ಮಂಗಳೂರು (ಮೇ.30): ವಿದ್ಯುತ್ ಶಾಕ್ ಗೆ ಒಳಗಾಗಿ ತಾಯಿ ಮಗು ಇಬ್ಬರೂ ದಾರುಣವಾಗಿ ಸಾವಿಗೀಡಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. 

 ಬೆಳ್ತಂಗಡಿ ತಾಲೂಕಿನ ಕೊಕ್ಕಡದ ಪಟ್ರಮೆ ಎಂಬಲ್ಲಿ ಇಂದು ಬೆಳಗ್ಗೆ ಘಟನೆ ನಡೆದಿದ್ದು ಗೀತಾ(30), ನಾಲ್ಕೂವರೆ ವರ್ಷದ ಮಗು ಭವಿಷ್ ಮೃತಪಟ್ಟಿದ್ದಾರೆ. 

ನೀರಿನ ಪಂಪ್ ಸ್ವಿಚ್ ಆನ್ ಮಾಡುವ ವೇಳೆ ತಾಯಿ ಹಾಗೂ ಮಗ ಇಬ್ಬರಿಗೂ ವಿದ್ಯುತ್ ಶಾಕ್ ತಗುಲಿದೆ. 

ಮಂಗಳೂರು: ಅಪಾರ್ಟ್‌ಮೆಂಟ್‌ನಿಂದ ಹಾರಿ ಸೋಂಕಿತ ಯುವಕ ಆತ್ಮಹತ್ಯೆ ...

ತೀವ್ರವಾದ ವಿದ್ಯುತ್ ಶಾಕ್ ತಗುಲಿ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.   

ಮಳೆಗಾಲದ ಸಂದರ್ಭದಲ್ಲಿ ವಿದ್ಯುತ್ ಅವಘಡಗಳು ಹೆಚ್ಚು ಆಗುವ ಹಿನ್ನೆಲೆ ಸೂಕ್ತ ಎಚ್ಚರಿಕೆ ವಹಿಸುವುದು ಅಗತ್ಯವಾಗಿರುತ್ತದೆ.