ಮಂಡ್ಯ(ಆ.25): ಸಮ್ಮಿಶ್ರ ಸರ್ಕಾರ ಪತನಗೊಂಡ ನಂತರ ಶಾಸಕರು ತಮ್ಮ ಕ್ಷೇತ್ರಗಳ ಬಗ್ಗೆ ಹೆಚ್ಚು ಒಲವು ತೋರಿಸುತ್ತಿದ್ದಾರೆ ಎಂಬಂತೆ ಭಾಸವಾಗುತ್ತಿದೆ. ಶಾಸಕ ತಮ್ಮಣ್ಣ ಅವರು ಮದ್ದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿದ್ದು ಕ್ಷೇತ್ರದೆಡೆಗೆ ಶಾಸಕ ಒಲವನ್ನು ತೋರಿಸಿದೆ.

 ಗ್ರಾಮಾಂತರ ಪ್ರದೇಶದಲ್ಲಿ ಉತ್ತಮವಾದ ಆರೋಗ್ಯ ಸೇವೆ ಸಿಗಬೇಕು ಎಂಬ ಕಾರಣಕ್ಕಾಗಿ ಆರಂಭಿಸಲಾಗಿರುವ ಭಾರತೀನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೌಲಭ್ಯಗಳು ಸಿಗುತ್ತಿವೆಯೇ ಎಂಬುದನ್ನು ಶಾಸಕ ತಮ್ಮಣ್ಣ ಪರಿಶೀಲನೆ ಮಾಡಿದರು.

ಹೆಚ್ಚಿನ ಮಂಡ್ಯ ಜಿಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ಗ್ರಾಮೀಣ ಪ್ರದೇಶದ ರೈತರು, ಸಾರ್ವಜನಿಕರು ತಾವು ಸಂಪಾದಿಸಿದ ಹಣದಲ್ಲಿ ಹೆಚ್ಚಿನ ಹಣವನ್ನು ಖಾಸಗಿ ಆಸ್ಪತ್ರೆಗಳಿಗೆ ಖರ್ಚು ಮಾಡುವುದನ್ನು ತಪ್ಪಿಸುವ ಉದ್ದೇಶದಿಂದ ಈ ಆಸ್ಪತ್ರೆ ಆರಂಭಿಸಲಾಗಿದೆ. ಹೀಗಾಗಿ ಸಮುದಾಯ ಆರೋಗ್ಯ ಕೇಂದ್ರವನ್ನು ಅತ್ಯಾಧುನಿಕ ರೀತಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ ಎಂದು ತಮ್ಮಣ್ಣ ಇದೇ ವೇಳೆ ವಿವರಣೆ ನೀಡಿದರು.

50 ಹಾಸಿಗೆ ಆಸ್ಪತ್ರೆ:

ಈ ಸಮುದಾಯ ಆಸ್ಪತ್ರೆಯು 50 ಹಾಸಿಗೆಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗಿದೆ. ಸಮುದಾಯ ಆರೋಗ್ಯ ಕೇಂದ್ರದಲ್ಲಿ ನುರಿತ ಹಾಗೂ ತಜ್ಞ ವೈದ್ಯರುಗಳಿದ್ದಾರೆ. ಶಸ್ತ್ರ ಚಿಕಿತ್ಸಾ ಕೊಠಡಿ, ಹೆರಿಗೆ ವಾರ್ಡ್‌, ದಂತ ಮತ್ತು ನೇತ್ರ ವಿಭಾಗ, ಎಕ್ಸ ರೇ, ಪ್ರಯೋಗಾಲಯ, ತುರ್ತು ನಿಗಾ ಘಟಕ, ಆ್ಯಂಬುಲೆನ್ಸ್‌ ಸೇವೆ ಸೇರಿದಂತೆ ಹಲವಾರು ಅಗತ್ಯ ಸೌಲಭ್ಯ ಸೇವೆಗಳನ್ನು ಪರಿಶೀಲನೆ ಮಾಡಿದರು.

