Asianet Suvarna News Asianet Suvarna News

ರಾಮನಗರ ರಕ್ಷಿಸದಿದ್ರೆ ಬೀದಿಗಿಳಿಯುತ್ತೇನೆ: BSY ಸರ್ಕಾರಕ್ಕೆ ಅನಿತಾ ಕುಮಾರಸ್ವಾಮಿ ಎಚ್ಚರಿಕೆ

ರಾಮನಗರ ಕಾರಾಗೃಹದಲ್ಲಿ ಇರಿಸಲಾಗಿರುವ ಪಾದರಾಯನಪುರ ಗಲಭೆಕೋರನ್ನು ಬೇರೆಡೆಗೆ ಸ್ಥಳಾಂತರಿಸಿ ಜಿಲ್ಲೆಯ ಜನತೆಯ ಆತಂಕವನ್ನು ದೂರ ಮಾಡಬೇಕು| ಎಚ್. ಡಿ. ಕುಮಾರಸ್ವಾಮಿ ಮುಂದಾಗಬಹುದಾದ ಅನಾಹುತದ ಬಗ್ಗೆ ಸರ್ಕಾರಕ್ಕೆ ಮೊದಲೇ ಕಿವಿ ಹಿಂಡಿದ್ದರು| ಜಾಣಕಿವುಡು ಪ್ರದರ್ಶಿಸಿದ ರಾಜ್ಯ ಸರ್ಕಾರ ಕೋರೋನಾ ಸೋಂಕನ್ನು ಜಿಲ್ಲೆಗೆ ಹಂಚಿದ್ದು ಸರೀನಾ ? ಇದರ ಹಿಂದೆ ಕಾಣದ ಕೈಗಳ ಷಡ್ಯಂತ್ರವಿದೆ: ಅನಿತಾ ಕುಮಾರಸ್ವಾಮಿ ಆರೋಪ| 

MLA Anita Kumaraswamy Talks Over Padarayanapura accused in Ramanagara Jail
Author
Bengaluru, First Published Apr 24, 2020, 2:06 PM IST

ರಾಮನಗರ(ಏ.24): ಬೆಂಗಳೂರಿನ ಪಾದರಾಯನಪುರದ ಗಲಭೆಕೋರನ್ನು ರಾಮನಗರದ ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರಿಸುವ ಮೂಲಕ ರಾಜ್ಯ ಸರ್ಕಾರ ಅಕ್ಷಮ್ಯ ಅಪರಾಧವೆಸಗಿದೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಈ ಕೂಡಲೇ ರಾಮನಗರ ಕಾರಾಗೃಹದಲ್ಲಿ ಇರಿಸಲಾಗಿರುವ ಪಾದರಾಯನಪುರ ಗಲಭೆಕೋರನ್ನು ಬೇರೆಡೆಗೆ ಸ್ಥಳಾಂತರಿಸಿ ಜಿಲ್ಲೆಯ ಜನತೆಯ ಆತಂಕವನ್ನು ದೂರ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ಮುಂದಾಗಬಹುದಾದ ಅನಾಹುತದ ಬಗ್ಗೆ ಸರ್ಕಾರಕ್ಕೆ ಮೊದಲೇ ಕಿವಿ ಹಿಂಡಿದ್ದರು. ಜಾಣಕಿವುಡು ಪ್ರದರ್ಶಿಸಿದ ರಾಜ್ಯ ಸರ್ಕಾರ ಕೋರೋನಾ ಸೋಂಕನ್ನು ಜಿಲ್ಲೆಗೆ ಹಂಚಿದ್ದು ಸರೀನಾ ? ಇದರ ಹಿಂದೆ ಕಾಣದ ಕೈಗಳ ಷಡ್ಯಂತ್ರವಿದೆ ಎಂದು ಅನಿತಾ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಕೊರೋನಾ ಸೋಂಕು: ರಾಮನಗರದಲ್ಲಿರುವ ಪಾದರಾಯನಪುರ ಆರೋಪಿಗಳು ಶಿಫ್ಟ್

ಜಿಲ್ಲಾ ಉಸ್ತುವಾರಿ ಸಚಿವ, ಉಪಮುಖ್ಯಮಂತ್ರಿ ಹಾಗೂ ವೈದ್ಯರು ಆಗಿರುವ  ಡಾಕ್ಟರ್ ಅಶ್ವಥ್ ನಾರಾಯಣ ಅವರು ಹಾರಿಕೆಯ ಹೇಳಿಕೆಗಳ ನೀಡುವುದು ಬಿಟ್ಟು ಜವಾಬ್ದಾರಿತನದಿಂದ ವರ್ತಿಸಲಿ. ವಾಸ್ತವ ಸ್ಥಿತಿಯನ್ನು ಅರಿತು ಪ್ರತಿಕ್ರಿಯಿ ಸಲಿ.  ಜಿಲ್ಲೆಯ ಜನತೆಯೊಂದಿಗೆ ಚೆಲ್ಲಾಟ ಮಾಡುವುದನ್ನು ಬಿಡಲಿ ಎಂದು ಕಿಡಿಕಾರಿದ್ದಾರೆ.

ಸರ್ಕಾರದ ಬೇಜವಾಬ್ದಾರಿತನವನ್ನು ಇನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ ತಕ್ಷಣ ರಾಮನಗರ ಮರ್ವಾಡಿ ಕೈದಿಗಳನ್ನು ಬೇರೆಡೆಗೆ ಸ್ಥಳಾಂತರಿಸಿ, ಜಿಲ್ಲೆಯಾದ್ಯಂತ ಕೊರೋನಾ ಸೋಂಕು ಹರಡದಂತೆ ಅಗತ್ಯ ವೈದ್ಯಕೀಯ ಮುನ್ನೆಚ್ಚರಿಕೆ ವಹಿಸಬೇಕು ಇಲ್ಲದಿದ್ದರೆ ಬೀದಿಗಿಳಿದು  ಜಿಲ್ಲೆಯ ಜನತೆಯ ಸ್ವಾಸ್ಥ್ಯ ಕಾಪಾಡಿಕೊಳ್ಳಲು ಹೋರಾಟ ಅನಿವಾರ್ಯ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. 

ರಾಮನಗರ ಜೈಲಿನಲ್ಲಿ ಇರಿಸಲಾದ  ಕೈದಿಗಳಲ್ಲಿ ಇಬ್ಬರಿಗೆ ಮಾತ್ರವಲ್ಲದೆ ಇತರ ಕೆಲವರಿಗೂ ಕೊರೋನಾ  ಹಬ್ಬಿರುವ ಮಾಹಿತಿ ಇದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಅನಿತಾ ಕುಮಾರಸ್ವಾಮಿ ಅವರು ಆಗ್ರಹಿಸಿದ್ದಾರೆ. 
 

Follow Us:
Download App:
  • android
  • ios