ಮುಧೋಳ: ಬಿಸಿಯೂಟ ಸೇವಿಸಿ 30 ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
ಶಾಲೆಯಲ್ಲಿ ಬಿಸಿಯೂಟ ಸೇವಿಸಿದ 30 ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ| ಮುಧೋಳ ತಾಲೂಕಿನ ರನ್ನ ಬೆಳಗಲಿ ಗ್ರಾಮದಲ್ಲಿ ಸರ್ಕಾರಿ ಕೆಜಿಎಸ್ ಶಾಲೆಯಲ್ಲಿ ನಡೆದ ಘಟನೆ| ಬೆಳಿಗ್ಗೆ 10.30 ಕ್ಕೆ ಮಕ್ಕಳಿಗೆ ಅಡುಗೆ ಸಿಬ್ಬಂದಿ ಚಿತ್ರಾನ್ನ ನೀಡಿದ್ದರು| ಚಿತ್ರಾನ್ನಕ್ಕೆ ಹಾಕಿದ್ದ ಆಲೂಗಡ್ಡೆ ಸೀಮೆ ಎಣ್ಣೆ ವಾಸನೆ ಬಂದ ಹಿನ್ನೆಲೆಯಲ್ಲಿ ಚಿತ್ರಾನ್ನ ಸೇವಿಸಿದ್ದ ವಿದ್ಯಾರ್ಥಿಗಳಲ್ಲಿ ವಾಂತಿ, ಹೊಟ್ಟೆ ನೋವು ಕಾಣಿಸಿಕೊಂಡಿತ್ತು|
ಬಾಗಲಕೋಟೆ(ಡಿ.21): ಶಾಲೆಯಲ್ಲಿ ಬಿಸಿಯೂಟ ಸೇವಿಸಿದ 30 ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಮುಧೋಳ ತಾಲೂಕಿನ ರನ್ನ ಬೆಳಗಲಿ ಗ್ರಾಮದಲ್ಲಿ ಇಂದು(ಶನಿವಾರ) ನಡೆದಿದೆ.
ಗ್ರಾಮದ ಸರ್ಕಾರಿ ಕೆಜಿಎಸ್ ಶಾಲೆಯಲ್ಲಿ ಬೆಳಿಗ್ಗೆ 10.30 ಕ್ಕೆ ಮಕ್ಕಳಿಗೆ ಅಡುಗೆ ಸಿಬ್ಬಂದಿ ಚಿತ್ರಾನ್ನ ನೀಡಿದ್ದರು. ಚಿತ್ರಾನ್ನಕ್ಕೆ ಹಾಕಿದ್ದ ಆಲೂಗಡ್ಡೆ ಸೀಮೆ ಎಣ್ಣೆ ವಾಸನೆ ಬಂದ ಹಿನ್ನೆಲೆಯಲ್ಲಿ ಚಿತ್ರಾನ್ನ ಸೇವಿಸಿದ್ದ ವಿದ್ಯಾರ್ಥಿಗಳಲ್ಲಿ ವಾಂತಿ,ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ಅಸ್ವಸ್ಥಗೊಂಡ ಮಕ್ಕಳನ್ನು ಅಂಬ್ಯುಲೆನ್ಸ್ ಮೂಲಕ ಮುಧೋಳದ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಇಂದು ಕೆಜೆಎಸ್ ಶಾಲೆಯಲ್ಲಿ 1 ರಿಂದ 7ನೇ ತರಗತಿಯವರೆಗೆ 186 ಮಕ್ಕಳು ಹಾಜರಿದ್ದರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಮುಧೋಳ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮುಧೋಳ ತಾಲೂಕು ಆಸ್ಪತ್ರೆಯಲ್ಲಿ 30 ವಿದ್ಯಾರ್ಥಿಗಳಿಗೆ ಚಿಕಿತ್ಸೆ ಮುಂದುವರೆದಿದೆ.