Asianet Suvarna News Asianet Suvarna News

ಬೈಕ್‌ನಲ್ಲಿ ಕುಂದುಕೊರತೆ ವೀಕ್ಷಿಸಿದ ಶಾಸಕ ಯತೀಂದ್ರ

ವರುಣ ಕ್ಷೇತ್ರದ ತಾಯುರು ಪಂಚಾಯತಿ ವ್ಯಾಪ್ತಿಗೆ ಸೇರಿದ ಗೆಜ್ಜಿಗನಹಳ್ಳಿ ಗ್ರಾಮದಲ್ಲಿ ಸಾರ್ವಜನಿಕರ ಕುಂದುಕೊರತೆ ಹಾಗೂ ಗ್ರಾಮ ಸಭೆ ನಡೆಸಲು ಶಾಸಕ ಡಾ. ಯತಿಂದ್ರ ಸಿದ್ದರಾಮಯ್ಯ ಅವರು ದ್ವಿಚಕ್ರ ವಾಹನದಲ್ಲಿ ತೆರಳಿದರು.

MLA Yatindra  Rounds in Constituency On Bike snr
Author
First Published Oct 25, 2022, 5:14 AM IST | Last Updated Oct 25, 2022, 5:14 AM IST

  ಸುತ್ತೂರು (ಅ.25):  ವರುಣ ಕ್ಷೇತ್ರದ ತಾಯುರು ಪಂಚಾಯತಿ ವ್ಯಾಪ್ತಿಗೆ ಸೇರಿದ ಗೆಜ್ಜಿಗನಹಳ್ಳಿ ಗ್ರಾಮದಲ್ಲಿ ಸಾರ್ವಜನಿಕರ ಕುಂದುಕೊರತೆ ಹಾಗೂ ಗ್ರಾಮ ಸಭೆ ನಡೆಸಲು ಶಾಸಕ ಡಾ. ಯತಿಂದ್ರ ಸಿದ್ದರಾಮಯ್ಯ ಅವರು ದ್ವಿಚಕ್ರ ವಾಹನದಲ್ಲಿ ತೆರಳಿದರು.

ಈ ವೇಳೆ ಮಾತನಾಡಿದ ಅವರು, ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೂ ಭೇಟಿ (Visit)  ನೀಡಿ ಅಲ್ಲಿನ ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಕುಂದು ಕೊರತೆ ಆಲಿಸಲು ದ್ವಿಚಕ್ರವಾಹನದಲ್ಲಿ ತೆರಳುತ್ತೇನೆ ಎಂದು ತಿಳಿಸಿದರು.

ಗ್ರಾಮದ (Village) ಎಲ್ಲಾ ರಸ್ತೆಗಳು, ಚರಂಡಿ, ಕುಡಿಯುವ ನೀರಿನ ಮಿನಿಟ್ಯಾಂಕ್‌ ವೀಕ್ಷಿಸಿದರು. ಕೆಲವು ಗ್ರಾಮಗಳ ಸಮಸ್ಯೆಗಳನ್ನು ಅಧಿಕಾರಿಗಳ ಸಮ್ಮುಖದಲ್ಲಿ ಪರಿಹರಿಸಿದರು. ಇವರ ಜತೆ ಕ್ಷೇತ್ರದ ಎಲ್ಲಾ ಇಲಾಖೆ ಅಧಿಕಾರಿಗಳು, ಗ್ರಾಪಂ ಅಧ್ಯಕ್ಷ ತಾಯೂರು ಬಸವರಾಜು, ಗ್ರಾಮದ ಗೌಡರಾದ ಸಂತೋಷ್‌, ಗೆಜ್ಜೆನಹಳ್ಳಿ ವಿಠಲ…, ಶಿವಣ್ಣ, ಕೆಂಪಣ್ಣ, ರಂಗಸ್ವಾಮಿ, ಗ್ರಾಪಂ ಸದಸ್ಯರು, ಮುಖಂಡರು ಇದ್ದರು.

