ರಸ್ತೆಯಲ್ಲಿಯೇ ಮಗುವಿಗೆ ಜನ್ಮ ನೀಡಿದ ತಾಯಿ| ಬೆಳಗಾವಿಯ ಶಹಾಪುರದಲ್ಲಿ ನಡೆದ ಘಟನೆ| ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಬಂದ್‌ ಆಗಿದ್ದ ಆಸ್ಪತ್ರೆ| ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕು ಎನ್ನುವಷ್ಟರಲ್ಲಿ ಕಾಣಿಸಿಕೊಂಡ ಹೆರಿಗೆ ನೋವು| 

ಬೆಳಗಾವಿ(ಏ.19): ಹೆರಿಗೆಗಾಗಿ ಆಸ್ಪತ್ರೆಗೆಂದು ಹೋಗುತ್ತಿದ್ದ ಗರ್ಭಿಣಿಯೊಬ್ಬಳು ಆಸ್ಪತ್ರೆ ಸೌಲಭ್ಯ ದೊರೆಯುವ ಮೊದಲೇ ರಸ್ತೆಯಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಬೆಳಗಾವಿ ಶಹಾಪುರದಲ್ಲಿ ಶನಿವಾರ ನಡೆದಿದೆ. ಸದ್ಯ ತಾಯಿ ಮತ್ತು ಮಗು ಇಬ್ಬರೂ ಆರೋಗ್ಯದಿಂದ ಇದ್ದಾರೆ. ಅವರಿಬ್ಬರನ್ನು ಟಿಳಕವಾಡಿಯ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.

ವಡಗಾವಿ ಮೂಲದ ಗರ್ಭಿಣಿಗೆ ಮನೆಯಲ್ಲಿ ಹೆರಿಗೆ ನೋವು ಕಾಣಿಸಿಕೊಂಡಿದೆ. ಹೀಗಾಗಿ ಗರ್ಭಿಣಿಯನ್ನು ತಕ್ಷಣ ಆಟೋ ಮೂಲಕ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ, ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಆಸ್ಪತ್ರೆ ಬಂದ್‌ ಆಗಿತ್ತು. ನಂತರ ಅಲ್ಲಿಂದ ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕು ಎನ್ನುವಷ್ಟರಲ್ಲಿ ಹೆರಿಗೆ ನೋವು ತೀವ್ರವಾಗಿದ್ದರಿಂದ ಆಟೋವನ್ನು ಅಲ್ಲಿಯೇ ನಿಲ್ಲಿಸಲಾಯಿತು.

ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ PSI..!

ನಂತರ ಅಲ್ಲಿಯೇ ಹತ್ತಿರದಲ್ಲಿ ಇದ್ದ ಕೆಲವು ಸ್ಥಳೀಯ ಮಹಿಳೆಯರೇ ಸೇರಿ ಹೆರಿಗೆ ಮಾಡಿಸಿ ಮಾನವೀಯತೆ ಮೆರೆದಿದ್ದಾರೆ. ರಸ್ತೆಯ ಮೇಲೆಯೇ ಗಂಡು ಮಗುವಿಗೆ ತಾಯಿ ಜನ್ಮ ನೀಡಿದ್ದಾಳೆ.