Electric Vehicle ಜಾಗೃತಿ ಪೋರ್ಟಲ್ ಗೆ ಚಾಲನೆ ನೀಡಿದ ಸಚಿವ ಸುನೀಲ ಕುಮಾರ್

ರಾಜ್ಯದಲ್ಲಿ ವಿದ್ಯುತ್ ಚಾಲಿತ ವಾಹನಗಳ ಬಳಕೆಯ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ‘ಇವಿ-ಜಾಗೃತಿ ಪೋರ್ಟಲ್’ಗೆ ಇಂಧನ ಸಚಿವ ಸುನಿಲ್ ಕುಮಾರ್ ಚಾಲನೆ ನೀಡಿದ್ದಾರೆ.

minister Sunil Kumar launched the E Jagruthi web portal for Electric Vehicle awareness in bengaluru gow

ಬೆಂಗಳೂರು (ಜೂ.9): ನಗರವನ್ನು ಹಸರೀಕರಣ ಮಾಡುವ ಹಾಗೂ ರಾಜ್ಯದಲ್ಲಿ ವಿದ್ಯುತ್ ಚಾಲಿತ ವಾಹನಗಳ ಬಳಕೆಯ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ‘ಇವಿ-ಜಾಗೃತಿ ಪೋರ್ಟಲ್’ಗೆ ಇಂಧನ ಸಚಿವ ಸುನಿಲ್ ಕುಮಾರ್ ಚಾಲನೆ ನೀಡಿದ್ದಾರೆ.

ನಗರದ ಬೆಸ್ಕಾಂ ಕೇಂದ್ರ ಕಚೇರಿಯಲ್ಲಿ ಈ ಕಾರ್ಯಕ್ರಮವನ್ನ ಆಯೋಜನೆ ಮಾಡಲಾಗಿದ್ದು, ಇವಿ ಜಾಗೃತಿ ಪೋರ್ಟಲ್ ಮತ್ತು ಬೆಂಗಳೂರು ನಗರವನ್ನು ಜಾಗತಿಕ ಇವಿ ವಲಯವನ್ನಾಗಿ ಪರಿವರ್ತಿಸುವ ದಿಕ್ಸೂಚಿ ವರದಿ ಬಿಡುಗಡೆ ಮಾಡಲಾಯಿತು.

ಇನ್ನು ಈ ವೇಳೆ ಮಾತನಾಡಿದ ಸಚಿವರು,  ಇಂಧನ ಇಲಾಖೆಯ ಕಚೇರಿಗಳಲ್ಲಿ ವಿದ್ಯುತ್ ಚಾಲಿತ ವಾಹನ ಬಳಕೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ವಿದ್ಯುತ್ ಚಾಲಿತ ವಾಹನಗಳ  ಬೆಲೆ, ಪೆಟ್ರೋಲ್ ಹಾಗು ಡಿಸೆಲ್ ವಾಹನಗಳ ಬೆಲೆಗಿಂತ ದುಬಾರಿ. ಈ ಹಿನ್ನೆಲೆಯಲ್ಲಿ ಇಲೆಕ್ಟ್ರಿಕ್ ವಾಹನ ಬಳಕೆಗೆ ಇನ್ನೂ ಒಪ್ಪಿಗೆ ದೊರೆತಿಲ್ಲ. ಇಲೆಕ್ಟ್ರಿಕ್ ವಾಹನ ಬಳಸುವುದು ನಮ್ಮ ಇಲಾಖೆಯ ಆದ್ಯತೆ ಆಗಿದ್ದು, ಹಣಕಾಸು ಇಲಾಖೆ ಸಮ್ಮತಿಸಿದರೆ, ಮುಂದಿನ ದಿನಗಳಲ್ಲಿ ಇಂಧನ ಇಲಾಖೆಯ ಎಲ್ಲ ಕಚೇರಿಗಳಲ್ಲಿ ಇಲೆಕ್ಟ್ರಿಕ್ ವಾಹನಗಳನ್ನು ಬಳಸಲಾಗುವುದು’’ ಎಂದು ತಿಳಿಸಿದರು.

