ಆರ್ಥಿಕ ಸಂಕಷ್ಟಕ್ಕೆ ಒಳಗಾದ ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಖಾತೆಗಳಿಗೆ ಹಣ ವರ್ಗಾವಣೆ ಮಾಡಲಾಗಿದೆ ಎಂದು ಸಚಿವ ಗೋಪಾಲಯ್ಯ ಹೇಳಿದ್ದಾರೆ.

ಹಾಸನ (ಆ.16) : ಕೋವಿಡ್‌-19ನ ಲಾಕ್‌ಡೌನ್‌ ಸಮಸ್ಯೆಯಿಂದ ಮುಸುಕಿನ ಜೋಳ ಬೆಳೆದು ಆರ್ಥಿಕ ಸಂಕಷ್ಟಕೊಳಗಾದ ಪ್ರತಿ ರೈತರಿಗೆ ನೇರವಾಗಿ 5,000 ರು.ಗಳನ್ನು ನೇರ ನಗದು ವರ್ಗಾವಣೆ ಮಾಡುವ ಯೋಜನೆಯಾಗಿದ್ದು, ಹಾಸನ ಜಿಲ್ಲೆಯಲ್ಲಿ ಒಟ್ಟು 48,255 ರೈತರಿಗೆ ನೇರ ನಗದು ವರ್ಗಾವಣೆ ಮಾಡಿರುವುದಾಗಿ ಸಚಿವ ಗೋಪಾಲಯ್ಯ ಹೇಳಿದರು.

ಜಿಲ್ಲಾ ಪಂಚಾಯತ್‌ ವತಿಯಿಂದ ಒಟ್ಟು 22 ಇಲಾಖೆಗಳಿಗೆ ಈಗಾಗಲೇ 112 ಕೋಟಿ ರು. ಬಿಡುಗಡೆಯಾಗಿದ್ದು, 105 ಕೋಟಿ ರು. ವೆಚ್ಚ ಮಾಡಲಾಗಿದೆ. 2019-20ನೇ ಸಾಲಿನಲ್ಲಿ ಜಿಲ್ಲಾ ಪಂಚಾಯಿತಿ ರಸ್ತೆಗಳ ಅಭಿವೃದ್ಧಿಗೆ ಸಂಬಂಧಿ​ಸಿದಂತೆ ಮಳೆ ಹಾನಿ ದುರಸ್ತಿಗೆ 2,320 ಲಕ್ಷ ರು. ನಿಗ​ಪಡಿಸಿದ್ದು, ಈಗಾಗಲೇ 927 ಲಕ್ಷ ರು. ವೆಚ್ಚ ಮಾಡಲಾಗಿದೆ ಎಂದರು.

ರೈತರಿಗೆ ರಾಜ್ಯ ಸರ್ಕಾರ ಬಂಪರ್ ಕೊಡುಗೆ...

ವಿಶೇಷ ಅನುದಾನ ಯೋಜನೆಯಡಿ 6,670 ಲಕ್ಷ ರು. ನಿಗ​ಪಡಿಸಿದ್ದು, 3,321 ರು. ವೆಚ್ಚ ಮಾಡಲಾಗಿದೆ. ಟಾಸ್ಕ್‌ ಫೋರ್ಸ್‌ ಯೋಜನೆಯಡಿ 285 ಲಕ್ಷ ರು. ನಿಗ​ಪಡಿಸಲಾಗಿದೆ. ಒಟ್ಟಾರೆ ಜಿಲ್ಲಾ ಪಂಚಾಯಿತಿ ರಸ್ತೆ ಅಭಿವೃದ್ಧಿಯಡಿ ಕಳೆದ ಒಂದು ವರ್ಷದಲ್ಲಿ 9,275 ಲಕ್ಷ ರು. ನಿಗ​ಪಡಿಸಿದ್ದು, 5,641 ಲಕ್ಷ ರು. ಬಿಡುಗಡೆ ಮಾಡಲಾಗಿದೆ. 4,249 ಲಕ್ಷ ರು. ವೆಚ್ಚ ಮಾಡಲಾಗಿದೆ ಎಂದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಯೋಜನೆಯಡಿ ಜಿಲ್ಲೆಗೆ 11,543 ಲಕ್ಷ ರು.ಗಳನ್ನು ಒದಗಿಸಲಾಗಿದೆ. ಮಹಾತ್ಮ ಗಾಂಧಿ​ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2019-20ನೇ ಸಾಲಿನಿಂದ ಇಲ್ಲಿಯವರೆಗೆ 63,17,687 ಮಾನವ ದಿನಗಳನ್ನು ಸೃಜನೆ ಮಾಡಲಾಗಿದೆ ಹಾಗೂ 270 ಕೋಟಿ ರು. ವೆಚ್ಚ ಭರಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 2.51 ಲಕ್ಷ ಜಾಬ್‌ ಕಾರ್ಡ್‌ಗಳನ್ನು ವಿತರಿಸಲಾಗಿದೆ. 9,141 ವೈಯಕ್ತಿಕ ಕಾಮಗಾರಿಗಳನ್ನು ಹಾಗೂ 2,698 ಸಮುದಾಯ ಆಧಾರಿತ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಸರಕಾರದ ಅಭಿವೃದ್ಧಿ ಕೆಲಸಗಳ ಬಗ್ಗೆ ಜನರಿಗೆ ಮುಟ್ಟಿಸಿದರು.