ಜನರ ಆಶಯಕ್ಕೆ ತಕ್ಕಂತೆ ಕೆಲಸ : 

ಜನ ಸಾಮಾನ್ಯರ ಆಶಯಗಳಿಗೆ ತಕ್ಕಂತೆ ಕ್ಷೇತ್ರದಲ್ಲಿ ಕೆಲಸ ಮಾಡಬೇಕಾದುದು ನನ್ನ ಕರ್ತವ್ಯ, ಅದರಂತೆ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತಿದ್ದೇನೆ ಎಂದು ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ವರುಣ ವಿಧಾನಸಭಾ ಕ್ಷೇತ್ರದ ಹುನಗನಹಳ್ಳಿ, ಮಾದೆಗೌಡನ ಹುಂಡಿ, ರಂಗಸಮುದ್ರ, ರಂಗನಾಥಪುರ, ರಂಗಚಾರಿ ಹುಂಡಿ, ಎಳೇಗೌಡನ ಹುಂಡಿ ಗ್ರಾಮಗಳ ಭೇಟಿ ನೀಡಿ ಕುಂದು ಕೊರತೆ ಸಭೆ ನಡೆಸಿದ ನಂತರ ನೀರಾವರಿ ಇಲಾಖೆಯವರು ಪಟ್ಟೆಹುಂಡಿ ಗ್ರಾಮದಲ್ಲಿ ಸುಮಾರು 30 ಲಕ್ಷ ರು. ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಕ್ಷೇತ್ರದಲ್ಲಿ ಚುನಾವಣೆ ಪೂರ್ವದಲ್ಲಿ ಮತದಾರರಿಗೆ ನೀಡಿರುವ ಹಲವಾರು ಭರವಸೆಗಳನ್ನು ಹಂತ ಹಂತವಾಗಿ ಅನುದಾನಕ್ಕೆ ಅನುಗುಣವಾಗಿ ಮಾಡಲಾಗುತ್ತಿದೆ, ಕಾಂಗ್ರೆಸ್‌ ಸರ್ಕಾರ ಇದ್ದಾಗ ಅನುದಾನ ಅತಿ ಹೆಚ್ಚು ಸಿಗುತಿತ್ತು, ಆದರೆ ಈ ಸರ್ಕಾರದಲ್ಲಿ ಕ್ಷೇತ್ರಗಳಿಗೆ ಅನುದಾನ ಸಿಗುತ್ತಿಲ್ಲ, ಈಗಿನ ಸರ್ಕಾರ ಭ್ರಷ್ಟಾಚಾರದಲ್ಲೇ ಮುಳುಗಿದೆ, ಬರುವ ಅಷ್ಟಿಷ್ಟುಅನುದಾನದಲ್ಲೆ ಅಭಿವೃದ್ಧಿ ಕಾಮಗಾರಿ ಮಾಡಲಾಗುತ್ತಿದೆ ಎಂದರು.

ತಾಪಂ ಸಾಮಾಜಿಕ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ರಮೇಶ್‌, ಪಿಎಲ…ಡಿ ಬ್ಯಾಂಕ್‌ ಅಧ್ಯಕ್ಷ ಮಹದೇವಣ್ಣ, ಗ್ರಾಪಂ ಅಧ್ಯಕ್ಷೆ ಸೌಮ್ಯ, ಕುರುಬರ ಸಂಘದ ಅಧ್ಯಕ್ಷ ಮಹೇಶ್‌, ಜಿಪಂ ಮಾಜಿ ಸದಸ್ಯ ಮಹದೇವು, ವಕೀಲ ಶಿವಪ್ರಕಾಶ್‌, ಕಾರ್ಮಿಕ ಘಟಕದ ಅಧ್ಯಕ್ಷ ಬಸವರಾಜು, ಕಾವೇರಿ ನೀರಾವರಿ ನಿಗಮದ ಎಇಇ ಚೆಂಗಪ್ಪ, ಜಿಇ ಮಂಜುನಾಥ್‌ ಇದ್ದರು.

ಖರ್ಗೆಯವರಿಗೆ ಶಕ್ತಿ ತುಂಬಬೇಕು : 

 ಮೈಸೂರು

ಎಐಸಿಸಿ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಆಯ್ಕೆ ಆಗಿರುವುದು ನಮಗೆ ಖುಷಿ ತಂದಿದೆ. ಅವರಿಗೆ ಶಕ್ತಿ ತುಂಬುವ ಕೆಲಸ ನಾವು ಮಾಡಬೇಕಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಾಜಿ ಸಂಸದ ಆರ್‌. ಧ್ರುವನಾರಾಯಣ್‌ ಕಾರ್ಯಕರ್ತರಿಗೆ ಕರೆ ನೀಡಿದರು.

