ಬೆಳಗಾವಿ(ಡಿ.16): ನಾನು ಬಿಜೆಪಿ ಶಿಸ್ತಿನ ಸಿಪಾಯಿ ಸಚಿವ ಸ್ಥಾನ ಕೊಡುವುದು ಬಿಡುವುದು ಮುಖ್ಯಮಂತ್ರಿ ಬಿ. ಎಸ್.  ಯಡಿಯೂರಪ್ಪ ಹಾಗೂ ಹೈಕಮಾಂಡ್‌ಗೆ ಬಿಟ್ಟ ವಿಷಯ ಎಂದು ಶಾಸಕ ಅಭಯ ಪಾಟೀಲ ಅವರು ಹೇಳಿದ್ದಾರೆ. 

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ನನಗೆ ವಹಿಸಿದ ಜವಾಬ್ದಾರಿಗಳನ್ನು ಸಮ ರ್ಥವಾಗಿ ನಿಭಾಯಿಸಿಕೊಂಡು ಬಂದಿದ್ದೇನೆ. ಸಚಿವ ಸ್ಥಾನ ನೀಡುವುದು ಬಿಡುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ. ನಾನು ಬಿಜೆಪಿಯ ಸಾಮಾನ್ಯ ಕಾರ್ಯಕರ್ತ ಎಂದು ಹೇಳಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಬೆಳಗಾವಿಯಲ್ಲಿ ನಡೆಯುತ್ತಿರುವ ಸ್ಮಾರ್ಟ್‌ಸಿಟಿ ಕಾಮಗಾರಿಯನ್ನು ಎಲ್ಲೋ ನಡೆದ ವಿಚಾರನ್ನು ಕೆಲವರು ಇದು ಕಿಲ್ಲಿಂಗ್ ಸಿಟಿ ಎಂದು ಬಿಂಬಿಸುತ್ತಿದ್ದಾರೆ. ಅದು ತಪ್ಪು. ಸ್ಮಾರ್ಟ್‌ಸಿಟಿಯಲ್ಲಿ ಸಾಕಷ್ಟು ಕಾಮಗಾರಿಗಳು ನಡೆಯುತ್ತಿವೆ. ಸಂಚಾರದಲ್ಲಿ ತೊಂದರೆಯಾಗಿರಬಹುದು, ಆದರೆ ಮುಂದಿನ ದಿನಗಳಲ್ಲಿ ಸುಸಜ್ಜಿತ ಸಿಟಿಯಾಗಿ ರಾಜ್ಯಕ್ಕೆ ಬೆಳಗಾವಿ ಮಾದರಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

ಬೆಳಗಾವಿ ದಕ್ಷಿಣ ಮತಕ್ಷೇತ್ರದ ಹಿಂದಿನ ಶಾಸಕರ ನಿರ್ಲಕ್ಷ್ಯದಿಂದ ಸಾಕಷ್ಟು ಕಾಮಗಾರಿಗಳು ನನೆಗುದಿಗೆ ಬಿದ್ದಿವೆ. ಶೀಘ್ರ ಮುಗಿಸಲಾಗುವುದು. ನಗರದ ಜನತೆಯ ಬಹು ವರ್ಷಗಳ ಬೇಡಿಯಾದ ಶಿವಾಜಿಯ ಘತವೈಭವ ಸಾರುವ ಶಿವ ಚರಿತ್ರೆಯನ್ನು ಜನವರಿ ತಿಂಗಳಲ್ಲಿ ಸಿಎಂ ಅವರ ಕೈಯಲ್ಲಿ ಉದ್ಘಾಟಿಸಲಾಗುವುದು ಎಂದು ತಿಳಿಸಿದ್ದಾರೆ.