ಕೋಲಾರ: ಕಾಂಗ್ರೆಸ್ ಕಾರ್ಯಕರ್ತನ ಕೊಲೆ, ಮೃತರ ಕುಟುಂಬಕ್ಕೆ ಶಾಸಕ ನಂಜೇಗೌಡ ಸಾಂತ್ವನ
ಅನಿಲ್ ಕುಮಾರ್ ನಿಷ್ಠಾವಂತ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿದ್ದ ಅಲ್ಲದೆ ಗ್ರಾಮ ಪಂಚಾಯಿತಿ ಸದಸ್ಯನಾಗಿ ಗ್ರಾಮದ ಅಭಿವೃದ್ಧಿಗೆ ಶ್ರಮಿಸುತ್ತಿದ್ದ ಅನಿಲ್ ಅವರ ರಾಜಕೀಯ ಅಭಿವೃದ್ಧಿಯನ್ನು ಸಹಿಸದ ಆರೋಪಿಗಳು ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಪಕ್ಷದ ನಿಷ್ಠಾವಂತ ಕಾರ್ಯಕರ್ತನನ್ನು ಕೊಲೆ ಮಾಡಿದ್ದಾರೆ. ಇಂತಹ ಪ್ರಕರಣಗಳು ತಾಲೂಕಿನಲ್ಲಿ ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಲು ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದ ಶಾಸಕ ಕೆ.ವೈ ನಂಜೇಗೌಡ.
ವರದಿ: ದೀಪಕ್, ಏಷಿಯಾನೆಟ್ ಸುವರ್ಣ ನ್ಯೂಸ್, ಕೋಲಾರ
ಕೋಲಾರ(ಅ.31): ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಹಾಗೂ ಗ್ರಾಮ ಪಂಚಾಯಿತಿ ಸದಸ್ಯ ಮಿಣಸಂದ್ರ ಗ್ರಾಮದ ಅನಿಲ್ ಕುಮಾರ್ ಅವರನ್ನು ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಪಟ್ಟಣದ ಪೊಲೀಸರು ಈಗಾಗಲೇ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾದ ಇನ್ನಿಬ್ಬರು ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಅವರ ಕುಟುಂಬಕ್ಕೆ ನ್ಯಾಯ ಒದಗಿಸುವುದಾಗಿ ಮಾಲೂರು ಶಾಸಕ ಕೆ.ವೈ.ನಂಜೇಗೌಡ ಹೇಳಿದರು.
10 ದಿನಗಳ ಯುರೋಪ್ ಪ್ರವಾಸ ಮುಗಿಸಿ ಬಂದಿರುವ ಶಾಸಕ ಕೆ.ವೈ.ನಂಜೇಗೌಡ ನೇರವಾಗಿ ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಮಿಣಸಂದ್ರ ಗ್ರಾಮದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಹಾಗೂ ಗ್ರಾಮ ಪಂಚಾಯಿತಿ ಸದಸ್ಯ ಮೃತ ಅನಿಲ್ ಕುಮಾರ್ ಅವರ ನಿವಾಸಕ್ಕೆ ತೆರಳಿದರು. ಅ.21 ರಂದು ಬರ್ಬರವಾಗಿ ಕೊಲೆಯಾಗಿದ್ದ ಆಪ್ತ ಅನಿಲ್ ಕುಮಾರ್ ಅವರ ಕುಟುಂಬಕ್ಕ ಸಾಂತ್ವನ ಹೇಳಿ ಮಾತನಾಡಿದ ಶಾಸಕ ಕೆ.