ಮೈಸೂರಿನ ಕಾಂಗ್ರೆಸ್‌ ಭವನದಲ್ಲಿ ನಗರ ಮತ್ತು ಜಿಲ್ಲಾ ಕಾಂಗ್ರೆಸ್‌ ಸಮಿತಿಯು ಗುರುವಾರ ಆಯೋಜಿಸಿದ್ದ ಖರ್ಗೆ ಆಯ್ಕೆ ಸಂಭ್ರಮಾಚರಣೆಯಲ್ಲಿ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಆಗಿರುವುದು ಖುಷಿ ತಂದಿದೆ. ಕಾಂಗ್ರೆಸ್‌ನ ನಿಷ್ಠಾವಂತ ಕಾರ್ಯಕರ್ತರಿಗೆ ಸಿಕ್ಕ ಅವಕಾಶ ಆಗಿದೆ. ಅವರು ಕಾರ್ಮಿಕ ನಾಯಕರಾಗಿ, ಸಚಿವರಾಗಿ ಅನೇಕ ಅಭಿವೃದ್ಧಿ ಯೋಜನೆ ಮಾಡಿದ್ದಾರೆ ಎಂದು ಸ್ಮರಿಸಿದರು.

ಮೈಸೂರಿನಲ್ಲಿ ರಾಹುಲ್‌ ಗಾಂಧಿಯ ಭಾರತ್‌ ಜೋಡೋ ಯಾತ್ರೆಗೆ ಸಾಕಷ್ಟುಜನ ಸೇರಿಲ್ಲ. ಈ ಬಗ್ಗೆ ವೇಣುಗೋಪಾಲ್‌ ಅವರು ನನ್ನನ್ನು ಕೇಳಿದ್ರು. ರಾಷ್ಟ್ರೀಯ ಅಧ್ಯಕ್ಷರು ಬಂದಾಗ ಕಾರ್ಯಕರ್ತರು ಸೇರಿಸಬೇಕಲ್ಲ. ಕಾಂಗ್ರೆಸ್‌ ಪಕ್ಷ ಕೆಡರ್‌ ಪಕ್ಷ ಆಗಬೇಕು. ಆದರೆ, ಈಗ ಲೀಡರ್‌ ಬೇಸ್‌ ಪಾರ್ಟಿ ಆಗುತ್ತಿದೆ. ಹೀಗಾಗಿ, ನಾವು ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕು ಎಂದು ಅವರು ಮುಖಂಡರು ಹಾಗೂ ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.

ಇದೇ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರ ಆಯ್ಕೆಯನ್ನು ಸ್ವಾಗತಿಸಿ, ಅಭಿನಂದಿತಾ ಒಂದು ಸಾಲಿನ ನಿರ್ಣಯಕ್ಕೆ ಪ್ರತಿಯೊಬ್ಬ ಪದಾಧಿಕಾರಿಯೂ ಕೈ ಎತ್ತುವುದರ ಮೂಲಕ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು. ಮುಖಂಡರು ಪರಸ್ಪರ ಸಿಹಿ ತಿನ್ನಿಸಿ ಸಂಭ್ರಮಿಸಿದರು.

ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ, ವಿಧಾನಪರಿಷತ್ತು ಸದಸ್ಯ ಡಾ.ಡಿ. ತಿಮ್ಮಯ್ಯ, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯ್‌ಕುಮಾರ್‌, ನಗರಾಧ್ಯಕ್ಷ ಆರ್‌. ಮೂರ್ತಿ, ಮಾಜಿ ಮೇಯರ್‌ಗಳಾದ ಪುಷ್ಪಲತಾ ಚಿಕ್ಕಣ್ಣ, ನಾರಾಯಣ್‌, ಟಿ.ಬಿ. ಚಿಕ್ಕಣ್ಣ, ಮುಖಂಡರಾದ ಕೆ. ಮರೀಗೌಡ, ಎಂ. ಶಿವಣ್ಣ, ನಾಗೇಶ್‌, ಗೋಪಿನಾಥ್‌ ಮೊದಲಾದವರು ಇದ್ದರು.

Latest Videos
Follow Us:
Download App:
  • android
  • ios