ಮೀನುಗಾರಿಕೆಗೆ ತೆರಳಿದ್ದ ದೋಣಿ ಸಮುದ್ರದ ಅಲೆಗೆ ಸಿಲುಕಿ ಪಲ್ಟಿ, 9 ಮೀನುಗಾರರ ರಕ್ಷಣೆ
ಉಪ್ಪುಂದ ತಾರಾಪತಿಯಿಂದ ಮೀನುಗಾರಿಕೆಗೆ ತೆರಳಿದ್ದ ದೋಣಿಯು ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಪಲ್ಟಿಯಾಗಿದ್ದು, 9 ಮೀನುಗಾರರ ರಕ್ಷಣೆ ಮಾಡಲಾಗಿದೆ.
ಉಡುಪಿ (ಆ.05): ಉಪ್ಪುಂದ ತಾರಾಪತಿಯಿಂದ ಮೀನುಗಾರಿಕೆಗೆ ತೆರಳಿದ್ದ ದೋಣಿಯು ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಪಲ್ಟಿಯಾಗಿದ್ದು, ಈ ವೇಳೆ ಸ್ಥಳೀಯ ಮೀನುಗಾರರು ನೆರವಿಗೆ ಧಾವಿಸಿ 9 ಮಂದಿ ಮೀನುಗಾರರನ್ನು ರಕ್ಷಣೆ ಮಾಡಿದ್ದಾರೆ.
ಉಡುಪಿ ಜಿಲ್ಲೆಯ ಉಪ್ಪುಂದ ತಾರಾಪತಿಯಿಂದ ಬೆಳಿಗ್ಗೆ 7:30ರ ಸುಮಾರಿಗೆ ದೋಣಿ ತೆರಳಿತ್ತು. ತೀರ ಪ್ರದೇಶದಿಂದ 5 ನಾಟಿಕಲ್ ಮೈಲುಗಳ ದೂರಕ್ಕೆ ಹೋದಾಗ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿ ಪಲ್ಟಿಯಾಗಿದೆ. ಪುಂಡಲೀಕ ಅವರ ಒಡೆತನ ಶ್ರೀ ದುರ್ಗಾಪರಮೇಶ್ವರಿ ಹೆಸರಿನ ದೋಣಿ ಪಲ್ಟಿಯಾಗಿದ್ದು, ಇದರಲ್ಲಿ 9 ಮಂದಿ ಮೀನುಗಾರರು ಇದ್ದರು. ಆದರೆ, ಅದೃಷ್ಟವಶಾತ್ ದೋಣಿಯಲ್ಲಿದ್ದ ಮೀನುಗಾರರು ಅಪಾಯದಿಂದ ಪಾರಾಗಿದ್ದಾರೆ.
ನಾನು ಪ್ರಪಂಚದಲ್ಲೇ ಸರ್ವಾಂಗ ಸುಂದರನಾಗಬೇಕು, ತಾಯಿ ಕಳಸೇಶ್ವರೀ ಆಶೀರ್ವದಿಸು!
ಇನ್ನು ಮೀನುಗಾರಿಕೆಗೆ ತೆರಳಿದ್ದ ದೋಣಿ ಪಲ್ಟಿಯಾದ ಬೆನ್ನಲ್ಲೇ ಸಮೀಪದ ದೋಣಿಗಳಿಗೆ ಮುಳುಗುತ್ತಿರುವ ಮಾಹಿತಿ ರವಾನೆ ಮಾಡಿದ್ದಾರೆ. ಇನ್ನು ಕೂಡಲೇ ರಕ್ಷಣೆಗೆ ಬಂದ ಸ್ಥಳೀಯ ಮೀನುಗಾರರು, ಅಪಘಾತಕ್ಕೀಡಾದ ದೋಣಿಯಲ್ಲಿದ್ದ ನೀರನ್ನು ಖಾಲಿ ಮಾಡಿ, ದೋಣಿಯನ್ನು ಮರವಂತೆ ಬಂದರಿಗೆ ರವಾನೆ ಮಾಡಿದ್ದಾರೆ. ಅಪಘಾತದಲ್ಲಿ ದೋಣಿಯಲ್ಲಿದ್ದ ಬಲೆ, ಇಂಜಿನ್ ಹಾನಿಯಾಗಿದ್ದು, ಒಟ್ಟು 2 ಲಕ್ಷಕ್ಕೂ ಅಧಿಕ ನಷ್ಟವಾಗಿದೆ ಎಂದು ದೋಣಿಯ ಮಾಲೀಕ ಮಾಹಿತಿ ನೀಡಿದ್ದಾರೆ.
