ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಮ್ಯಾಚ್‌ ಫಿಕ್ಸಿಂಗ್‌ ಮೂಲಕ ವಿಧಾನ ಪರಿಷತ್‌ ಚುನಾವಣೆಯಲ್ಲಿ ಗೆಲ್ಲಲು ಮುಂದಾಗಿವೆ   ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಪರಿಷತ್ ಚುನಾವಣೆಯಲ್ಲಿ ಒಳ ಒಪ್ಪಂದ ಮಾಡಿಕೊಳ್ಳಲು ಮುಂದಾಗಿವೆ

ರಾಮನಗರ (ನ.21): ಬಿಜೆಪಿ (BJP) ಮತ್ತು ಜೆಡಿಎಸ್‌ (JDS) ಪಕ್ಷಗಳು ಮ್ಯಾಚ್‌ ಫಿಕ್ಸಿಂಗ್‌ (match Fixing) ಮೂಲಕ ವಿಧಾನ ಪರಿಷತ್‌ ಚುನಾವಣೆಯಲ್ಲಿ (MLC Election) ಗೆಲ್ಲಲು ಮುಂದಾಗಿವೆ ಎಂದು ಸಂಸದ ಡಿ.ಕೆ.ಸುರೇಶ್‌ (DK Suresh) ಆರೋಪಿಸಿದರು. ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್‌ ಚುನಾವಣೆ ಹಿನ್ನೆಲೆಯಲ್ಲಿ ನಗರದ ಹೊರವಲಯದ ಖಾಸಗಿ ಕಲ್ಯಾಣ ಮಂಟಪದಲ್ಲಿ ಶನಿವಾರ ನಡೆದ ರಾಮನಗರ (Ramanagara) ಜಿಲ್ಲಾ ಕಾಂಗ್ರೆಸ್‌ ಮುಖಂಡರು ಹಾಗೂ ಚುನಾಯಿತ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಕಡಿಮೆ ಗ್ರಾಪಂಗಳಲ್ಲಿ ಅಧಿಕಾರ ಹಿಡಿದಿರುವ ಬಿಜೆಪಿ (BJP) ಮತ್ತು ಜೆಡಿಎಸ್‌ (JDS) ಪಕ್ಷಗಳು ಪರಿಷತ್ ಚುನಾವಣೆಯಲ್ಲಿ ಒಳ ಒಪ್ಪಂದ ಮಾಡಿಕೊಳ್ಳಲು ಮುಂದಾಗಿವೆ ಎಂದು ದೂರಿದರು.

ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (DK Shivakumar) ಅವರ ತವರು ಜಿಲ್ಲೆಯಲ್ಲಿ ಮುಖಭಂಗ ಮಾಡುವ ಉದ್ದೇಶದಿಂದ ಬಿಜೆಪಿ ಮತ್ತು ಜೆಡಿಎಸ್‌ ಯಾವ ಕ್ಷಣದಲ್ಲಿಯದರೂ ಹೊಂದಾಣಿಕೆ ಮಾಡಿಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಕಾಂಗ್ರೆಸ್ (Congress) ಬೆಂಬಲಿತ ಸದಸ್ಯರು ಯಾವ ಆಸೆ ಆಮಿಷಗಳಿಗೆ ಒಳಗಾಗದೇ ಪಕ್ಷ ನಿಷ್ಠೆ ಮೆರೆಯಬೇಕು ಎಂದು ಸಲಹೆ ನೀಡಿದರು.

