Haveri; ಶಾಸಕ ನೆಹರೂ ಓಲೆಕಾರ್ ಅವರ 40 ಬೆಂಬಲಿಗರು ಪೊಲೀಸರ ವಶಕ್ಕೆ
ಹಾವೇರಿ ನಗರದ ವಕೀಲರ ಸಂಘದ ಕಟ್ಟಡ ಉದ್ಘಾಟನಾ ಸಮಾರಂಭದ ಆಹ್ವಾನ ಪತ್ರಿಕೆಯಲ್ಲಿ ಸ್ಥಳೀಯ ಶಾಸಕ ಬಿಜೆಪಿಯ ನೆಹರು ಓಲೇಕಾರ ಅವರ ಹೆಸರನ್ನು ಕೈಬಿಟ್ಟು, ಶಿಷ್ಟಾಚಾರ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ ಸುಮಾರು 40 ಬೆಂಬಲಿಗರನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ.
ಹಾವೇರಿ (ಆ.21): ಹಾವೇರಿ ನಗರದ ವಕೀಲರ ಸಂಘದ ಕಟ್ಟಡ ಉದ್ಘಾಟನಾ ಸಮಾರಂಭದ ಆಹ್ವಾನ ಪತ್ರಿಕೆಯಲ್ಲಿ ಸ್ಥಳೀಯ ಶಾಸಕ ಬಿಜೆಪಿಯ ನೆಹರು ಓಲೇಕಾರ ಅವರ ಹೆಸರನ್ನು ಕೈಬಿಟ್ಟು, ಶಿಷ್ಟಾಚಾರ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ ನೆಹರು ಓಲೇಕಾರ ಶಾಸಕರ ಸುಮಾರು 40 ಬೆಂಬಲಿಗರನ್ನು ಭಾನುವಾರ ಪೊಲೀಸರು ಬಂಧಿಸಿ, ವಾಹನದಲ್ಲಿ ಕರೆದೊಯ್ದರು. ತಾಲ್ಲೂಕು ಪಂಚಾಯಿತಿ ಎದುರು ಮಧ್ಯಾಹ್ನ 2 ಗಂಟೆಗೆ ಸೇರಿದ ಬೆಂಬಲಿಗರು, ಕಾರ್ಯಕ್ರಮ ನಡೆಯುತ್ತಿದ್ದ ಕೋರ್ಟ್ ಆವರಣದತ್ತ ಹೊರಟರು. ತಕ್ಷಣ ಪ್ರತಿಭಟನಾಕಾರರನ್ನು ತಡೆದ ಪೊಲೀಸರು, ನ್ಯಾಯಾಂಗ ಇಲಾಖೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವುದು ಸರಿಯಲ್ಲ ಎಂದು ಬೆಂಬಲಿಗರನ್ನು ಮನವೊಲಿಸಿದರು. ನಂತರ ನಗರದ ಹೊಸಮನಿ ಸಿದ್ದಪ್ಪ ವೃತ್ತದ ಬಳಿ ಒಗ್ಗೂಡಿದ ಬೆಂಬಲಿಗರು, ವಕೀಲರ ಸಂಘದ ಅಧ್ಯಕ್ಷರ ವಿರುದ್ಧ ಘೋಷಣೆ ಕೂಗಿದರು. ತಕ್ಷಣ ಪೊಲೀಸರು ಪ್ರತಿಭಟನಾ ನಿರತರನ್ನು ವಶಕ್ಕೆ ಪಡೆದರು. ವಕೀಲರ ಸಂಘದ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಹೈಕೋರ್ಟ್ ನ್ಯಾಯಮೂರ್ತಿ ಸಚಿನ್ ಎಸ್.ಮಗದುಮ್ ಭಾಗವಹಿಸಿದ್ದ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಒದಗಿಸಿದ್ದರು.
‘ನನ್ನನ್ನು ಕಡೆಗಣಿಸಿ ಸಮಾರಂಭ ಏರ್ಪಡಿಸಿರುವುದು ಅಕ್ಷಮ್ಯ. ಕಾರ್ಯಕ್ರಮದ ವಿರುದ್ಧ ಕಪ್ಪು ಬಟ್ಟೆ ಪ್ರದರ್ಶಿಸಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಲಿದ್ದಾರೆ’ ಎಂದು ಶಾಸಕ ನೆಹರು ಓಲೇಕಾರ ಶನಿವಾರ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಪೊಲೀಸರು ಕಪ್ಪುಬಟ್ಟೆ ಪ್ರದರ್ಶಿಸದಂತೆ ತಡೆಯುವಲ್ಲಿ ಯಶಸ್ವಿಯಾದರು.
