ಮೈಸೂರು [ಸೆ.06]: ಮಾಜಿ ಸಚಿವ ಸಾ.ರಾ. ಮಹೇಶ್‌ ಅವರು ಜ್ಞಾನಿಗಳು. ನನಗಿಂತಲೂ ಅಪಾರ ಜ್ಞಾನ ಹೊಂದಿದ್ದಾರೆ. ಅವರ ಬಗ್ಗೆ ನಾನು ಏನೂ ಹೇಳುವುದಿಲ್ಲ. 

ಅವರಿಗೆ ಒಳ್ಳೆಯದಾಗಲಿ ಎಂದು ವಸತಿ ಸಚಿವ ವಿ. ಸೋಮಣ್ಣ ಅವರು ಸಾ.ರಾ.ಮಹೇಶ್‌ಗೆ ಟಾಂಗ್‌ ನೀಡಿದ್ದಾರೆ. 

ಮೈಸೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಸರಾ ಮಹೋತ್ಸವ ಹಿನ್ನೆಲೆ ಅಧಿಕಾರ ಕಿತ್ತುಕೊಂಡವರ ಜತೆ ವೇದಿಕೆ ಹಂಚಿಕೊಳ್ಳುವುದಿಲ್ಲ ಎಂದು ಸಾ.ರಾ. ಮಹೇಶ್‌ ನೀಡಿದ್ದ ಹೇಳಿಕೆಗೆ ಈ ರೀತಿ ಪ್ರತಿಕ್ರಿಯಿಸಿದರು. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಇದೇ ವೇಳೆ ನಾನು ಎಲ್ಲಿವರೆಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವನಾಗಿರುತ್ತೀನೋ ಅಲ್ಲಿವರೆಗೂ ನಗರದಲ್ಲಿ ಟ್ರಾಫಿಕ್‌ ಸಮಸ್ಯೆ ಉಂಟಾಗಬಾರದು, ಜನಸಾಮಾನ್ಯರಂತೆ ನಾನು ಓಡಾಡುತ್ತೇನೆ ಎಂದು ಅವರು ತಿಳಿಸಿದರು.