ಬೆಂಗಳೂರು (Bengaluru) ಗ್ರಾಮಾಂತರ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ (Assembly Constituency) ವ್ಯಾಪ್ತಿಯಲ್ಲಿ ಬಹಳಷ್ಟು ಕಾಂಗ್ರೆಸ್‌ ಬೆಂಬಲಿತ ಗ್ರಾಪಂ ಸದಸ್ಯರಿದ್ದಾರೆ. ಅಲ್ಲದೇ ಹೆಚ್ಚಿನ ಗ್ರಾಮ ಪಂಚಾಯಿತಿಗಳು ಕೈ ವಶದಲ್ಲಿದೆ. ಕಾಂಗ್ರೇಸ್ಸಿಗರೆ ಅಧಿಕಾರ ಹಿಡಿದಿದ್ದಾರೆ. ಕಾಂಗ್ರೆಸ್‌ ಬೆಂಬಲಿತ ಸದಸ್ಯರು ಚುನಾವಣೆಯನ್ನು (Election) ಗಂಭೀರವಾಗಿ ಪರಿಗಣಿಸಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದರು.

ಬಿಜೆಪಿ ಸರಕಾರದ ಆಡಳಿತಾವಧಿಯಲ್ಲಿ ಲೋಕಸಭೆ (Loksabha) ಹಾಗೂ ವಿಧಾನ ಸಭೆಗೆ ನಡೆದ ಉಪ ಚುನಾವಣೆಗಳ (By Election) ಫಲಿತಾಂಶವೇ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸದೃಢವಾಗಿದೆ ಎಂಬುದನ್ನು ಸಾಭೀತು ಪಡಿಸಿದೆ. ಜನ ವಿರೋಧಿ ಬಿಜೆಪಿ ಸರಕಾರವನ್ನು ಕಿತ್ತೊಗೆದು ಕಾಂಗ್ರೆಸ… ಪಕ್ಷವನ್ನು ಬೆಂಬಲಿಸಲು ರಾಜ್ಯದ ಜನರು ನಿರ್ಧರಿಸಿದ್ದಾರೆ ಎಂದರು.

2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ. ಇದು ಜನರಿಂದಲೇ ಕೇಳಿಬರುತ್ತಿದೆ. ಆದ್ದರಿಂದ ಅನ್ಯ ಪಕ್ಷದವರನ್ನೂ ಕಾಂಗ್ರೆಸ್‌ಗೆ ಸೆಳೆದು ಅತ್ಯಧಿಕ ಮತಗಳಿಂದ ಅಭ್ಯರ್ಥಿ ಎಸ್‌.ರವಿ ಅವರನ್ನು ಗೆಲ್ಲಿಸುವಂತೆ ಕರೆ ನೀಡಿದರು.

ಬೂತ್‌ ಮಟ್ಟದಲ್ಲಿ ಪಕ್ಷ ಸಂಘಟಿಸಿ:  ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ ಗೆ ನಡೆಯುತ್ತಿರುವ ಚುನಾವಣೆಯು 2023ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ. ಹೀಗಾಗಿ ಕಾಂಗ್ರೆಸ್‌ (Congress) ಪಕ್ಷವನ್ನು ಬೂತ್‌ ಮಟ್ಟದಲ್ಲಿ ಬಲಿಷ್ಠಗೊಳಿಸಲು ಪಕ್ಷದ ಎಲ್ಲಾ ವಿಭಾಗಗಳ ಅಧ್ಯಕ್ಷರು ಪದಾಧಿಕಾರಿಗಳು ಮುಂದಾಗಬೇಕು ಎಂದು ಹೇಳಿದರು.

ಬೂತ್‌ ಮಟ್ಟದಲ್ಲಿ ಪಕ್ಷ ಸದೃಢವಿಲ್ಲದ ಕಾರಣ ಆರ್‌.ಆರ್‌.ನಗರ (RR Nagar) ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋಲು ಅನುಭವಿಸಬೇಕಾಯಿತು. ಆದ್ದರಿಂದ ಬೂತ್ ಸಮಿತಿಗಳು ಗಟ್ಟಿಯಾದಾಗ ಅಲ್ಲಿನ ಮುಖಂಡರು ಹಾಗೂ ಶಾಸಕರು ಪಕ್ಷ ತೊರೆದರೂ ಹೆಚ್ಚಿನ ನಷ್ಟ ವುಂಟಾಗದು ಎಂದು ಹೇಳಿದರು.

