ಉತ್ತರಕನ್ನಡ: ವಸತಿ ಶಾಲೆಯ 65ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಮಂಗನಬಾವು ಸೋಂಕು

6 ರಿಂದ 10ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಮಂಗನಬಾವು ಸೋಂಕಿಗೊಳಗಾಗಿದ್ದಾರೆ.ಕಳೆದ ಮೂರು ದಿನಗಳ ಹಿಂದೆ 7 ವಿದ್ಯಾರ್ಥಿಗಳಲ್ಲಿ ಮಂಗನಬಾವು ಸೋಂಕು ಕಾಣಿಸಿಕೊಂಡಿತ್ತು. ನಿನ್ನೆ 25 ವಿದ್ಯಾರ್ಥಿಗಳಲ್ಲಿ ಶಂಕಿತ ಮಂಗನಬಾವು ಸೋಂಕು ಕಾಣಿಸಿಕೊಂಡಿದೆ. ಇಂದು ಮತ್ತೆ 35ಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ಶಂಕಿತ ಮಂಗನಬಾವು ಸೋಂಕು ಪತ್ತೆಯಾಗಿದೆ. 
 

More than 65 students of the residential school are infected with monkey abscess in Uttara Kannada grg

ಕಾರವಾರ(ನ.21):  ವಸತಿ ಶಾಲೆಯ 65ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಮಂಗನಬಾವು ಸೋಂಕು ಕಾಣಿಸಿಕೊಂಡ ಘಟನೆ ಉತ್ತರಕನ್ನಡ ಜಿಲ್ಲೆಯ ಮುಂಡಗೋಡು ನಗರದ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಇಂದು(ಗುರುವಾರ) ನಡೆದಿದೆ. 

6 ರಿಂದ 10ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಮಂಗನಬಾವು ಸೋಂಕಿಗೊಳಗಾಗಿದ್ದಾರೆ.ಕಳೆದ ಮೂರು ದಿನಗಳ ಹಿಂದೆ 7 ವಿದ್ಯಾರ್ಥಿಗಳಲ್ಲಿ ಮಂಗನಬಾವು ಸೋಂಕು ಕಾಣಿಸಿಕೊಂಡಿತ್ತು. ನಿನ್ನೆ 25 ವಿದ್ಯಾರ್ಥಿಗಳಲ್ಲಿ ಶಂಕಿತ ಮಂಗನಬಾವು ಸೋಂಕು ಕಾಣಿಸಿಕೊಂಡಿದೆ. ಇಂದು ಮತ್ತೆ 35ಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ಶಂಕಿತ ಮಂಗನಬಾವು ಸೋಂಕು ಪತ್ತೆಯಾಗಿದೆ. ಈಗಾಗಲೇ 10 ವಿದ್ಯಾರ್ಥಿಗಳಲ್ಲಿ ಮಂಗನಬಾವು ಸೋಂಕು ದೃಢಪಟ್ಟಿದೆ. ಶೀತ, ಜ್ವರ, ಕೆಮ್ಮು ಹಾಗೂ ಗಂಟಲಿನ ಬಾವಿನಿಂದ ವಿದ್ಯಾರ್ಥಿಗಳು ಬಳಲುತ್ತಿದ್ದಾರೆ. 

ಬಳ್ಳಾರಿ: ಮಧ್ಯಾಹ್ನ ಬಿಸಿಯೂಟ ಸೇವಿಸಿ 45ಕ್ಕೂ ಅಧಿಕ ವಿದ್ಯಾರ್ಥಿಗಳು ತೀವ್ರ ಅಸ್ವಸ್ಥ!

ಸ್ಥಳಕ್ಕೆ ತಾಲೂಕು ವೈದ್ಯಾಧಿಕಾರಿ ಡಾ. ಭರತ್‌ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೋಂಕಿತ ವಿದ್ಯಾರ್ಥಿಗಳನ್ನು ಮುಂಡಗೋಡು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 

ಸೋಂಕಿತ ಸಂಪರ್ಕದಿಂದ ವಿದ್ಯಾರ್ಥಿಗಳಲ್ಲಿ ಮಂಗನಬಾವು ಹಬ್ಬಿರುವ ಸಾಧ್ಯತೆ ಇದೆ. ಗಂಟಲಿನ‌ ಮೇಲೆ ಹೆಚ್ಚಾಗಿ ಮಂಗನಬಾವು ಸೋಂಕು ಬಾಧಿಸುತ್ತದೆ. 

ಬೀದರ್‌: ಹಾಸ್ಟೇಲ್‌ನಲ್ಲಿ ರಾತ್ರಿ ಉಳಿದ ಅನ್ನ ಸೇವಿಸಿದ 58 ವಿದ್ಯಾರ್ಥಿಗಳು ಅಸ್ವಸ್ಥ

ಹುಮನಾಬಾದ್‌:  ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಕಲ್ಲೂರ ಗ್ರಾಮದ ಹೊರವಲಯದಲ್ಲಿರುವ ಬಸವತೀರ್ಥ ಮಠದಡಿ ನಡೆಯುತ್ತಿರುವ ಬಸವತೀರ್ಥ ಗುರುಕುಲ ಶಾಲೆಯ ವಸತಿ ನಿಲಯದಲ್ಲಿ ವಿಷಪೂರಿತ ಆಹಾರ ಸೇವಿಸಿ 58 ವಿದ್ಯಾರ್ಥಿ, ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಘಟನೆ ನ. 13 ರಂದು ಸಂಭವಿಸಿತ್ತು.

ರಾಜ್ಯದಲ್ಲಿ ಮತ್ತೊಂದು ಘೋರ ದುರಂತ; ಕಲುಷಿತ ನೀರು ಸೇವಿಸಿ ನೂರಾರು ಜನರು ತೀವ್ರ ಅಸ್ವಸ್ಥ!

ಅಸ್ವಸ್ಥರನ್ನು ಹುಮನಾಬಾದ್ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ರಾತ್ರಿ ಉಳಿದ ಅನ್ನಕ್ಕೆ ಒಗ್ಗರಣೆ ಹಾಕಿ ಮುಂಜಾನೆಯ ಫಲಾಹಾರ ನೀಡಲಾಗಿತ್ತು. ಇದನ್ನು ತಿಂದ ಕೆಲ ಮಕ್ಕಳಲ್ಲಿ ತಲೆ ಸುತ್ತುವುದು, ಹೊಟ್ಟೆ ನೋವು, ವಾಂತಿ ಕಾಣಿಸಿಕೊಂಡಿತ್ತು.

ಜಿಲ್ಲಾ ಪಂಚಾಯಿತಿ ಸಿಇಒ ಡಾ। ಗಿರೀಶ ಬದೋಲೆ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸಲೀಂ ಪಾಶಾ, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ಗೂಡಾಳ, ವಿಧಾನ ಪರಿಷತ್ ಸದಸ್ಯ ಡಾ.ಚಂದ್ರಶೇಖರ ಪಾಟೀಲ್, ಮಾಜಿ ಸಚಿವ ರಾಜಶೇಖರ ಪಾಟೀಲ್ ಹಾಗೂ ಇತರರು ಆಸ್ಪತ್ರೆಗೆ ಭೇಟಿ ನೀಡಿ, ಮಕ್ಕಳ ಯೋಗಕ್ಷೇಮ ವಿಚಾರಿಸಿದ್ದರು. 

Latest Videos
Follow Us:
Download App:
  • android
  • ios