Asianet Suvarna News Asianet Suvarna News

ಮಂಗನ ಕಾಯಿಲೆಗೆ ಮತ್ತೆರಡು ಬಲಿ..!

ತಾಲೂಕಿನ ಅರಲಗೋಡು ಗ್ರಾಮದಲ್ಲಿ ಮಂಗನಕಾಯಿಲೆ ತೀವ್ರ ಆತಂಕವನ್ನೇ ಸೃಷ್ಟಿಸಿದೆ. ಶಿವಮೊಗ್ಗದಲ್ಲಿ ಮಂಗನ ಕಾಯಿಲೆಯಿಂದ ಸಾವನ್ನಪ್ಪಿದ ಯುವತಿಯ ಕುಟುಂಬಕ್ಕೆ  ಬಿಜೆಪಿ ರಾಜ್ಯಾದ್ಯಕ್ಷ ಯಡಿಯೂರಪ್ಪ ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ ಸಾಂತ್ವನ ಹೇಳಿದರು.

Monkey Diseases Causes two more deaths in Shivamogga District
Author
Shivamogga, First Published Jan 5, 2019, 9:53 PM IST

ಶಿವಮೊಗ್ಗ[ಜ.05]: ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿರುವ ಮಂಗನಕಾಯಿಲೆಗೆ ಮತ್ತೆರಡು ಜೀವಗಳು ಬಲಿಯಾಗಿದ್ದು, ಇಲ್ಲಿಯವರೆಗೆ ಸಾವಿನ ಸಂಖ್ಯೆ ಆರಕ್ಕೇರಿದಂತಾಗಿದೆ. ಖಾಸಗಿ ಆಸ್ಫತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶ್ವೇತಾ[17] ಹಾಗೂ ಸಾಗರ ತಾಲೂಕಿನ ಕಂಚಿಕೈ ಗ್ರಾಮದ ರಾಮಮ್ಮ[50] ಮೃತಪಟ್ಟ ದುರ್ದೖವಿಗಳಾಗಿದ್ದಾರೆ.

ಮಂಗನಕಾಯಿಲೆ: ಎಚ್ಚೆತ್ತುಕೊಳ್ಳದ ಸರ್ಕಾರದ ವಿರುದ್ಧ ಸಿಡಿದೆದ್ದ ಹರತಾಳು ಹಾಲಪ್ಪ

ತಾಲೂಕಿನ ಅರಲಗೋಡು ಗ್ರಾಮದಲ್ಲಿ ಮಂಗನಕಾಯಿಲೆ ತೀವ್ರ ಆತಂಕವನ್ನೇ ಸೃಷ್ಟಿಸಿದೆ. ಶಿವಮೊಗ್ಗದಲ್ಲಿ ಮಂಗನ ಕಾಯಿಲೆಯಿಂದ ಸಾವನ್ನಪ್ಪಿದ ಯುವತಿಯ ಕುಟುಂಬಕ್ಕೆ  ಬಿಜೆಪಿ ರಾಜ್ಯಾದ್ಯಕ್ಷ ಯಡಿಯೂರಪ್ಪ ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ ಸಾಂತ್ವನ ಹೇಳಿದರು. ಇದೇ ವೇಳೆ ಮಾತನಾಡಿದ ಹಾಲಪ್ಪ, ಸಾಗರ ತಾಲೂಕಿನ ಅರಲಗೋಡು ಗ್ರಾಮದ ವ್ಯಾಪ್ತಿಯಲ್ಲಿ ತುರ್ತು ವೈದ್ಯಕೀಯ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಬೇಕು, ಮೃತರ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕು. ತಕ್ಷಣವೇ 4 ವೆಂಟಿಲೇಟರ್ ಇರುವ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಬೇಕು. ರೋಗಪೀಡಿತರನ್ನು ಮಣಿಪಾಲ್ ಆಸ್ಫತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರ ತಡಮಾಡದೇ ರೋಗಪೀಡಿತರ ಚಿಕಿತ್ಸಾ ವೆಚ್ಚ ಭರಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
 

Follow Us:
Download App:
  • android
  • ios