಕಳೆದ 40 ವರ್ಷಗಳಿಂದ ನಿರಂತರ ಹೋರಾಟ ನಡೆಯುತ್ತಿದ್ದರೂ, ಕಾಂಗ್ರೆಸ್‌ ಸರ್ಕಾರ ಹಲವು ಬಾರಿ ಬಂದು ಹೋದರೂ ಮೀಸಲು ಸೌಲಭ್ಯ ನೀಡಲು ಮಾತ್ರ ಅವರಿಂದ ಸಾಧ್ಯವಾಗಿಲ್ಲ. ಆದರೆ ಬಿಜೆಪಿ ಸರ್ಕಾರ ಬಂದರೆ ಮೀಸಲಾತಿ ತೆಗೆಯುತ್ತಾರೆ, ಸಂವಿಧಾನ ಬದಲಿಸುತ್ತಾರೆ ಎಂದು ಆರೋಪಿಸುತ್ತಿದ್ದರು. ಇಂತಹ ಸುಳ್ಳು ಆರೋಪಗಳಿಗೆ ಸರ್ಕಾರ ತಕ್ಕ ಉತ್ತರ ನೀಡಿದೆ. ನ್ಯಾ. ನಾಗಮೋಹನ್‌ ದಾಸ್‌ ಅವರ ವರದಿಯನ್ನು ಸಂಪೂರ್ಣವಾಗಿ ಸಂಪುಟದಲ್ಲಿ ಒಪ್ಪಿಕೊಳ್ಳಲಾಗಿದೆ ಎಂದರು.

ಪರಿಶಿಷ್ಟರಿಗೆ ಮೀಸಲು ಹೆಚ್ಚಳ

ಪರಿಶಿಷ್ಟಜಾತಿ ಮತ್ತು ಪಂಗಡದ ಜನರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲು ಹೆಚ್ಚಿಸಲು ಒಪ್ಪಿಗೆ ಸೂಚಿಸಲಾಗಿದೆ. ಎಸ್‌ ಟಿ ಸಮುದಾಯಕ್ಕೆ 50ಕ್ಕೂ ಹೆಚ್ಚು ಜಾತಿಗಳು ಸೇರಿದ್ದರೆ, ಎಸ್‌ಸಿ ಸಮುದಾಯಕ್ಕೂ ಹೆಚ್ಚಿನ ಜಾತಿಗಳು ಸೇರಿವೆ. ಅಲ್ಲದೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಇರಬೇಕು ಎಂಬುದು ನಮ್ಮ ಸರ್ಕಾರದ ಉದ್ಧೇಶವಾಗಿದ್ದು, ಇದನ್ನು ಇಂದು ನಿರೂಪಿಸಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಸ್ವಾಮಿಗಳು, ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಕೆ.ವಿ. ನಾಗರಾಜ…, ಮುದ್ದೇನಹಳ್ಳಿ ಗ್ರಾಪಂ ಅಧ್ಯಕ್ಷ ಮುನಿನಾರಾಯಣಪ್ಪ, ಶಿವಕುಮಾರ್‌, ಛಾಯಾ, ರಂಗಣ್ಣ, ಆವುಲಕೊಂಡರಾಯಪ್ಪ, ಕೃಷ್ಣಮೂರ್ತಿ, ಲಕ್ಷ್ಮಣ…, ನರಸಿಂಹಮೂರ್ತಿ, ನಾರಾಯಣಸ್ವಾಮಿ, ಗೋಪಾಲ್‌ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ ಶೀಘ್ರ ಬೃಹತ್‌ ಸಮಾವೇಶ

40 ವರ್ಷಗಳ ನಿಮ್ಮ ಬೇಡಿಕೆಯಂತೆ ಶೇ.3ರಿಂದ ಶೇ.7ಕ್ಕೆ ಮೀಸಲಾತಿ ಹೆಚ್ಚಿಸಲಾಗಿದೆ. ಇದು ಬಿಜೆಪಿ ಸರ್ಕಾರದ ಬದ್ಧತೆ. ಸ್ವಾತಂತ್ರ್ಯ ಉದ್ಯಾನವನದಲ್ಲಿ ಕಳೆದ 241 ದಿನಗಳಿಂದ ವಾಲ್ಮೀಕಿ ಜಗದ್ಗುರುಗಳು ಉಪವಾಸ ಸತ್ಯಾಗ್ರಹ ಮಾಡುತ್ತಿದ್ದರು, ಸರ್ಕಾರದ ಆದೇಶ ಪತ್ರದೊಂದಿಗೆ ಸಂಪುಟ ಸಚಿವರು ಹೋಗಿ ಆದೇಶಪತ್ರ ನೀಡಿ, ಉಪವಾಸ ಕೈ ಬಿಡುವಂತೆ ಕೋರಲಾಯಿತು. ಇದರಿಂದ ಶ್ರೀಗಳು ಉಪವಾಸ ಕೈ ಬಿಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಸ್ವಾಮೀಜಿಗಳನ್ನು ಜಿಲ್ಲೆಗೆ ಕರೆಯಿಸಿ ಪರಿಶಿಷ್ಟವರ್ಗಗಳ ಬೃಹತ್‌ ಸಮಾವೇಶ ಮಾಡಲಾಗುವುದು ಎಂದು ಸಚಿವ ಡಾ.ಕೆ.ಸುಧಾಕರ್‌ ಹೇಳಿದರು.

  • ಬಿಜೆಪಿ ವಿರುದ್ಧ ಜನರಿಗೆ ತಪ್ಪು ತಿಳಿವಳಿಕೆ ಮೂಡಿಸುವ ಪ್ರಯತ್ನ ನಿರಂತರವಾಗಿ ನಡೆದಿದೆ.
  • ಸುಳ್ಳು ಆರೋಪ ಮಾಡುವುದನ್ನೇ ವಿರೋಧ ಪಕ್ಷಗಳು ಕಾಯಕ
  • ಕಳೆದ 40 ವರ್ಷಗಳಿಂದ ನಿರಂತರ ಹೋರಾಟ ನಡೆಯುತ್ತಿದ್ದರೂ, ಕಾಂಗ್ರೆಸ್‌ ಸರ್ಕಾರ ಹಲವು ಬಾರಿ ಬಂದು ಹೋದರೂ ಮೀಸಲು ಸೌಲಭ್ಯ ನೀಡಲು ಮಾತ್ರ ಅವರಿಂದ ಸಾಧ್ಯವಾಗಿಲ್ಲ
Latest Videos
Follow Us:
Download App:
  • android
  • ios