ಸರ್ಕಾರಿ ಆಸ್ಪತ್ರೆಯ ಸದುಪಯೋಗ ಪಡೆಯಲು ಸೂಚನೆ:

ಆಯುಷ್ಮಾನ್‌ ಭಾರತ್‌, ಆರೋಗ್ಯ ಕರ್ನಾಟಕ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಶುಶ್ರೂಷಕರು, ಡಿ ಗ್ರೂಪ್‌ ಸಿಬ್ಬಂದಿ ಸಹ ಇದ್ದು, ಹೆಚ್ಚಿನ ಸಿಬ್ಬಂದಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚನೆ ನೀಡಿದರು. ಎಲ್ಲ ಸೌಲಭ್ಯಗಳು ದೊರೆಯುವ ಸರ್ಕಾರಿ ಆಸ್ಪತ್ರೆಗಳಲ್ಲಿ ಗ್ರಾಮೀಣ ಜನತೆ ಆರೋಗ್ಯ ಸೇವೆ ಪಡೆಯಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಆರೋಗ್ಯ ಶಿಕ್ಷಣಕ್ಕೆ ಆದ್ಯತೆ:

ತಮ್ಮ ಅಧಿಕಾರಾವಧಿಯಲ್ಲಿ ಗ್ರಾಮೀಣ ಭಾಗದ ಜನರಿಗಾಗಿ ಶಿಕ್ಷಣ, ಆರೋಗ್ಯ ಸೇವೆಯನ್ನು ಹೆಚ್ಚಿನ ಮಟ್ಟದಲ್ಲಿ ನೀಡಬೇಕು ಎಂಬುದು ತಮ್ಮ ಉದ್ದೇಶವಾಗಿತ್ತು. ಈ ನಿಟ್ಟಿನಲ್ಲಿ ಎಲ್ಲಾ ಕ್ರಮ ವಹಿಸಲಾಗಿದೆ. ಇಲ್ಲಿರುವ ವೈದ್ಯರು ಮತ್ತು ಸಿಬ್ಬಂದಿ ಸಹ ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ಸಲಹೆ ಮತ್ತು ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದೇನೆ, ಅದರಂತೆ ಸೇವೆ ತೃಪ್ತಿದಾಯಕವಾಗಿದೆ ಎಂದು ಹೇಳಿದರು.

ಉತ್ತಮ ಗುಣಮಟ್ಟದ ಸೇವೆ:

ಈ ವೇಳೆ ಮಾತನಾಡಿದ ಆಡಳಿತ ವೈದ್ಯಾಧಿಕಾರಿ ಡಾ. ವೆಂಕಟೇಶ್‌, ಶಾಸಕರು ಮತ್ತು ಜಿಲ್ಲಾ ಹಾಗೂ ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಆಸಕ್ತಿಯಿಂದಾಗಿ ನಮ್ಮ ಸಮುದಾಯ ಆರೋಗ್ಯ ಕೇಂದ್ರ ಜಿಲ್ಲೆಯಲ್ಲೇ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ.

ಮಂಡ್ಯ: 'ಖಾತೆ ಹಂಚಿಕೆಯಲ್ಲಿ ಯಾವುದೇ ಕಗ್ಗಂಟಿಲ್ಲ'

ಸುತ್ತಮುತ್ತಲ ಹಳ್ಳಿಗಳ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡುತ್ತಿದೆ ಎಂದು ಹೇಳಿದರು. ಖಾಸಗೀ ಆಸ್ಪತ್ರೆಯನ್ನು ಬಿಟ್ಟು ಎಲ್ಲ ಸೌಲಭ್ಯ ದೊರೆಯುವ ಸರ್ಕಾರಿ ಆಸ್ಪತ್ರೆಯನ್ನು ಉಪಯೋಗಿಸಿಕೊಂಡು ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಗ್ರಾಮಾಂತರ ಪ್ರದೇಶದ ನಿವಾಸಿಗಳಿಗೆ ತಿಳಿ ಹೇಳಿದರು.