ಜಾತಿ ಗಣತಿ ಸಂಬಂಧ ವಾಸ್ತವಕ್ಕೆ ದೂರವಾದ ಸಂಗತಿ ವ್ಯವಸ್ಥಿತವಾಗಿ ಹರಡಲಾಗುತ್ತಿದೆ : ಮಹದೇವಪ್ಪ
ಜಾತಿ ಗಣತಿಗೆ ಸಂಬಂಧಿಸಿದಂತೆ ಇದೀಗ ದೇಶದಲ್ಲಿ ಚರ್ಚೆಗಳು ಮೊದಲಾಗಿದ್ದು, ಜಾತಿ ಗಣತಿಯಿಂದಾಗಿ ಜಾತಿ ಜಾತಿಗಳ ನಡುವೆ ಒಡಕು ಮೂಡಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂಬ ಅತ್ಯಂತ ತಪ್ಪಾದ ಮತ್ತು ವಾಸ್ತವಕ್ಕೆ ದೂರವಾದ ಸಂಗತಿಯನ್ನು ವ್ಯವಸ್ಥಿತವಾಗಿ ಹರಡಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ತಿಳಿಸಿದ್ದಾರೆ.
ಮೈಸೂರು : ಜಾತಿ ಗಣತಿಗೆ ಸಂಬಂಧಿಸಿದಂತೆ ಇದೀಗ ದೇಶದಲ್ಲಿ ಚರ್ಚೆಗಳು ಮೊದಲಾಗಿದ್ದು, ಜಾತಿ ಗಣತಿಯಿಂದಾಗಿ ಜಾತಿ ಜಾತಿಗಳ ನಡುವೆ ಒಡಕು ಮೂಡಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂಬ ಅತ್ಯಂತ ತಪ್ಪಾದ ಮತ್ತು ವಾಸ್ತವಕ್ಕೆ ದೂರವಾದ ಸಂಗತಿಯನ್ನು ವ್ಯವಸ್ಥಿತವಾಗಿ ಹರಡಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ತಿಳಿಸಿದ್ದಾರೆ.
ಭಾರತವು ಸಂವಿಧಾನಾತ್ಮಕ ದೇಶವಾಗಿದ್ದರೂ ಇಲ್ಲಿ ಜಾತಿಯ ಮೇಲರಿಮೆ ಪ್ರಜ್ಞೆಯೇ ಮೇಲುಗೈ ಸಾಧಿಸಿರುವುದು ಅತಿದೊಡ್ಡ ವಾಸ್ತವವಾಗಿದ್ದು, ತುಳಿತಕ್ಕೆ ಒಳಪಟ್ಟ ವರ್ಗಗಳು ಅದೇ ರೀತಿ ಇರಬೇಕು ಎಂಬ ಮನಸ್ಥಿತಿಯು ಇವರ ಮಾತುಗಳಲ್ಲಿ ವ್ಯಕ್ತವಾಗುತ್ತಿದೆ ಎಂದು ಕಿಡಿಕಾರಿದ್ದಾರೆ.
ಸಾಮಾಜಿಕ ಅಸಮಾನತೆಗಳ ಸಂದರ್ಭದಲ್ಲಿ ಸಮಾನ ಅವಕಾಶಗಳ ಸೃಷ್ಟಿ ಮಾಡುವುದು ಸಂವಿಧಾನದ ಆಶಯವಾಗಿದೆ. ಅದರಲ್ಲೂ ಸಾಮಾಜಿಕವಾಗಿ ಹಲವಾರು ಜಾತಿಯ ಅಸಮಾನತೆಗಳನ್ನು ಈಗಲೂ ಎದುರಿಸುತ್ತಿರುವ ಭಾರತದಲ್ಲಿ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯವಾಗಿ ಯಾವ ಜಾತಿಯ ಜನರ ಪರಿಸ್ಥಿತಿ ಏನಾಗಿದೆ, ಅವರ ಬದುಕಿನ ಸ್ಥಿತಿಗತಿ ಏನು? ಸಮಾನ ಮತ್ತು ಘನತೆಯ ಬದುಕಿಗಾಗಿ ಸರ್ಕಾರ ಅವರಿಗೆ ಯಾವ ರೀತಿಯಲ್ಲಿ ನೆರವಾಗಬಹುದು? ಜನರ ಹಕ್ಕುಗಳು ಮತ್ತು ಅವಕಾಶಗಳು ಅವರಿಗೆ ಸರಿಯಾದ ರೀತಿಯಲ್ಲಿ ಹಂಚಿಕೆ ಆಗಿದೆಯಾ ಎಂಬುದನ್ನು ತಿಳಿದುಕೊಳ್ಳುವ ಸಲುವಾಗಿ ಮಾಡುತ್ತಿರುವುದೇ ಈ ಜಾತಿ ಗಣತಿ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಈ ಜಾತಿ ಗಣತಿಯಿಂದಾಗಿ ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕವಾಗಿ ಮತ್ತು ಔದ್ಯೋಗಿಕವಾಗಿ ತುಳಿತಕ್ಕೆ ಒಳಪಟ್ಟ ಸಮುದಾಯಗಳ ಸ್ಥೂಲವಾದ ಚಿತ್ರಣವು ಸಿಗಲಿದೆ. ಆದರೆ, ಜಾತಿಯೇ ರಾಜಕೀಯಕ್ಕೆ ಪ್ರಬಲ ಅಸ್ತ್ರ ಆಗಿರುವ ಈ ವೇಳೆ, ತಳ ವರ್ಗಗಳ ಏಳಿಗೆಯ ಕುರಿತು ಆರೋಗ್ಯಕರವಾಗಿ ಚಿಂತಿಸದ ಕೆಲವು ಕುತ್ಸಿತ ಮನಸುಗಳು ಜಾತಿ ಗಣತಿಯ ಕುರಿತು ತಪ್ಪಾಗಿ ಬಿಂಬಿಸಲು ಹೊರಟಿರುವುದು ಸರಿಯಲ್ಲ ಎಂದು ಅವರು ಖಂಡಿಸಿದ್ದಾರೆ.
ಉತ್ತಮ ಉದ್ದೇಶ ಹೊಂದಿರುವ ಜಾತಿ ಗಣತಿಯನ್ನು ಮಾಡುವುದರಿಂದ ಜಾತಿಗಳ ನಡುವೆ ಕಂದರ ಹೆಚ್ಚಾಗುತ್ತದೆ ಎಂದು ಹೇಳುತ್ತಿರುವ ಜನರು, ದಲಿತರ ಮೇಲೆ ದೌರ್ಜನ್ಯಗಳು ಆಗುವಾಗ, ಸಾಮಾಜಿಕ ಶೋಷಣೆಯ ಕಾರಣಕ್ಕೆ ಅವರ ಘನತೆಯ ಬದುಕುವ ವಾತಾವರಣ ಹಾಳಾದಾಗ ಎಲ್ಲಿರುತ್ತಾರೆ? ಎಂದು ಪ್ರಶ್ನಿಸಿದ್ದಾರೆ.
ಹೀಗಾಗಿ, ರಾಜಕೀಯದ ಕಾರಣಕ್ಕಾಗಿ ಯಾರು ಏನೇ ಹೇಳಿದರೂ ಜಾತಿ ಗಣತಿ ಎಂಬುದು ನಮ್ಮ ಸಮುದಾಯಗಳ ಸಾಮಾಜಿಕ ಆರ್ಥಿಕ, ರಾಜಕೀಯ ಹಾಗೂ ಔದ್ಯೋಗಿಕ ಸ್ಥಿತಿಗತಿಯನ್ನು ತಿಳಿದು, ಅವರಿಗೆ ನೆರವಾಗಲು ಇರುವ ಸಮಾನ ಅವಕಾಶಗಳ ಕೀಲಿಕೈಯೇ ಹೊರತು, ಸಾಮಾಜಿಕ ವಿಭಜನೆಯ ಸಂಗತಿ ಅಲ್ಲ. ಇದನ್ನು ನಮ್ಮ ಜನ ಸಮುದಾಯಗಳು ಅರ್ಥ ಮಾಡಿಕೊಂಡು, ಹೆಚ್ಚು ಗಟ್ಟಿಯಾದ ದನಿಯಲ್ಲಿ ಇದರ ಬಗ್ಗೆ ಮಾತನಾಡಬೇಕು ಎಂದು ಅವರು ತಿಳಿಸಿದ್ದಾರೆ.