100 ಟಿಎಂಸಿ ನೀರು ವ್ಯರ್ಥ : ತಮಿಳುನಾಡಿಗೆ (Tamilnadu) ನಿಗದಿಯಂತೆ 205 ಟಿಎಂಸಿ ನೀರು ಹರಿಯುವ ಜೊತೆಗೆ ಪ್ರತಿವರ್ಷ ಸುಮಾರು 80 ರಿಂದ 100 ಟಿಎಂಸಿ (TMC) ಪ್ರಮಾಣದ ನೀರು ವ್ಯರ್ಥವಾಗಿ ಹರಿದು ಹೋಗುತ್ತಿದೆ. ಪ್ರಸ್ತುತ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಕಳೆದ ಒಂದು ವಾರದ ಅವಧಿಯಲ್ಲಿ ಅರ್ಕಾವತಿ ನದಿಯಿಂದಲೇ ಸುಮಾರು 25 ಟಿಎಂಸಿಯಷ್ಟುನೀರು ಹರಿದು ಹೋಗಿದೆ ಎಂದು ಸಂಸದ ಡಿ.ಕೆ.ಸುರೇಶ್‌ (DK Suresh) ಹೇಳಿದರು.

ಈ ಹೆಚ್ಚುವರಿ ನೀರಿನ ಸದ್ಬಳಕೆಗೆ ಬ್ಯಾಲೆನ್‌ ಸಿಂಗ್‌ ರಿಸರ್ಸ್‌ ಮಾಡುವ ಅವಶ್ಯಕವಿದೆ. ಮೇಕೆದಾಟು ಯೋಜನೆ ಇದಕ್ಕೆ ಸಹಕಾರಿಯಾಗಲಿದೆ. ಕಾವೇರಿ ನದಿ ವ್ಯಾಪ್ತಿಯ ಜಿಲ್ಲೆಗಳಿಗೆ ಉಪಯುಕ್ತವಾಗಿರುವ ಈ ಯೋಜನೆಗೆ ಕೇಂದ್ರ ಸರಕಾರದ ತಕರಾರಿಲ್ಲ, ಕಾವೇರಿ ನ್ಯಾಯಾಧೀಕರಣದ ಅನುಮತಿ ಪಡೆದರಷ್ಟೇ ಬೇಕಾಗಿದೆ ಎಂದು ತಿಳಿಸಿದರು.

ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ :  ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನಕ್ಕೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಬೆಂಗಳೂರು ಚಲೋ ಪಾದಯಾತ್ರೆಯನ್ನು ಹಮ್ಮಿಕೊಳ್ಳಲು ಪಕ್ಷದ ನಾಯಕರೂ ಆದ ಮಾಜಿ ಸಿಎಂ ಸಿದ್ಧರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನಿರ್ಧರಿಸಿದ್ದಾರೆ ಎಂದು ಡಿ.ಕೆ.ಸುರೇಶ್‌ ತಿಳಿಸಿದರು.

ಮೇಕೆದಾಟುವಿನಿಂದ ಕನಕಪುರ, ರಾಮನಗರ, ಬಿಡದಿ, ಕೆಂಗೇರಿ ಮಾರ್ಗವಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್ವರೆಗೆ ಪಾದಯಾತ್ರೆ ನಡೆಯಲಿದೆ. ಕಾವೇರಿ ಅಚ್ಚುಕಟ್ಟು ಪ್ರದೇಶದ ಜಿಲ್ಲೆಗಳಿಗೆ ಕುಡಿಯುವ ನೀರಿನ ಉದ್ದೇಶಿತ ಮೇಕೆದಾಟು ಯೋಜನೆ ಅನುಷ್ಠಾನದ ಹೋರಾಟಕ್ಕೆ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬೆಂಬಲಿಸುವಂತೆ ಸುರೇಶ್ ತಿಳಿಸಿದರು.