ಕೋಲಾರ(ಸೆ.24): ಸರ್ಕಾರದ ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ನೀಡದೆ ವಂಚಿಸಿದ್ದಾರೆ ಎಂದು ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲೆ ಕೆ. ಶಾರದ ಅವರನ್ನು ಶಾಸಕ ಎಂ. ಕೃಷ್ಣಾರೆಡ್ಡಿ ತರಾಟೆಗೆ ತೆಗೆದುಕೊಂಡರು.

ಚಿಂತಾಮಣಿ ನಗರದ ಸರ್ಕಾರಿ ಬಾಲಕರ ಪ್ರಥಮದರ್ಜೆ ಕಾಲೇಜಿನಲ್ಲಿ ಸೋಮವಾರ ಕಂಪ್ಯೂಟರ್‌ ಲ್ಯಾಬ್‌ ಉದ್ಘಾಟಿಸಿ ಮಾತನಾಡಿದ ಶಾಸಕರು, ವಿದ್ಯಾರ್ಥಿಗಳು ಶೈಕ್ಷಣಿಕ ತಂತ್ರಜ್ಞಾನ ಕಲಿಯಲು ಸರ್ಕಾರ ಕಂಪ್ಯೂಟರ್‌ ಸೌಲಭ್ಯ ನೀಡುತ್ತಿದೆ. ಅದನ್ನು ವಿದ್ಯಾರ್ಥಿಗಳಿಗೆ ನೀಡುವಲ್ಲಿ ಪ್ರಾಂಶುಪಾಲರು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಟೀಕಿಸಿದರು.

ಪ್ರಾಂಶುಪಾಲೆ ವಿರುದ್ಧ ದೂರು:

ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಲು ಸಮಸ್ಯೆ ಇದ್ದರೆ, ತಿಳಿಸಿ ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳು ಸರ್ಕಾರಿ ಕಾಲೇಜಿನಲ್ಲಿ ಶಿಕ್ಷಣ ಪಡೆದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಆಗಮಿಸುತ್ತಾರೆ. ಇಲ್ಲಿನ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲು ಗಮನಹರಿಸುತ್ತಿಲ್ಲ. ಬೇಜವಾಬ್ದಾರಿ ಕರ್ತವ್ಯ ನಿರ್ವಹಿಸುತ್ತಿರುವ ಬಗ್ಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಆಯುಕ್ತರಿಗೆ ದೂರು ಸಲ್ಲಿಸುವುದಾಗಿ ಹೇಳಿದರು.

ವಿದ್ಯಾರ್ಥಿಗಳಿಗೆ ವಂಚಿಸಿದರೆ ಕ್ರಮ: 

ಸರ್ಕಾರಿ ಬಾಲಕರ ಕಾಲೇಜು ಅಭಿವೃದ್ಧಿಪಡಿಸಲು 2 ಕೋಟಿ ರು. ಅನುದಾನದಲ್ಲಿ ಸುಸಜ್ಜಿತವಾದ ಕಟ್ಟಡ, ಜಿಮ್‌, ಗ್ರಂಥಾಲಯ ನಿರ್ಮಿಸಲಾಗಿದೆ. ಶೈಕ್ಷಣಿಕವಾಗಿ ಅಭಿವೃದ್ಧಿಗಾಗಿ ಸರ್ಕಾರಕ್ಕೆ 2 ಕೋಟಿ ಅನುದಾನ ನೀಡಲು ಪ್ರಸ್ತಾವನೆ ಸಲ್ಲಿಸಿದ್ದು, ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ನೀಡದೆ ವಂಚಿಸಿದಲ್ಲಿ ಸುಮ್ಮನೆ ಇರುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಪದವಿಪೂರ್ವ ಶಿಕ್ಷಣ ಇಲಾಖೆ ಅಧಿಕಾರಿ ಅನುಪಮರೆಡ್ಡಿ, ಉಪನ್ಯಾಸಕ ದಿನೇಶ್‌, ನಗರಸಭೆ ಸದಸ್ಯ ಸಿ.ಎನ್‌. ಮಂಜುನಾಥ್‌ , ಜಿಪಂ ಮಾಜಿ ಸದಸ್ಯ ಗುಡೇ ಶ್ರೀನಿವಾಸರೆಡ್ಡಿ , ಕಲ್ಲಹಳ್ಳಿ ಅನಿಲ್‌ ಸೇರಿದಂತೆ ಇತರರು ಇದ್ದರು.
'ಸಮ್ಮಿಶ್ರ ಸರ್ಕಾರವಿದ್ದಾಗ ಭಾಯ್-ಭಾಯ್.. ಈಗ ವಿಲನ್-ವಿಲನ್'..!

ಸರ್ಕಾರ ಸೌಲಭ್ಯಗಳನ್ನು ಒದಗಿಸಿದ್ರೂ ಅದನ್ನು ಶಾಲೆಯ ಮಕ್ಕಳಿಗೆ ತಲುಪಿಸದಿರುವ ಬಗ್ಗೆ ಶಾಸಕ ಎಂ. ಕೃಷ್ಣಾರೆಡ್ಡಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲೆ ಕೆ. ಶಾರದ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ವಿದ್ಯಾರ್ಥಿಗಳು ಶೈಕ್ಷಣಿಕ ತಂತ್ರಜ್ಞಾನ ಕಲಿಯಲು ಸರ್ಕಾರ ಕಂಪ್ಯೂಟರ್‌ ಸೌಲಭ್ಯ ನೀಡುತ್ತಿದೆ. ಅದನ್ನು ವಿದ್ಯಾರ್ಥಿಗಳಿಗೆ ನೀಡುವಲ್ಲಿ ಪ್ರಾಂಶುಪಾಲರು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಟೀಕಿಸಿದ್ದಾರೆ.

ಹೆಚ್ಚಿನ ಜಿಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