ಭದ್ರಾವತಿ [ಜ.19]: ನಗರದ ಮೈಸೂರು ಕಾಗದ ಕಾರ್ಖಾನೆ ಕಾರ್ಮಿಕರಿಗೆ ಸೇವಾ ಭದ್ರತೆ ಒದಗಿಸುವಂತೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ ರೇಣುಕಾಚಾರ್ಯ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರಿಗೆ ಮನವಿ ಮಾಡಿದ್ದಾರೆ. 

ಬಸ್ ಚಲಾಯಿಸಿ ಹೊನ್ನಾಳಿ ಶಾಸಕನ ಹೀರೋಯಿಸಂ: ಅಧಿಕಾರಿಗಳಿಗೆ ಸಂಕಷ್ಟ!.

ಕಾರ್ಮಿಕ ಇಲಾಖೆ ಈ ಹಿಂದೆ ಕಾರ್ಖಾನೆಯನ್ನು ಸಮಾಪ್ತಿಗೊಳಿಸುವಂತೆ ಹೊರಡಿಸಿದ್ದ ಆದೇಶದ ವಿರುದ್ಧ ಕಾರ್ಮಿಕ ಸಂಘ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿ ತುರ್ತು ವಿಚಾರಣೆ ಕೈಗೊಳ್ಳುವಂತೆ ಮನವಿ ಮಾಡಿತ್ತು. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮನವಿಗೆ ಸ್ಪಂದಿಸಿದ ನ್ಯಾಯಾಲಯ ವಿಚಾರಣೆ ನಡೆಸಿ ಕಾರ್ಮಿಕ ಇಲಾಖೆ ಸಮಾಪ್ತಿಗೊಳಿಸುವ ಆದೇಶ ರದ್ದುಪಡಿಸಿದೆ.

ಈ ಹಿನ್ನೆಲೆಯಲ್ಲಿ ಕಾರ್ಮಿಕ ಸಂಘ ಕಾರ್ಮಿಕರಿಗೆ ಸೇವಾ ಭದ್ರತೆ ಒದಗಿಸುವಂತೆ ಎಂ.ಪಿ ರೇಣುಕಾಚಾರ್ಯರಿಗೆ ಒತ್ತಾಯಿಸಿತ್ತು. ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ರೇಣುಕಾರ್ಯ, ಸೂಕ್ತ ನಿರ್ದೇಶನ ನೀಡುವಂತೆ ಮನವಿ ಮಾಡಿದ್ದಾರೆ.