ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅವರು ಕೊಪ್ಪಳ-ತಳಕಲ್-ಜಿಲ್ಲಾಧಿಕಾರಿಗಳ ಕಚೇರಿ ಮಾರ್ಗದಲ್ಲಿ ನೂತನ ನಗರ ಸಾರಿಗೆ ಬಸ್‌ಗೆ ಚಾಲನೆ ನೀಡಿದರು. ಈ ಹೊಸ ಸೇವೆಯು ಸಾರ್ವಜನಿಕರು, ವಿದ್ಯಾರ್ಥಿಗಳು ಮತ್ತು ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಅನುಕೂಲ ಕಲ್ಪಿಸಲಿದೆ.

ಕೊಪ್ಪಳ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕೊಪ್ಪಳ ವಿಭಾಗದಿಂದ ಕೊಪ್ಪಳ-ತಳಕಲ್-ಜಿಲ್ಲಾಧಿಕಾರಿಗಳ ಕಚೇರಿ ಮಾರ್ಗದಲ್ಲಿ ಇಂದಿನಿಂದ ನೂತನ ನಗರ ಸಾರಿಗೆ ಆರಂಭಿಸಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಗರದ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ನೂತನ ಬಸ್ ಸಂಚಾರಕ್ಕೆ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು.

ಕೊಪ್ಪಳ-ತಳಕಲ್-ಡಿಸಿ ಆಫೀಸ್ ಮಾರ್ಗದಲ್ಲಿ ನೂತನ ನಗರ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕೆಂಬ ಸಾರ್ವಜನಿಕ ಪ್ರಯಾಣಿಕರ ಮನವಿಗೆ ಸ್ಪಂದಿಸಿ ನೂತನ ಬಸ್ ಸಂಚಾರ ಆರಂಭಿಸಲಾಗಿದೆ. ಇದರಿಂದ ಸಾರ್ವಜನಿಕರಿಗೆ ಕೊಪ್ಪಳ ನಗರ ಸಂಚಾರ ಮತ್ತು ಜಿಲ್ಲಾಸ್ಪತ್ರೆ, ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಲು ಅನುಕೂಲವಾಗಲಿದೆ. 

ಯಾರಿಗೆಲ್ಲಾ ಅನುಕೂಲ ಆಗಲಿದೆ?

ತಳಕಲ್ ಇಂಜಿನಿಯರಿಂಗ್ ಕಾಲೇಜು, ಕೊಪ್ಪಳ ವಿಶ್ವವಿದ್ಯಾಲಯಕ್ಕೆ ಹೋಗುವ ವಿದ್ಯಾರ್ಥಿಗಳಿಗೂ ನೂತನ ಬಸ್ ಸಂಚಾರ ಸಹಕಾರಿಯಾಗಲಿದೆ‌. ಅಲ್ಲದೇ ನಮ್ಮ ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ಮಹಿಳಾ ಫಲಾನುಭವಿಗಳು ಈ ನಗರ ಸಾರಿಗೆ ಮೂಲಕ ಉಚಿತ ಬಸ್ ಪ್ರಯಾಣದ ಸೌಲಭ್ಯ ಪಡೆದುಕೊಳ್ಳಬಹುದಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಮಂಜುನಾಥ ಜಿ.ಗೊಂಡಬಾಳ, ಕೊಪ್ಪಳ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಬಾಲಚಂದ್ರನ್, ಸದಸ್ಯ ಪರುಶುರಾಮ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕೊಪ್ಪಳ ವಿಭಾಗೀಯ ನಿಯಂತ್ರಣಾಧಿಕಾರಿ ಜಿ. ಸಿನಯ್ಯ, ಕಾರ್ಮಿಕ ಕಲ್ಯಾಣ ಅಧಿಕಾರಿ ಸತ್ಯನಾರಾಯಣ, ಅಂಕಿ ಸಂಖ್ಯೆ ಅಧಿಕಾರಿ ಎಂ.ಡಿ. ಶಬ್ಬೀರ್, ಲೆಕ್ಕಪತ್ರ ಅಧಿಕಾರಿ ಚಿತ್ತವಡಿಗಪ್ಪ, ಘಟಕ ವ್ಯವಸ್ಥಾಪಕ ರಮೇಶ ಚಿಣಗಿ ಸೇರಿದಂತೆ ಇತರೆ ಜನಪ್ರತಿನಿಧಿ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕೊಪ್ಪಳ ವಿಭಾಗದ ಸಿಬ್ಬಂದಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ: Gangavathi Temple News: ವಿಜಯನಗರ ಕಾಲದ ನಿಧಿಗಾಗಿ ಕಳ್ಳರ ಬೇಟೆ: ಕೊನೆಗೆ ನಡೆದಿದ್ದು ಏನು?

ಇದನ್ನೂ ಓದಿ: TB Dam ನೋಡೋಕೆ ಮುಗಿಬಿದ್ದ ಪ್ರವಾಸಿಗರು!; ಲೇಸರ್ ಲೈಟಿಂಗ್ ನೆರಳಿನಲ್ಲಿ ಚಿನ್ನದ ನದಿಯಂತಾದ ತುಂಗಭದ್ರಾ ಒಡಲು!