ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್ ವಿತರಣೆ

ಶೇಕಡಾ 40 ಕ್ಕೂ ಅಧಿಕ ಅಂಧತ್ವ ಹೊಂದಿರುವ ವಿದ್ಯಾರ್ಥಿಗಳಿಗೆ  ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಟಾಕಿಂಗ್ ಲ್ಯಾಪ್‌ಟಾಪ್ ವಿತರಿಸಿದರು.

MLA Raghupathi Bhat Distributes Talking Laptops to Blind Students

ಉಡುಪಿ (ಆ.13) : ಶೇಕಡಾ 40 ಕ್ಕೂ ಅಧಿಕ ಅಂಧತ್ವ ಹೊಂದಿರುವ ವಿದ್ಯಾರ್ಥಿಗಳಿಗೆ ಶಾಸಕ ಕೆ. ರಘುಪತಿ ಭಟ್ ರವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಟಾಕಿಂಗ್ ಲ್ಯಾಪ್‌ಟಾಪ್ ವಿತರಿಸಿದರು.

ರಾಜ್ಯ ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಕರ್ನಾಟಕ ಸರ್ಕಾರ ಇವರ ವತಿಯಿಂದ ಶೇಕಡಾ 40ಕ್ಕೂ ಅಧಿಕ ಅಂಧತ್ವ ಹೊಂದಿರುವ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಲ್ಯಾಪ್‌ಟಾಪ್ ಮಂಜೂರು ಮಾಡಲಾಗಿದೆ.

ಕೊರೋನಾ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಆನ್ ಲೈನ್ ಶಿಕ್ಷಣಕ್ಕೆ ಅನುಕೂಲತೆ ಒದಗಿಸುವ ನಿಟ್ಟಿನಲ್ಲಿ ಲ್ಯಾಪ್ ಟಾಪ್ವಿತರಣೆಯೂ ಸಾಕಷ್ಟು ಅನುಕೂಲತೆ ಒದಗಿಸಿದಂತಾಗಿದೆ. 

ಕೊರೋನಾ ಭೀತಿ ಮಧ್ಯೆ ಪಿಯುಸಿಗೆ ಪ್ರವೇಶ ಪ್ರಕ್ರಿಯೆ ಆರಂಭ: ಮಾರ್ಗಸೂಚಿ ಪ್ರಕಟ

ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ, ಜಿಲ್ಲಾಧಿಕಾರಿಗಳಾದ ಜಿ. ಜಗದೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರೀತಿ ಗೆಲ್ಹೋತ್, ಅಪರ ಜಿಲ್ಲಾಧಿಕಾರಿಗಳಾದ ಸದಾಶಿವ ಪ್ರಭು ಮತ್ತು ಜಿಲ್ಲಾ ಅಂಗವಿಕಲ ಕಲ್ಯಾಣ ಅಧಿಕಾರಿಗಳಾದ ಚಂದ್ರ ನಾಯ್ಕ್ ಉಪಸ್ಥಿತರಿದ್ದರು.

Latest Videos
Follow Us:
Download App:
  • android
  • ios