ಶೋಷಿತರ ಏಳ್ಗೆಗೆ ಶ್ರಮಿಸಿದ ಧೀಮಂತ ನಾಯಕ ಅರಸು: ನೆಹರು ಓಲೇಕಾರ
ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ಶೋಷಿತರ ಸಮಗ್ರ ಅಭಿವೃದ್ಧಿಯ ಹರಿಕಾರ, ಹಿಂದುಳಿದ ವರ್ಗಗಳ ಮೇಲೆತ್ತಲು ನಿರಂತರ ಶ್ರಮಿಸಿದ ಧೀಮಂತ ನಾಯಕ ಎಂದು ಶಾಸಕ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಆಯೋಗದ ಅಧ್ಯಕ್ಷ ನೆಹರು ಓಲೇಕಾರ ಹೇಳಿದರು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರ 107ನೇ ಜನ್ಮ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಡಿ. ದೇವರಾಜ ಅರಸು ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಸಾಮಾಜಿಕ ಪರಿವರ್ತನೆಯ ಮಾರ್ಗದಲ್ಲಿ ಅಸಮಾನತೆಯನ್ನು ತೊಡೆದು ವ್ಯಕ್ತಿಯ ಸ್ವಾತಂತ್ರ್ಯಕ್ಕೆ ಬೆಲೆ ನೀಡಿದ ಅರಸು ಅವರು ಜೀತವಿಮುಕ್ತಿ ಜಾರಿಗೆ ತಂದರು. ಹಿಂದುಳಿದ ವರ್ಗಗಳ ಅಭ್ಯುದಯಕ್ಕಾಗಿ ಹತ್ತು ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದರು. ಉಳುವವನೇ ಹೊಲದೊಡೆಯ, ವಿದ್ಯಾರ್ಥಿನಿಲಯ, ವೃದ್ಧಾಪ್ಯವೇತನ, ಸ್ಟೈಫಂಡ, ಭಾಗ್ಯಜ್ಯೋತಿ ಹೀಗೆ ಹಲವಾರು ಜನಪರ ಯೋಜನೆಗಳನ್ನು ಅಸ್ತಿತ್ವಕ್ಕೆ ತಂದ ಅರಸು ಅವರು, ಹಿಂದುಳಿದ ವರ್ಗದ ಜನರು ಹೊಸ ಬದುಕು ಪಡೆದು ಹೊಸ ಚೈತನ್ಯದಿಂದ ಬದುಕಲು ರೂವಾರಿಗಳಾದರು ಎಂದರು.
Cabinet Reshuffle: ಅಸಮರ್ಥರು, ಹಿರಿಯ ಸಚಿವರನ್ನು ಕ್ಯಾಬಿನೆಟ್‌ನಿಂದ ಕೈ ಬಿಡಿ: ಓಲೇಕಾರ್ ಆಗ್ರಹ
ಇಂದಿನ ಯುವ ಪೀಳಿಗೆ ಡಿ. ದೇವರಾಜ ಅರಸು ಅವರ ಹೆಸರು ಉಳಿಸುವ ಕೆಲಸ ಮಾಡಬೇಕು. ಅವರ ಕಾರ್ಯಗಳನ್ನು ಸ್ಮರಿಸಬೇಕು ಹಾಗೂ ಅವರು ಹಾಕಿಕೊಟ್ಟಹಾದಿಯಲ್ಲಿ ನಡೆಯಬೇಕು. ಹಿಂದುಳಿದ ವರ್ಗಗಳ ಮಕ್ಕಳು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕರೆ ನೀಡಿದರು.
ಬಿಜೆಪಿ ಶಾಸಕ ನೆಹರು ಓಲೇಕಾರ ಕುಟುಂಬದ ದಬ್ಬಾಳಿಕೆಯಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೈತರು
ಸನ್ಮಾನ: ಜಿಲ್ಲಾ ಮಟ್ಟದ ಡಿ. ದೇವರಾಜ ಅರಸು ಪ್ರಶಸ್ತಿಗೆ ಆಯ್ಕೆಯಾದ ಜಲಸಂಪನ್ಮೂಲ ಇಲಾಖೆಯ ಸರ್ಕಾರದ ನಿವೃತ್ತ ಕಾರ್ಯದರ್ಶಿ ಹಾಗೂ ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯರಾಗಿದ್ದ ಚಂದ್ರಶೇಖರ .50 ಸಾವಿರ ಚೆಕ್, ಪ್ರಮಾಣಪತ್ರ ನೀಡಿ ಸನ್ಮಾನಿಸಲಾಯಿತು.