ಮಲ್ಪೆ ಬಳಿ ಮುಳುಗಿದ್ದ ದೋಣಿ ರಕ್ಷಣೆ: ಉಡುಪಿ : ಉಡುಪಿ ಸಮೀಪ ಸಮುದ್ರದ ಅಲೆಗಳ ಅಬ್ಬರಕ್ಕೆ ಅರಬ್ಬೀ ಸಮುದ್ರದಲ್ಲಿ ಮಲ್ಪೆಯ ಆಳ ಸಮುದ್ರ ದೋಣಿ ಮುಳುಗಡೆಯಾಗಿದೆ. ದೋಣಿಯಲ್ಲಿದ್ದ ಐದು ಜನ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ. ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ ವೇಳೆ ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಮಂಗಳೂರಿನಿಂದ ಮಲ್ಪೆ ಬಂದರಿಗೆ ಬರುತ್ತಿದ್ದಾಗ ಈ ಅವಘಡ ಸಂಭವಿಸಿದ್ದು, ಆಳ ಸಮುದ್ರ ದೋಣಿಯಲ್ಲಿದ್ದ ತಮಿಳುನಾಡು ಮೂಲದ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ. ದೋಣಿಯ ಪಕ್ಕದಲ್ಲಿದ್ದ ಇನ್ನೊಂದು ದೋಣಿಯವರು ಐದು ಜನ ಮೀನುಗಾರರ ರಕ್ಷಣೆ ಮಾಡಿದ್ದಾರೆ. ಮಲ್ಪೆ ಮುಳುಗು ತಜ್ಞ ಸಮಾಜ ಸೇವಕ ಈಶ್ವರ ಮಲ್ಪೆ ದೋಣಿ ಯಲ್ಲಿ ಇರುವ ಬೆಲೆ ಬಾಳು ವಸ್ತುಗಳನ್ನು ರಕ್ಷಿಸಿದ್ದರು.
ಧರ್ಮಸ್ಥಳ ಭಕ್ತರ ಪ್ರತಿಭಟನೆ ವೇಳೆ ಸೌಜನ್ಯ ಪೋಷಕರ ಮೇಲೆ ಹಲ್ಲೆ ಯತ್ನ; ದೂರು
ಬೈಂದೂರು ಬಳಿ ಮೇ ತಿಂಗಳಲ್ಲಿ ದೋಣಿ ಮುಳುಗಡೆ: ಉಡುಪಿ: ಭಾರೀ ಗಾತ್ರದ ಅಲೆಗೆ ಮೀನುಗಾರಿಕಾ ದೋಣಿ ಮುಳುಗಡೆಯಾಗಿದ್ದು, ದೋಣೀಯಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿಶಿರೂರಿನ ಕಡಲ ತೀರದಲ್ಲಿ ಈ ಘಟನೆ ನಡೆದಿದೆ. ಮೀನುಗಾರರು ಮೀನುಗಾರಿಕೆಗೆಂದು ಆಳ ಸಮುದ್ರದ ಮೀನುಗಾರಿಕೆಗೆ ತೆರಳಿದ್ದರು. ಈ ವೇಳೆ ಭಾರಿ ಗಾತ್ರದ ದೋಣಿ ಮುಳುಗಿದೆ. ತಕ್ಷಣ ಅಲ್ಲೇ ಮತ್ತೊಂದು ದೋಣಿಯಲ್ಲಿದ್ದ ಸ್ಥಳೀಯ ಮೀನುಗಾರರಿಂದ ರಕ್ಷಣಾ ಕಾರ್ಯ ನಡೆಸಿದ್ದರು. ಘಟನೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಕರಾವಳಿ ಕಾವಲು ಪಡೆ ತಂಡ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮೀನುಗಾರರ ರಕ್ಷಣೆಗೆ ಕರಾವಳಿ ಕಾವಲು ಪಡೆಯು ಸಾಥ್ ನೀಡಲಾಗಿತ್ತು.