ಸಿದ್ದರಾಮಯ್ಯ ಹಾಡಿ ಹೊಗಳಿದ ಮಹದೇವಪ್ಪ
ಮೈಸೂರು(ಅ.08): ಬಸವಣ್ಣ ಬಿಜ್ಜಳನ ಆಸ್ಥಾನದಲ್ಲಿ ಅರ್ಥಮಂತ್ರಿ ಆಗಿದ್ದರು. ಸಿದ್ದರಾಮಯ್ಯ ಅವರೂ ಒಬ್ಬ ಅರ್ಥಶಾಸ್ತ್ರಜ್ಞನೇ ಸರಿ. ಅವರು ಈವರೆಗೆ 14 ಬಜೆಟ್ ಮಂಡಿಸಿದ್ದಾರೆ. ಅಂದು ಬಸವಣ್ಣ ಸಾಮಾಜಿಕ ನ್ಯಾಯ ಪ್ರತಿಪಾದಿಸಿದರೆ, ಇಂದು ಸಿದ್ದರಾಮಯ್ಯ ಸಾಮಾಜಿಕ ನ್ಯಾಯದ ಆಧಾರದ ಮೇಲೆ ಆಡಳಿತ ನಡೆಸಿದ್ದಾರೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಸಿದ್ದರಾಮಯ್ಯ ಅವರ ಸ್ತುತಿ ಮಾಡಿದರು.
ನಗರದ ಕಲಾಮಂದಿರದಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಸವಣ್ಣ ಅವರು ಬ್ರಾಹ್ಮಣ ಸಮಾಜದಲ್ಲಿ ಹುಟ್ಟಿ ಶೂದ್ರ ಸಂಸ್ಕೃತಿಯನ್ನು ಇಡೀ ಪ್ರಪಂಚಕ್ಕೆ ಹೇಳಿದರಲ್ಲದೆ, ಸನಾತನ ವಿರುದ್ಧದ ನಿಲುವು ತಾಳಿದರು. ನುಡಿದಂತೆಯೂ ನಡೆದ ಬಸವಣ್ಣ ಜಾತಿ ವಿನಾಶಕ್ಕಾಗಿ ಕಲ್ಯಾಣ ಕ್ರಾಂತಿ ಮಾಡಿದರು. ಹಲವು ವಿಚಾರದಲ್ಲಿ ಸಿದ್ದರಾಮಯ್ಯ ಅವರು ಬಸವಣ್ಣನವರ ತತ್ವ ಪಾಲನೆ ಮಾಡಿಕೊಂಡು ಬಂದವರು. ಬಸವ ಜಯಂತಿ ದಿನದಂದೇ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಬಸವಣ್ಣನ ಹಲವು ವಿಚಾರಗಳನ್ನು ಅವರು ಅನುಸರಿಸಿದ್ದಾರೆ ಎಂದು ಹಾಡಿ ಹೊಗಳಿದರು.
ಜಾತಿಗಣತಿ: ಕಾಂಗ್ರೆಸ್ V/S ಬಿಜೆಪಿ ಫೈಟ್..!
ಅಲ್ಲದೆ, ಬಸವಣ್ಣನವರನ್ನೂ ಅವರ ವಿಚಾರಗಳಿಗೆ ಹಲವರು ಟೀಕೆ ಮಾಡಿದ್ದಾರೆ. ಸಿದ್ದರಾಮಯ್ಯನವರು ‘ಅನ್ನಭಾಗ್ಯ’, ಹಲವು ಜನಪರ ಯೋಜನೆ ರೂಪಿಸಿದಾಗ ಇದಕ್ಕೆ ಹಲವರು ವ್ಯಂಗ್ಯವಾಡಿದರು. ಇಷ್ಟಾದರೂ ನುಡಿದಂತೆ ನಡೆದವರ ಸಾಲಿನಲ್ಲಿ ಮೊದಲು ನಿಲ್ಲುವಂತವರು ಸಿದ್ದರಾಮಯ್ಯ ಎಂದು ಮಹದೇವಪ್ಪ ಮುಖ್ಯಮಂತ್ರಿ ಗುಣಗಾನ ಮಾಡಿದರು.
ಸಿದ್ದುಗೆ ಭಾರತ ರತ್ನ ನೀಡಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನರಿಗೆ ಐದು ಗ್ಯಾರಂಟಿ ಯೋಜನೆಗಳನ್ನು ನೀಡುವ ಮೂಲಕ ನಡೆದಾಡುವ ‘ಬಸವೇಶ್ವರ’ ಎನಿಸಿದ್ದಾರೆ. ಸಿದ್ದರಾಮಯ್ಯ ಅವರ ಈ ಸಮಾಜಮುಖಿ ಸಾಧನೆಗೆ ಅವರಿಗೆ ‘ಭಾರತ ರತ್ನ’ವನ್ನೇ ಕೊಡಬೇಕು ಎಂದು ಉದ್ಯಮಿ, ಮಾಜಿ ಶಾಸಕ ಅಶೋಕ್ ಖೇಣಿ ತಿಳಿಸಿದ್ದಾರೆ