Asianet Suvarna News Asianet Suvarna News

ಅರುಣ್‌ ಸಿಂಗ್‌ ಭೇಟಿ ಮಾಡಿದ ಶಾಸಕ ಸೋಮಶೇಖರ ರೆಡ್ಡಿ

* ವಯಸ್ಸಿನ ಕಾರಣವೊಡ್ಡಿ ನಾಯಕತ್ವ ಬದಲಾವಣೆ ಪ್ರಸ್ತಾಪ ಸರಿಯಲ್ಲ
* ರಾಜ್ಯದಲ್ಲಿ ಬಿಜೆಪಿ ಅಧಿಕ ಸ್ಥಾನಗಳು ಗೆಲ್ಲಲು ಯಡಿಯೂರಪ್ಪ ನಾಯಕತ್ವವೇ ಕಾರಣ
* ಬಿಎಸ್ವೈ ಅವರನ್ನೇ ಮುಂದುವರಿಸಬೇಕು ಎಂದು ಅರುಣ್ಸಿಂಗ್ಬಳಿ ಮನವಿ
 

MLA Somashekhar Reddy Met Arun Singh grg
Author
Bengaluru, First Published Jun 19, 2021, 3:37 PM IST
  • Facebook
  • Twitter
  • Whatsapp

ಬಳ್ಳಾರಿ(ಜೂ.19): ​ನಗರ ಬಿಜೆಪಿ ಶಾಸಕ ಜಿ. ಸೋಮಶೇಖರ ರೆಡ್ಡಿ ಅವರು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಅವರನ್ನು ಶುಕ್ರವಾರ ಭೇಟಿ ಮಾಡಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರನ್ನು ಮುಂದುವರಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸಂಬಂಧ ನಡೆಯುತ್ತಿರುವ ರಾಜಕೀಯ ಬೆಳವಣಿಗೆ ಕುರಿತು ಕಳೆದ ಎರಡು ದಿನಗಳ ಹಿಂದೆಯಷ್ಟೇ ಪ್ರತಿಕ್ರಿಯಿಸಿದ್ದ ಶಾಸಕ ಜಿ. ಸೋಮಶೇಖರ ರೆಡ್ಡಿ ಅವರು, ಯಾವುದೇ ಬಣಗಳಿಂದ ನನಗೆ ಕರೆ ಬಂದಿಲ್ಲ ಎಂದು ಹೇಳಿದ್ದರು.

ತಗ್ಗಿದ ಕೊರೋನಾ: 1,000 ಬೆಡ್‌ನ ಜಿಂದಾಲ್‌ ಕೋವಿಡ್‌ ಆಸ್ಪತ್ರೆ ಬಂದ್‌

ಶುಕ್ರವಾರ ಬೆಂಗಳೂರಿಗೆ ತೆರಳಿ ಅರುಣ್ಸಿಂಗ್ಅವರನ್ನು ಪಕ್ಷದ ಕಚೇರಿಯಲ್ಲಿ ಭೇಟಿ ಮಾಡಿದ ಶಾಸಕ ಸೋಮಶೇಖರ ರೆಡ್ಡಿ ಅವರು, ಬಿ.ಎಸ್. ಯಡಿಯೂರಪ್ಪ ಅವರನ್ನು ಇನ್ನು ಎರಡು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಸಬೇಕು. ವಯಸ್ಸಿನ ಕಾರಣವೊಡ್ಡಿ ನಾಯಕತ್ವ ಬದಲಾವಣೆ ಪ್ರಸ್ತಾಪ ಸರಿಯಲ್ಲ. ಅವರ ನೇತೃತ್ವದಲ್ಲಿಯೇ ಚುನಾವಣೆ ನಡೆದಿದ್ದು, ರಾಜ್ಯದಲ್ಲಿ ಬಿಜೆಪಿ ಅಧಿಕ ಸ್ಥಾನಗಳು ಗೆಲ್ಲಲು ಯಡಿಯೂರಪ್ಪ ಅವರ ನಾಯಕತ್ವವೇ ಮುಖ್ಯ ಕಾರಣವಾಗಿದೆ. ಹೀಗಾಗಿ ಅವರನ್ನೇ ಮುಂದುವರಿಸಬೇಕು ಎಂದು ಅರುಣ್ಸಿಂಗ್ಅವರ ಬಳಿ ಮನವಿ ಮಾಡಿಕೊಂಡಿದ್ದಾರೆ ಎಂದು ಗೊತ್ತಾಗಿದೆ. ಇದೇ ವೇಳೆ ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್, ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಸಹ ಇದ್ದರು ಎಂದು ತಿಳಿದು ಬಂದಿದ್ದು, ಶಾಸಕ ಸೋಮಶೇಖರ ರೆಡ್ಡಿ ಅವರು ಅರುಣ್ಸಿಂಗ್ಅವರ ಭೇಟಿಯನ್ನು ಮಾಧ್ಯಮಗಳಿಗೆ ಖಚಿತಪಡಿಸಿದ್ದು, ಮುಖ್ಯಮಂತ್ರಿಯಾಗಿ ಬಿಎಸ್ವೈ ಮುಂದುವರಿಯಲಿ ಎಂದು ಅರುಣ್‌ ಸಿಂಗ್‌ ಅವರ ಬಳಿ ಮನವಿ ಮಾಡಿಕೊಂಡಿದ್ದಾಗಿ ತಿಳಿಸಿದ್ದಾರೆ.
 

Follow Us:
Download App:
  • android
  • ios