ಮೈಸೂರು(ಅ.19): ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಎ.ರಾಮದಾಸ್‌ ಅವರಿಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು(ಸೋಮವಾರ) ಅವರನ್ನ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. 

ಇಂದು ಬೆಳಿಗ್ಗೆಯಿಂದ ರಾಮದಾಸ್‌ ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು.  ಹೀಗಾಗಿ ತಕ್ಷಣ ರಾಮದಾಸ್‌ ಅವರನ್ನ ನಗರದ ಜಯದೇವ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

'ಕಾಂಗ್ರೆಸ್‌ ಸರ್ಕಾರದ ರಾಜ್ಯಗಳಲ್ಲೇಕೆ ಗಲಭೆ ಇಲ್ಲ..'?

ಮುಂಜಾಗ್ರತ ಕ್ರಮವಾಗಿ ವೈದ್ಯರು ಎಸ್.ಎ.ರಾಮದಾಸ್‌ ಅವರಿಗೆ ಕೋವಿಡ್ ಪರೀಕ್ಷೆಗೆ ಮಾಡಿಸಲು ಮುಂದಾಗಿದ್ದಾರೆ. ಎಸ್.ಎ.ರಾಮದಾಸ್‌ ಅವರು ಕಳೆದ ಎರಡು ದಿನಗಳಿಂದ ಹಿಂದಷ್ಟೇ ದಸರಾ ಸಮಾರಂಭದಲ್ಲಿ ಭಾಗವಹಿಸಿದ್ದರು. ರಾಮದಾಸ್‌ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿರುವ ಬಗ್ಗೆ ಆಸ್ಪತ್ರೆ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.