ಹುಬ್ಬಳ್ಳಿ(ಜ.09): ಎಲ್ಲ ಸಮಾಜದವರು ಮೀಸಲಾತಿ ಬೇಡಿಕೆ ಇಟ್ಟಿದ್ದಾರೆ. ಬೇರೆ ರಾಜ್ಯಗಳಲ್ಲಿ ಲಿಂಗಾಯತ  ಸಮಾಜಕ್ಕೆ ಮೀಸಲಾತಿ ನೀಡಲಾಗಿದೆ. ರಾಜ್ಯದಲ್ಲೂ ಲಿಂಗಾಯತರಿಗೆ ಮೀಸಲಾತಿ ನೀಡಿದರೆ ಒಳ್ಳೆಯದು, ಲಿಂಗಾಯತ

ಸಮಾಜದಲ್ಲೂ ಸಾಕಷ್ಟು ಜನ ಬಡವರಿದ್ದಾರೆ. ಜನಸಂಖ್ಯಾ ಆಧಾರದ ಮೇಲೆ ನೋಡುವುದಾದರೆ ವೀರಶೈವ ಲಿಂಗಾಯತ ಜನಸಂಖ್ಯೆ ರಾಜ್ಯದಲ್ಲಿ ಹೆಚ್ಚಿದೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ವೀರಶೈವ ಲಿಂಗಾಯತರಿಗೆ ಶೇಕಡ 16 ರಷ್ಟು ಮೀಸಲಾತಿ ನೀಡಬೇಕೆಂಬ ವಿಚಾರದ ಬಗ್ಗೆ ಗುರುವಾರ ನಗರದಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅವರು, ಲಿಂಗಾಯತರು, ಶೈಕ್ಷಣಿಕ, ಸಾಮಾಜಿಕ, ಆರ್ಥಿಕವಾಗಿ ತೊಂದರೆಯಲ್ಲಿದ್ದಾರೆ. ಈ ಕಾರಣಕ್ಕೆ ವೀರಶೈವ ಲಿಂಗಾಯತರಿಗೆ‌ ಮೀಸಲಾತಿ ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ. 

ಲಿಂಗಾಯತಿಗೆ ಮೀಸಲಾತಿ ನೀಡುವಂತೆ ಹೆಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಇದ್ದಾಗ ಪತ್ರ ಬರೆದಿದ್ದೆ. ಈಗ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೂ ಪತ್ರ ಬರೆದು ಒತ್ತಾಯಿಸುತ್ತೇನೆ. ಜನವರಿ 19 ರಂದು ಈ ಕುರಿತು ಚರ್ಚಿಸಲು ಸಮಾಜದ ಪ್ರಮುಖರೊಂದಿಗೆ ಸಭೆ ನಡೆಸುತ್ತೇವೆ. ಸರ್ಕಾರದ ಮೇಲೆ ಒತ್ತಡ ಹೇರಿ‌‌ ಲಿಂಗಾಯತರಿಗೆ ಮೀಸಲಾತಿ ನೀಡುವಂತೆ ಒತ್ತಾಯಿಸಲಾಗುವುದು ಎಂದು ಹೇಳಿದ್ದಾರೆ.