ಶಿವಮೊಗ್ಗ (ಸೆ.01): ಜಿಲ್ಲೆಯಲ್ಲಿ ಮಂಗಳವಾರ 247 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಒಟ್ಟಾರೆ ಜಿಲ್ಲೆಯಲ್ಲಿ ಇದುವರೆಗೂ 7978 ಮಂದಿ ಸೋಂಕಿತರು ಪತ್ತೆಯಾಗಿದ್ದು, ಇದೀಗ ಸೋಂಕಿತರ ಸಂಖ್ಯೆ 8000 ಸಮೀಪಕ್ಕೆ ಬಂದು ತಲುಪಿದೆ. ಮಂಗಳವಾರ 204 ಮಂದಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದರೆ, ಒಬ್ಬರು ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 135ಕ್ಕೇರಿದೆ.

ಶಿವಮೊಗ್ಗ ತಾಲೂಕಿನಲ್ಲಿ 140, ಭದ್ರಾವತಿ 34, ಶಿಕಾರಿಪುರ 28, ಸಾಗರ 5, ತೀರ್ಥಹಳ್ಳಿ 13, ಹೊಸನಗರ 2, ಸೊರಬ 24, ಹೊರ ಜಿಲ್ಲೆಗಳಿಂದ ಶಿವಮೊಗ್ಗಕ್ಕೆ ಆಗಮಿಸಿದ ಒಬ್ಬರಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ. ಜಿಲ್ಲೆಯಲ್ಲಿ 1768 ಸಕ್ರಿಯ ಪ್ರಕರಣಗಳಿವೆ. 

ಬೆಂಗಳೂರಲ್ಲಿ ಮೂರೇ ದಿನದಲ್ಲಿ 76297 ಕೋವಿಡ್‌ ಟೆಸ್ಟ್...

ಅದರಲ್ಲಿ 185 ಮುಂದೆ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದಂತೆ 195 ಮಂದಿ ಕೋವಿಡ್‌ ಆರೈಕೆ ಕೇಂದ್ರದಲ್ಲಿ, 250 ಮಂದಿ ಖಾಸಗಿ ಆಸ್ಪತ್ರೆಯಲ್ಲಿ, 1119 ಮನೆಯಲ್ಲಿ ಐಸೋಲೇಶನ್‌ಗೆ ಒಳಗಾಗಿದ್ದಾರೆ. 19 ಮಂದಿ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