ಕುಮಾರಸ್ವಾಮಿ ಯಾವುದೇ ತಪ್ಪು ಮಾಡಿಲ್ಲ : ಪತಿ ಪರ ಪತ್ನಿ ಬ್ಯಾಟಿಂಗ್
ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದ ವಿರುದ್ಧ ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ ಗರಂ ಆಗಿದ್ದಾರೆ. ಸರ್ಕಾರ ಮಾಡುವ ಯಾವ ಯತ್ನವೂ ಸಫಲವಾಗದು ಎಂದು ಹೇಳಿದ್ದಾರೆ.
ರಾಮನಗರ [ಆ.19] : ಮಾಜಿ ಸಿಎಂ ಕುಮಾರಸ್ವಾಮಿ ಹೋರಾಟದ ಮೂಲಕ ರಾಜಕೀಯ ಮಾಡಿಕೊಂಡು ಬಂದವರು ಅವರು ಯಾವುದೇ ರೀತಿಯ ತಪ್ಪು ಮಾಡಿಲ್ಲ ಎಂದು ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದರು.
ರಾಮನಗರದಲ್ಲಿ ಮಾತನಾಡಿದ ಅವರು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ, ಮಾಧ್ಯಮಗಳಲ್ಲಿ ನಾನು ಗಮನಿಸಿದ್ದೇನೆ. ಫೋನ್ ಟ್ಯಾಪಿಂಗ್ ನಲ್ಲಿ ಅವರ ಹೆಸರು ಕೇಳಿಬರುತ್ತಿದೆ. ಅವರಿಂದ ತಪ್ಪು ನಡೆದಿಲ್ಲ. ಇದರಿಂದ ಪಾರದರ್ಶಕ ತನಿಖೆ ನಡೆಯಲಿ ಎಂದು ಆಶಿಸುತ್ತೇನೆ. ಕುಮಾರಸ್ವಾಮಿಯವರು ಯಾವ ವಿಚಾರಕ್ಕೂ ಹೆದರಿಕೊಳ್ಳುವುದಿಲ್ಲ. ಈ ಬಗ್ಗೆ ಅವರು ಈಗಾಗಲೇ ಪ್ರತಿಕ್ರಿಯೆ ಕೊಟ್ಟಿದ್ದಾರೆ ಎಂದರು.
ಬಿಜೆಪಿ ಸಣ್ಣತನದ ರಾಜಕೀಯ ಮಾಡಲ್ಲ : ಅನಿತಾ ಕುಮಾರಸ್ವಾಮಿ
ಇನ್ನು ರಾಜ್ಯದಲ್ಲಿ ವಿರೋಧ ಪಕ್ಷದವರನ್ನು ಹೆದರಿಸಿ ಇಡುವ ವಾತವರಣ ಸೃಷ್ಟಿಯಾಗಿದೆ. ಆದರೆ ಇದಕ್ಕೆಲ್ಲ ಹೆದರುವ ಸ್ವಭಾವ ಕುಮಾರ ಸ್ವಾಮಿಯವರಿಗೆ ಇಲ್ಲ. ಅವರ ವ್ಯಕ್ತಿತ್ವಕ್ಕೆ ಕಳಂಕ ತರಲೆಂದು ಈ ರೀತಿಯ ಆಪಾದನೆ ಮಾಡುತ್ತಿದ್ದಾರೆ. ಆದರೆ ಅದು ವಿಫಲವಾಗುತ್ತದೆ. ಅವರ ವ್ಯಕ್ತಿತ್ವಕ್ಕೆ ಕಳಂಕ ತರಲು ಆಗುವುದಿಲ್ಲ ಎಂದರು.
ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿಯಿಂದ ಸಾಕಷ್ಟು ತೊಂದರೆಯಾಗಿದೆ. 25 ಜನ ಎಂಪಿಗಳನ್ನ ಜನ ಬಿಜೆಪಿ ಸಂಸದರನ್ನು ಗೆಲ್ಲಿಸಿದ ರಾಜ್ಯಕ್ಕೆ ಅನುದಾನ ನೀಡುವ ವಿಚಾರದ ಬಗ್ಗೆ ಯಾರೂ ಮಾತನಾಡುತ್ತಿಲ್ಲ. ರಾಜ್ಯದಲ್ಲಿ ಮಂತ್ರಿಮಂಡಲ ಕೂಡ ರಚನೆಯಾಗಿಲ್ಲ. ನಮ್ಮ ರಾಜ್ಯ ಕಡೆಗಣನೆಗೆ ಒಳಗಾಗುತ್ತಿದೆ ಎಂದು ಅನಿತಾ ಕುಮಾರಸ್ವಾಮಿ ಹೇಳಿದರು.