ಬೊಮ್ಮಸಂದ್ರದಿಂದ ಹೊಸೂರುವರೆಗೆ ವಿಸ್ತರಣೆಯಾಗುತ್ತಾ ನಮ್ಮ

ರಾಜ್ಯದಲ್ಲಿ ಇಲೆಕ್ಟ್ರಿಕ್ ವಾಹನ ಬಳಕೆಗೆ ಸರಕಾರ ಉತ್ತೇಜನ ನೀಡುತ್ತಿದ್ದು, ಜೂನ್ 23 ರಿಂದ ಜೂನ್ 30ರವರೆಗೆ ರಾಜ್ಯದಲ್ಲಿ ಇವಿ ಚಾರ್ಜಿಂಗ್ ಸೆಂಟರ್‌ಗಳ ಕುರಿತು ಅಭಿಯಾನ ಹಮ್ಮಿಕೊಳ್ಳಲಾಗಿದೆ. ರಾಜ್ಯದಲ್ಲಿ 1000 ಕ್ಕೂ ಹೆಚ್ಚು ಇವಿ ಚಾರ್ಜಿಂಗ್ ಸ್ಟೇಷನ್ ಗಳಿದ್ದು, 3000 ಚಾರ್ಜಿಂಗ್ ಸ್ಟೇಷನ್ ಗಳ ಗುರಿ ಹೊಂದಲಾಗಿದೆ’’ ಎಂದು ಸಚಿವರು ಮಾಹಿತಿ ನೀಡಿದರು. 

ಭಾರತದ ಬ್ರಿಟಿಷ್ ಹೈಕಮಿಷನರ್‌ಆಲೆಕ್ಸ್ ಇಲ್ಲಿಸ್  ಮಾತನಾಡಿ, ‘‘ಭಾರತ, ಅಮೆರಿಕ ಮತ್ತು ಚೀನಾ ದೇಶಗಳು ಯುಕೆ ಜತೆ ಸಹಭಾಗಿತ್ವದ ವಹಿವಾಟುವಿನಲ್ಲಿ ತೊಡಗಿಕೊಂಡಿವೆ. ಭಾರತದ ಸುಮಾರು 22 ಕೋಟಿ ಜನರು ನಗರ ಪ್ರದೇಶಕ್ಕೆ ಮುಂದಿನ ದಿನಗಳಲ್ಲಿ ವಲಸೆ ಹೋಗಲಿದ್ದಾರೆ ಈ ನಿಟ್ಟಿನಲ್ಲಿ ನಗರ ಪ್ರದೇಶಗಳ ಸಮರ್ಥ ಅಭಿವೃದ್ದಿ ಮುಖ್ಯ. ಬೆಂಗಳೂರು ಬಹಳ ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ಇಲ್ಲಿ ಇಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಅವಕಾಶ ಇದೆ’’ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದಲ್ಲಿ ಕನ್ನಡ ನಾಮಫಲಕ ಹಾಕೋದೇ ತಪ್ಪಾ?

ಬೆಸ್ಕಾಂ ಆಡಳಿತ ನಿರ್ದೇಶಕ ಪಿ. ರಾಜೇಂದ್ರ ಚೋಳನ್, ಕರ್ನಾಟಕ ಮತ್ತು ಕೇರಳದ ಬ್ರಿಟಿಷ್ ಉಪ ಹೈಕಮಿಷನರ್‌ಅನ್ನಾ ಶೋಟ್ ಬೋಲ್ಟ್ , ಅಪರ ಮುಖ್ಯ ಕಾರ್ಯದರ್ಶಿ  ಜಿ. ಕುಮಾರ್‌ನಾಯಕ್ ಮತ್ತು ಕೆಪಿಟಿಸಿಎಲ್ ಆಡಳಿತ ನಿರ್ದೇಶಕ ಡಾ.  ಎನ್. ಮಂಜುಳಾ ಹಾಜರಿದ್ದರು. 

ಹೇಗೆ ಕಾರ್ಯ ನಿರ್ವಹಿಸಲಿದೆ ಈ ಇವಿ ಪೋರ್ಟಲ್?
ಇವಿ ಪೋರ್ಟಲ್ ಓಪನ್ ಮಾಡಿದಾಗ, ಎಲ್ಲಿ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಸ್ಟೇಶನ್ ಇದೆ?
ಎಲೆಕ್ಟ್ರಿಕ್  ವಾಹನ ಖರೀದಿ ಮಾಡುವುದು ಹೇಗೆ?
 ಎಲೆಕ್ಟ್ರಿಕ್ ವಾಹನ ಉದ್ಯಮ ಆರಂಭ ಮಾಡುವುದು ಹೇಗೆ
ಬೇರೆ ವಾಹನ ಖರೀದಿ ಮಾಡುವುದಕ್ಕಿಂತ ಎಲೆಕ್ಟ್ರಿಕ್ ವಾಹನ ಖರೀದಿ ಮಾಡಿದರೆ ಎಷ್ಟು ಲಾಭವಾಗುತ್ತದೆ?
ಎಲೆಕ್ಟ್ರಿಕ್ ವೆಹಿಕಲ್ ಗಳಿಂದ ಏನೇನು ಲಾಭಗಳಿವೆ 
 ಈ ಎಲ್ಲ ಪ್ರಶ್ನೆಗಳಿಗೂ ನಾಗರಿಕರು ಅತ್ಯಂತ ಸುಲಭವಾಗಿ ಮಾಹಿತಿ ಪಡೆಯಬಹುದು.

Latest Videos
Follow Us:
Download App:
  • android
  • ios