ಬೆಳಗಾವಿಯಿಂದ ಗೋವಾಕ್ಕೆ ಅನಧಿಕೃತವಾಗಿ ಗೋಮಾಂಸ ಸಾಗಾಟ ಶಂಕೆ| ವಾಹನ ಕಾಯುತ್ತ ನಿಂತಿದ್ದ ಕೆಲ ಹಿಂದೂ ಸಂಘಟನೆಗಳ ಕಾರ್ಯಕರ್ತರು| ವಾಹನ ತಡೆದು ಬೆಂಕಿ ಹಚ್ಚಿದ ದುಷ್ಕರ್ಮಿಗಳು|
ಬೆಳಗಾವಿ(ಜೂ.07): ನಗರದಿಂದ ಗೋವಾ ರಾಜ್ಯಕ್ಕೆ ಅಕ್ರಮವಾಗಿ ಗೋಮಾಂಸ ಸಾಗಾಣಿಕೆ ಮಾಡಲಾಗುತ್ತಿದೆ ಎಂದು ಶಂಕೆ ವ್ಯಕ್ತಪಡಿಸಿ ವಾಹನವೊಂದಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ಶನಿವಾರ ಬೆಳಗಿನ ಜಾವ ಬೆಳಗಾವಿಯ ಕರ್ಲೆ- ಬೆಳವಟ್ಟಿ ರಸ್ತೆಯ ಮೇಲೆ ಸಂಭವಿಸಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಬೆಳಗಾವಿಯಿಂದ ಗೋವಾಕ್ಕೆ ಅನಧಿಕೃತವಾಗಿ ಗೋಮಾಂಸ ಸಾಗಿಸಲಾಗುತ್ತಿದೆ ಎಂದು ಕೆಲ ಹಿಂದೂ ಸಂಘಟನೆಗಳ ಕಾರ್ಯಕರ್ತರು ವಾಹನ ಕಾಯುತ್ತ ನಿಂತಿದ್ದರು. ವಾಹನವನ್ನು ತಡೆದು ಬೆಂಕಿ ಹಚ್ಚಿದ್ದಾರೆ. ವಾಹನದಲ್ಲಿದ್ದವರು ಓಡಿ ಹೋಗಿದ್ದಾರೆ.
ಬೆಳಗಾವಿ: 'ಕೊರೋನಾ ಕಾಟದ ಮಧ್ಯೆಯೇ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಸಿದ್ಧರಾಗಿ'
ವಾಹನಕ್ಕೆ ಬೆಂಕಿ ಹಚ್ಚಿರುವ ಘಟನೆಯಿಂದ ಭಯದ ವಾತಾವರಣ ನಿರ್ಮಾಣವಾಗಿದೆ. ಈ ವಾಹನ ನಿತ್ಯ ಗೋವಾಕ್ಕೆ ತೆರಳುತಿತ್ತು ಎನ್ನಲಾಗಿದೆ. ಈ ಕುರಿತು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
