Asianet Suvarna News Asianet Suvarna News

ಚಿಕ್ಕಮಗಳೂರು: ಕೆರೆಯಲ್ಲಿ ಮುಳುಗಿ ತಾಯಿ‌, ಮಗಳು ದಾರುಣ ಸಾವು

ಕೆರೆಯಲ್ಲಿ ನೀರು ಹೆಚ್ಚಿದ್ದ ಭಾಗದಲ್ಲೇ ಮಗಳು ಸಿಲುಕಿಕೊಂಡಿದ್ದು, ಮಗಳನ್ನು ರಕ್ಷಣೆ ಮಾಡಲು ಹೋಗಿ ತಾಯಿಯೂ ನೀರಿನಲ್ಲಿ ಸಿಲುಕಿಕೊಂಡಿದ್ದರಿಂದ ಈ ಘಟನೆ ಸಂಭವಿಸಿದೆ. 

Mother and Daughter Dies Fallen in to the Lake in Chikkamagaluru grg
Author
First Published Dec 20, 2022, 11:04 PM IST

ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು 

ಚಿಕ್ಕಮಗಳೂರು(ಡಿ.20):  ಕೆರೆಯಲ್ಲಿ ಮುಳುಗಿ ತಾಯಿ ಮಗಳು ಸಾವನಪ್ಪಿರುವ ದಾರುಣ ಘಟನೆ ಚಿಕ್ಕಮಗಳೂರು ತಾಲೂಕಿನ ಬೆಳವಾಡಿ ಸಮೀಪದ ವಡ್ಡರಹಳ್ಳಿ ಗ್ರಾಮದಲ್ಲಿ ಇಂದು(ಮಂಗಳವಾರ) ನಡೆದಿದೆ. 

ತಾಲ್ಲೂಕಿನ ವಡ್ಡರಹಳ್ಳಿ ಗ್ರಾಮದ ಶೋಭ(40), ಮಗಳು ವರ್ಷಾ(8) ಮೃತಪಟ್ಟ ದುರ್ದೈವಿಗಳಾಗಿದ್ದು, ಶೋಭ ಅವರು ತನ್ನ ಇಬ್ಬರು ಮಕ್ಕಳಾದ ವರ್ಷ ಹಾಗೂ ಚೇತನ್ ಅವರೊಂದಿಗೆ ದನ ಮೇಯಿಸಲು ಹೋಗಿದ್ದು, ಈ ವೇಳೆ ಕೆರೆ ದಾಟುವ ವೇಳೆ ಮಗಳು ವರ್ಷ ಕೆರೆ ನೀರಿನಲ್ಲಿ ಸಿಲುಕಿಕೊಂಡಿದ್ದಾಳೆ. 

ಚಿಕ್ಕಮಗಳೂರು: ಒಂದೇ ಕುಣಿಕೆಗೆ ಕೊರಳೊಡ್ಡಿದ ಪ್ರೇಮಿಗಳು

ಈ ವೇಳೆ ತಾಯಿ ಶೋಭ ಮಗಳನ್ನು ರಕ್ಷಿಸಲು ಮುಂದಾಗಿದ್ದಾರೆ. ಆದರೆ ತಾಯಿ ಮಗಳು ಕರೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಈ ವೇಳೆ ಜೊತೆಗಿದ್ದ ಮಗ ಚೇತನ್ ಅಪಾಯದಿಂದ ಪಾರಾಗಿದ್ದಾನೆ. ಕೆರೆಯಲ್ಲಿ ನೀರು ಹೆಚ್ಚಿದ್ದ ಭಾಗದಲ್ಲೇ ಮಗಳು ಸಿಲುಕಿಕೊಂಡಿದ್ದು, ಮಗಳನ್ನು ರಕ್ಷಣೆ ಮಾಡಲು ಹೋಗಿ ತಾಯಿಯೂ ನೀರಿನಲ್ಲಿ ಸಿಲುಕಿಕೊಂಡಿದ್ದರಿಂದ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

Follow Us:
Download App:
  • android
  • ios