Asianet Suvarna News Asianet Suvarna News

ಹುಮನಾಬಾದ್‌: ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ ಎರಚಿದ ಕಿಡಿಗೇಡಿಗಳು

ಬೀದರ್ ಜಿಲ್ಲೆಯ ಹುಮನಾಬಾದ್‌ ತಾಲೂಕಿನ ಘಾಟಬೋರಳ ಗ್ರಾಮದಲ್ಲಿ ನಡೆದ ಘಟನೆ 

Miscreants Threw Dung on Ambedkar's Portrait at Humnabad in Bidar grg
Author
First Published Nov 27, 2022, 12:36 PM IST

ಬೀದರ್(ನ.27):  ಡಾ.ಬಿ.ಆರ್‌. ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳು ಸಗಣಿ ಎರಚಿದ ಘಟನೆ ಬೀದರ್ ಜಿಲ್ಲೆಯ   ಹುಮನಾಬಾದ್‌ ತಾಲೂಕಿನ ಘಾಟಬೋರಳ ಗ್ರಾಮದಲ್ಲಿ ಇಂದು(ಭಾನುವಾರ) ನಡೆದಿದೆ. ಗ್ರಾಮದ ಅಂಬೇಡ್ಕರ್ ವೃತದಲ್ಲಿನ ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ ಎಸೆದ ಘಟನೆ ಇಂದು ಬೆಳಗಿನ ಜಾವ ಬೆಳಕಿಗೆ ಬಂದಿದೆ. 

ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ ಎಸೆದ ಕಿಡಿಗೇಡಿಗಳ ವಿಷಯ ತಿಳಿಯುತ್ತಿದ್ದಂತೆ ನೂರಾರು ಜನರು ವೃತ್ತದಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. 

ಬೀದರ್‌ ಉತ್ಸವಕ್ಕೆ ಗಾಯಕ ವಿಜಯಪ್ರಕಾಶ, ಸಂಜಿತ ಹೆಗಡೆ, ಮಂಗ್ಲಿ, ಕುಮಾರ ಸಾನು

ಘಟನೆ ಹಿನ್ನಲೆಯಲ್ಲಿ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.  ಘಟನಾ ಸ್ಥಳಕ್ಕೆ ತಹಸೀಲ್ದಾರ್ ಪ್ರದೀಪ್ ಹಿರೇಮಠ ಭೇಟಿ ನೀಡಿ ಪ್ರತಿಭಟನಾ ನಿರತರ ಜೊತೆ ಮಾತುಕತೆ ನಡೆಸಿದ್ದಾರೆ. 
 

Follow Us:
Download App:
  • android
  • ios