ವೈ ನಂಜೇಗೌಡ ಅವರು, ಅನಿಲ್ ಕುಮಾರ್ ನಿಷ್ಠಾವಂತ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿದ್ದ ಅಲ್ಲದೆ ಗ್ರಾಮ ಪಂಚಾಯಿತಿ ಸದಸ್ಯನಾಗಿ ಗ್ರಾಮದ ಅಭಿವೃದ್ಧಿಗೆ ಶ್ರಮಿಸುತ್ತಿದ್ದ ಅನಿಲ್ ಅವರ ರಾಜಕೀಯ ಅಭಿವೃದ್ಧಿಯನ್ನು ಸಹಿಸದ ಆರೋಪಿಗಳು ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಪಕ್ಷದ ನಿಷ್ಠಾವಂತ ಕಾರ್ಯಕರ್ತನನ್ನು ಕೊಲೆ ಮಾಡಿದ್ದಾರೆ. ಇಂತಹ ಪ್ರಕರಣಗಳು ತಾಲೂಕಿನಲ್ಲಿ ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಲು ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಕೋಲಾರ ಜಿಲ್ಲೆಯ ಮೂವರು ಸಾಧಕರಿಗೆ ಒಲಿದ ರಾಜ್ಯೋತ್ಸವ ಪ್ರಶಸ್ತಿ
ಅನಿಲ್ ಕುಮಾರ್ ನನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಗಳ ಪೈಕಿ ಐವರನ್ನು ಪಟ್ಟಣದ ಪೊಲೀಸರು ಬಂಧಿಸಿ ಈಗಾಗಲೇ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು ಇನ್ನುಳಿದ ಇಬ್ಬರು ಆರೋಪಿಗಳನ್ನು ಬಂಧಿಸಲು ಪೊಲೀಸರು ಈಗಾಗಲೇ ತನಿಖೆ ಕೈಗೊಂಡಿದ್ದಾರೆ. ನಾನು ವಿದೇಶ ಪ್ರವಾಸದಲ್ಲಿದ್ದರೂ ಸಹ ಅನಿಲ್ ಕುಮಾರ್ ಅವರ ಕೊಲೆಯಾದ ಆರೋಪಿಗಳನ್ನು ಬಂಧಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಗೃಹ ಮಂತ್ರಿ ಬಳಿಯೂ ಚರ್ಚಿಸಲಾಗಿತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಕೊಲೆ ಪ್ರಕರಣದಲ್ಲಿ ಭಾಗಿಯಾದವರನ್ನು ಬಂಧಿಸಿದ್ದು ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಮೇಲೆ ಯಾವುದೇ ರೀತಿಯ ದೌರ್ಜನ್ಯ ಹಲ್ಲೇ ಅಂತಹ ಪ್ರಕರಣಗಳು ನಡೆದರೆ ಪೊಲೀಸರು ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.
ಮೃತ ಅನಿಲ್ ಕುಮಾರ್ ಕುಟುಂಬದ ಪರವಾಗಿ ತಾಲೂಕು ಆಡಳಿತ ಹಾಗೂ ಕಾಂಗ್ರೆಸ್ ಪಕ್ಷ ನಿಲ್ಲುತ್ತದೆ ಅವರು ಕುಟುಂಬಕ್ಕೆ ನ್ಯಾಯ ಒದಗಿಸುವ ಜವಾಬ್ದಾರಿ ತಾಲೂಕು ಆಡಳಿತದ ಜವಾಬ್ದಾರಿಯಾಗಿದೆ ಈ ಗ್ರಾಮಕ್ಕೆ ಬಹುದಿನಗಳಿಂದ ಅಗತ್ಯವಿರುವ ಹೊಸೂರು ಮುಖ್ಯ ರಸ್ತೆಯಿಂದ ಮಿನ ಸಂದ್ರ ಗ್ರಾಮದ ರಸ್ತೆಯನ್ನು ಶೀಘ್ರದಲ್ಲಿಯೇ ಅಭಿವೃದ್ಧಿಪಡಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಅಧ್ಯಕ್ಷೆ ರತ್ನಮ್ಮ, ತಹಶೀಲ್ದಾರ್ ರಮೇಶ್, ಇಒ ಕೃಷ್ಣಪ್ಪ, ಪೊಲೀಸ್ ನಿರೀಕ್ಷಕ ವಸಂತ್ ಸೇರಿದಂತೆ ಇನ್ನಿತರರು ಹಾಜರಿದ್ದರು.