Asianet Suvarna News Asianet Suvarna News

ಧಾರವಾಡ: ಫುಡ್ ಫಾಯಿಜನ್‌, 40 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಕುಡಿಯುವ ನೀರಿನಲ್ಲಿ ವಿಷ ಸೇರಿರುವ ಬಗ್ಗೆ ಶಂಕೆ|40 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ| ಬಿ.ಡಿ.ಜತ್ತಿ ಹೋಮಿಯೋಪತಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು|ಅಸ್ವಸ್ಥಗೊಂಡ ವಿದ್ಯಾರ್ಥಿಗಳಿಗೆ ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ|

More than 40 students are Nervous for Food Poison in Dharwad
Author
Bengaluru, First Published Dec 9, 2019, 2:55 PM IST

ಧಾರವಾಡ(ಡಿ.09): ಫುಡ್ ಫಾಯಿಜನ್‌ನಿಂದ 40 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ನಗರದ ಬಿ.ಡಿ.ಜತ್ತಿ ಹೋಮಿಯೋಪತಿ ಕಾಲೇಜಿನಲ್ಲಿ ಇಂದು(ಸೋಮವಾರ) ನಡೆದಿದೆ. 

ಬಿ.ಡಿ.ಜತ್ತಿ ಹೋಮಿಯೋಪತಿ ಕಾಲೇಜಿನಲ್ಲಿ ನರ್ಸಿಂಗ್, ಮೆಡಿಕಲ್ ವಿದ್ಯಾಭ್ಯಾಸ ಮಾಡುತ್ತಿದ್ದ ಫುಡ್ ಫಾಯಿಜನ್‌ನಿಂದ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳಿಗೆ ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಕುಡಿಯುವ ನೀರಿಲ್ಲಿ ವಿಷ ಸೇರಿದ್ದರಿಂದ ವಿದ್ಯಾರ್ಥಿಗಳು ಅಸ್ವಸ್ಥರಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಕಾಲೇಜಿನ ಅರ್ಧಕ್ಕೂ ಹೆಚ್ಚು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥಗೊಂಡಿರುವ  ಮಾಹಿತಿ ಹೊರಹೋಗದಂತೆ ವಿದ್ಯಾರ್ಥಿಗಳಿಗೆ ಲೇಜು ಆಡಳಿತ ಮಂಡಳಿ ಬೆದರಿಕೆ ಹಾಕಿದ್ದಾರೆ ಎಂದು ಹೇಳಲಾಗಿದೆ.
 

Follow Us:
Download App:
  • android
  • ios