ಬೆಳಗಾವಿ(ಡಿ.22): ಕಾರು ನಿಲ್ಲಿಸಿ ದಾಖಲೆ ಪರಿಶೀಲನೆಗೆ ಮುಂದಾದ ಪೊಲೀಸ್ ಪೇದೆಗೆ ವಿಧಾನಪರಿಷತ್ ಮುಖ್ಯ ಸಚೇತಕ ಮಹಾಂತೇಶ್ ಕವಟಗಿಮಠ ಅವರ ಸಹೋದರ ಅವಾಜ್ ಹಾಕಿದ ಘಟನೆ ಜಿಲ್ಲೆಯ ಚಿಕ್ಕೋಡಿಯ ಸರ್ಕಾರಿ ಆಸ್ಪತ್ರೆ ಬಳಿ ಇಂದು(ಭಾನುವಾರ) ನಡೆದಿದೆ.

ಸಂಚಾರಿ ಪೊಲೀಸರು ವಾಹನ ತಪಾಸಣೆ ನಡೆಸಿ ದಾಖಲೆಗಳಿಲ್ಲದೆ ವಾಹನಗಳಿಗೆ ದಂಡ ವಿಧಿಸುತ್ತಿದ್ದರು. ದಾಖಲೆಗಳು ಇಲ್ಲದಿದ್ದಕ್ಕೆ ಮಹಾಂತೇಶ್ ಕವಟಗಿಮಠ ಅವರ ಜಗದೀಶ್ ಕವಟಗಿಮಠ ಆಪ್ತರಿಗೂ ಪೊಲೀಸರು ದಂಡ ಹಾಕಿದ್ದಾರೆ. ದಂಡ ವಿಧಿಸಿದ್ದಕ್ಕೆ ಕೋಪಗೊಂಡ ಜಗದೀಶ್ ಕವಟಗಿಮಠ ಕರ್ತವ್ಯ ನಿರತ ಪೊಲೀಸ್ ಪೇದೆಗೆ ಅವಾಚ್ಯ ಶದ್ಧಗಳಿಂದ ನಿಂದಿಸಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಕರ್ತವ್ಯ ನಿರತ ಪೊಲೀಸರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಜಗದೀಶ್ ಕವಟಗಿಮಠ ಅವರನ್ನು ಪೊಲೀಸರು ಚಿಕ್ಕೋಡಿ ಡಿವೈಎಸ್‌ಪಿ ಕಚೇರಿಗೆ ಕರೆದೊಯ್ದಿದ್ದಾರೆ.