ವಿಜಯಪುರ(ಅ.5): ರಾಜ್ಯದಲ್ಲಿ ಪ್ರತ್ಯೇಕ ಜಿಲ್ಲೆಗಳ ಕೂಗು ದಿನ ಕಳೆದಂತೆ ಜೋರಾಗುತ್ತಿದ್ದು, ಇದೀಗ ಇಂಡಿ ಪಟ್ಟಣವನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಘೋಷಿಸ​ದಿ​ದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಎಚ್ಚರಿಕೆ ನೀಡಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಳಿತಾತ್ಮಕ ಹಿತದೃಷ್ಟಿಯಿಂದ ವಿವಿಧ ಜಿಲ್ಲೆಗಳನ್ನು ವಿಭಜಿಸುವ ಆಶಯವನ್ನು ಮುಖ್ಯಮಂತ್ರಿಗಳು ವ್ಯಕ್ತಪಡಿಸಿದ್ದಾರೆ. ಮೊನ್ನೆ ಅವರನ್ನು ಖುದ್ದು ಭೇಟಿ ಮಾಡಿ ಈ ಬಗ್ಗೆ ಇಂಡಿ ಜಿಲ್ಲೆಯನ್ನಾಗಿ ಘೋಷಿಸುವಂತೆ ಮನವರಿಕೆ ಮಾಡಿದ್ದೇನೆ. ಉಪಚುನಾವಣೆ ಬಳಿಕ ಈ ಪ್ರಕ್ರಿಯೆ ಆರಂಭಿಸುವುದಾಗಿ ಭರವಸೆ ನೀಡಿದ್ದಾರೆ. ವಿವಿಧ ಜಿಲ್ಲೆಗಳನ್ನು ವಿಭಜಿಸಿ, ಇಂಡಿಯನ್ನು ಕೈ ಬಿಟ್ಟರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಬೀದಿಗಿಳಿದು ಹೋರಾಟ ಮಾಡುವುದಾಗಿ ಘೋಷಿಸಿದರು.

ಈ ಹಿಂದೆ ಭೀಮಾಶಂಕರ ಸಕ್ಕರೆ ಕಾರ್ಖಾನೆ ಆರಂಭಿಸಲು ವಿಫಲನಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿಯೂ ಗೆದ್ದ ದಿನವೇ ಹೇಳಿದ್ದೆ. ಆ ಮೂಲಕ ಕ್ಷೇತ್ರದ ಜನತೆಗೆ ನೀಡಿದ ಮಾತನ್ನು ಉಳಿಸಿಕೊಂಡಿದ್ದೇನೆ ಎಂದು ತಿಳಿಸಿದ್ದಾರೆ.