ಪಡಿತರ ಪಡೆಯಲು ಬರುವವರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದ ಮಲ್ಲಸಂದ್ರ ಸರ್ಕಾರಿ ನ್ಯಾಯಬೆಲೆ ಅಂಗಡಿಗೆ ಶಾಸಕ ಎಸ್.ಮುನಿರಾಜು ಖಡಕ್ ಎಚ್ಚರಿಕೆ ನೀಡಿದ್ದಾರೆ. ನ್ಯಾಯಬೆಲೆ ಅಂಗಡಿ ವಿರುದ್ಧ ಹಲವು ಆರೋಪಗಳು ಕೇಳಿಬಂದಿದ್ದವು.
ಪೀಣ್ಯ ದಾಸರಹಳ್ಳಿ (ಜು.13): ಪಡಿತರ ಪಡೆಯಲು ಬರುವವರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದ ಮಲ್ಲಸಂದ್ರ ಸರ್ಕಾರಿ ನ್ಯಾಯಬೆಲೆ ಅಂಗಡಿಗೆ ಶಾಸಕ ಎಸ್.ಮುನಿರಾಜು ಖಡಕ್ ಎಚ್ಚರಿಕೆ ನೀಡಿದ್ದಾರೆ. ನ್ಯಾಯಬೆಲೆ ಅಂಗಡಿ ವಿರುದ್ಧ ಹಲವು ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಆಹಾರ ನಿರೀಕ್ಷಕ ಆನಂದಕುಮಾರ ಹಾಗೂ ತೂಕ ಮತ್ತು ಮಾಪನ ಅಧಿಕಾರಿಗಳೊಂದಿಗೆ ಶಾಸಕರು ನ್ಯಾಯಬೆಲೆ ಅಂಗಡಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಅಲ್ಲದೆ ಸಾರ್ವಜನಿಕರಿಂದ ದೂರು ಆಲಿಸಿದರು.
ಬೆಂಗಳೂರು ಉತ್ತರ ತಾಲೂಕು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಮಲ್ಲಸಂದ್ರ ವಾರ್ಡ್‌ನಲ್ಲಿರುವ ಸರ್ಕಾರಿ ನ್ಯಾಯಬೆಲೆ ಅಂಗಡಿಯಲ್ಲಿ ಸಾಕಷ್ಟುಅವ್ಯವಹಾರ ಹಾಗೂ ಸಾರ್ವಜನಿಕರಿಗೆ ಕಿರುಕುಳದ ಜೊತೆಗೆ ತಿಂಗಳಲ್ಲಿ ಎರಡು ದಿನ ಮಾತ್ರ ಪಡಿತರ ವಿತರಣೆ ಮಾಡುತ್ತಾರೆ ಎಂಬ ಹಲವು ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡದೊಂದಿಗೆ ಬುಧವಾರ ಶಾಸಕರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Flower Show 2023: ಆ.4ರಿಂದ 15ರವರೆಗೆ ಲಾಲ್ಬಾಗ್ನಲ್ಲಿ ಫಲಪುಷ್ಪ ಪ್ರದರ್ಶನ
ಈ ವೇಳೆ ಪಡಿತರದಾರರು ಶಾಸಕರು ಹಾಗೂ ಅಧಿಕಾರಿಗಳ ಬಳಿ ಪಡಿತರ ವಿತರಿಸುವವರ ವಿರುದ್ಧ ಆರೋಪಗಳ ಸುರಿಮಳೆಯನ್ನೇ ಸುರಿಸಿದರು. ತಿಂಗಳಲ್ಲಿ ಎರಡು ದಿನ ಮಾತ್ರ ಪಡಿತರ ಕೊಡುತ್ತಾರೆ. ಈ ಬಗ್ಗೆ ಪ್ರಶ್ನಿಸಿದರೆ ನಿಮ್ಮ ರೇಷನ್ ಕಾರ್ಡ್ ರದ್ದುಪಡಿಸುತ್ತೇವೆ ಎಂದು ಬೆದರಿಸುತ್ತಾರೆ. ಜೊತೆಗೆ ಸೋಪು, ಅಡುಗೆ ಎಣ್ಣೆ, ಉಪ್ಪು, ಇತ್ಯಾದಿ ವಸ್ತುಗಳನ್ನು ನ್ಯಾಯಬೆಲೆ ಅಂಗಡಿಯಲ್ಲಿ ಖರೀದಿ ಮಾಡಲೇಬೇಕು. ಇಲ್ಲದಿದ್ದರೆ ರೇಷನ್ ಕೊಡುವುದಿಲ್ಲ ಎಂದು ಅಧಿಕಾರಿಗಳು ಹಾಗೂ ಶಾಸಕರ ಬಳಿ ದೂರು ಹೇಳಿದರು.
ಬಿಬಿಎಂಪಿ ಸಿಬ್ಬಂದಿಯ ವರ್ಗಕ್ಕೂ ಮುನ್ನ ನನಗೆ ತಿಳಿಸಿ: ಡಿಕೆಶಿ
ಆ ಸಮಯದಲ್ಲಿ ನ್ಯಾಯಬೆಲೆ ಅಂಗಡಿಯವರ ಮೇಲೆ ಕೆಂಡಮಂಡಾಲದ ಶಾಸಕರು, ಈ ರೀತಿಯ ದರ್ಪ ದಬ್ಬಾಳಿಕೆಗಳು ದಾಸರಹಳ್ಳಿ ಕ್ಷೇತ್ರದಲ್ಲಿ ನಡೆಯಬಾರದು. ಸರ್ಕಾರ ನೀಡಿರುವ ಐದು ಕೆಜಿ ಅಕ್ಕಿಯನ್ನು ತಿಂಗಳ ಎಲ್ಲಾ ದಿನಗಳಲ್ಲಿ ನೀಡಬೇಕು. ಆ ರೀತಿ ನೀಡಲು ಆಗದಿದ್ದರೆ ಬಿಟ್ಟು ಬಿಡಿ. ಆಹಾರ ಸಚಿವರ ಹತ್ತಿರ ಮಾತನಾಡಿ ಯಾವುದಾದರೂ ಮಹಿಳಾ ಸ್ವಸಹಾಯ ಸಂಘದ ಮಹಿಳೆಯರಿಗೆ ನೀಡುವ ಪ್ರಯತ್ನ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
