ಕೋಲಾರ(ಜು.30): ಶ್ರೀನಿವಾಸಪುರ ತಾಲೂಕಿನ ಗೌನಿಪಲ್ಲಿ ಗ್ರಾಮದಲ್ಲಿ ಮಗನಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಸಂಗತಿ ತಿಳಿದು ಹೃದಯಾಘಾತದಿಂದ ತಾಯಿ ಮೃತಪಟ್ಟಿದ್ದಾರೆ.

ಗೌನಿಪಲ್ಲಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಕಂಪ್ಯೂಟರ್‌ ಆಪರೇಟರ್‌ ಆಗಿರುವ 40 ವರ್ಷದ ವ್ಯಕ್ತಿಗೆ ಸೋಂಕು ಇರುವುದು ಮಂಗಳವಾರ ರಾತ್ರಿ ಗೊತ್ತಾಗಿತ್ತು. ಈ ವಿಷಯ ತಿಳಿದ ತಾಯಿಗೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ.

ಝೂಸ್‌ ಆಫ್‌ ಕರ್ನಾಟಕ ಮೊಬೈಲ್‌ ಆ್ಯಪ್‌ ಬಿಡುಗಡೆ

ಕೊರೋನಾಕ್ಕೆ ವ್ಯಕ್ತಿ ಬಲಿ:

ಜಿಲ್ಲೆಯಲ್ಲಿ ಬುಧವಾರ ಕೊರೊನಾ ಸೋಂಕಿತ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಸೋಂಕಿತರ ಸಾವಿನ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇದುವರೆಗೆ 1257 ಮಂದಿಗೆ ಕೊರೊನಾ ಸೋಂಕು ತಗುಲಿದ್ದು ಆ ಪೈಕಿ 367 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಹೊರ ಹೋಗಿದ್ದಾರೆ. 866 ಸಕ್ರಿಯ ಪ್ರಕರಣಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಬುಧವಾರ ಆಸ್ಪತ್ರೆಯಿಂದ ಬಿಡುಗಡೆ ಆಗಿರುವವರ ಸಂಖ್ಯೆ ಕೇವಲ 6 ಮಂದಿ ಮಾತ್ರ.