Asianet Suvarna News Asianet Suvarna News

ಮಡಿಕೇರಿ: ಹಾರಂಗಿ ಜಲಾಶಯದಿಂದ ಹೆಚ್ಚಿನ ನೀರು ಹೊರಕ್ಕೆ

ಕೊಡಗು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾರಂಗಿ ಜಲಾಶಯದಲ್ಲಿಯೂ ನೀರಿನ ಒಳಹರಿವು ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಜಲಾಶಯದಿಂದ ಇನ್ನಷ್ಟು ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಹೊರಬಿಡಲಾಗಿದೆ.

More water released from Harangi Reservoir in Kodagu
Author
Bangalore, First Published Sep 6, 2019, 1:21 PM IST

ಮಡಿಕೇರಿ(ಸೆ.06): ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾರಂಗಿ ಜಲಾಶಯಕ್ಕೆ ನೀರಿನ ಒಳ ಹರಿವು ಹೆಚ್ಚಾಗಿರುವುದರಿಂದ ಬುಧವಾರ ರಾತ್ರಿಯಿಂದ ಜಲಾಶಯದಿಂದ 15,000 ಕ್ಯೂಸೆಕ್‌ ನೀರು ಹೊರ ಬಿಡಲಾಗುತ್ತಿದೆ.

ಜಲಾಶಯಕ್ಕೆ ನೀರಿನ ಒಳ ಹರಿವು ಹೆಚ್ಚಾದಲ್ಲಿ ಇನ್ನೂ ಹೆಚ್ಚು ನೀರನ್ನು ಜಲಾಶಯದಿಂದ ಹೊರ ಬಿಡುವ ಸಾಧ್ಯತೆ ಇರುತ್ತದೆ. ಕಾವೇರಿ ನದಿಯಲ್ಲಿ ನೀರಿನ ಪ್ರವಾಹ ಹೆಚ್ಚಾಗಿದ್ದು ತಗ್ಗು ಪ್ರದೇಶಗಳಿಗೆ ಪ್ರವಾಹ ಭೀತಿ ಎದುರಾಗಿದೆ.

ಕೊಡಗು: ಅಪಾಯ ಮಟ್ಟ ಮೀರಿದ ಕಾವೇರಿ ಹರಿವು

ಅಲ್ಲದೆ ಕಾವೇರಿ ಜಲಾನಯನ ಪ್ರದೇಶಗಳಲ್ಲೂ ಹೆಚ್ಚಿನ ಮಳೆ ಆಗುತ್ತಿರುವುದರಿಂದ ಕಾವೇರಿ ಹೊಳೆಯಲ್ಲೂ ನೀರಿನ ಮಟ್ಟಏರಿಕೆಯಾಗುತ್ತಿದ್ದು, ಕುಶಾಲನಗರ ಸೇರಿದಂತೆ ಕಾವೇರಿ ನದಿ ತಟದಲ್ಲಿರುವ ಜನರು ಎಚ್ಚರಿಕೆಯಿಂದ ಇರಲು ಜಿಲ್ಲಾಧಿಕಾರಿ ಅನೀಸ್‌ ಕೆ. ಜಾಯ್‌ ಮನವಿ ಮಾಡಿದ್ದಾರೆ.

48 ಗಂಟೆಗಳಲ್ಲಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ : ಜಾಗೃತೆ

Follow Us:
Download App:
  • android
  • ios