ಕಾಂಗ್ರೆಸ್ಸಿಗರಿಗೆ ವಿಪಕ್ಷದಲ್ಲಿ ಕುಳಿತುಕೊಳ್ಳುವ ಅಭ್ಯಾಸ ಇಲ್ಲ: ಬಿ.ವೈ. ರಾಘವೇಂದ್ರ
ಎಂಪಿಎಂ ಮತ್ತು ವಿಐಎಸ್ಎಲ್ ಎರಡೂ ಕಾರ್ಖಾನೆಗಳ ಪುನಶ್ಚೇತನ ಮಾಡಲು ಪ್ರಯತ್ನ ನಡೆಸಿದ್ದೇನೆ| ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ 10 ಕಾಮಗಾರಿಗಳಿಗೆ ಅನುಮೋದನೆ| ಸುಮಾರು 1190 ಕೋಟಿ ಅನುದಾನ ಬಿಡುಗಡೆ: ಸಂಸದ ಬಿ.ವೈ. ರಾಘವೇಂದ್ರ|
ಶಿವಮೊಗ್ಗ(ಮಾ.14): ಅನೇಕ ದೇಶಗಳಲ್ಲಿ ಕೊರೋನಾ ವಾಕ್ಸಿನೇಷನ್ ಸಿಗುತ್ತಲೇ ಇಲ್ಲ. ಆದರೆ, ನಮ್ಮ ದೇಶದಲ್ಲಿ ಸಿಗುತ್ತಿರುವ ಹಿನ್ನೆಲೆಯಲ್ಲಿ ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.
ಇಂದು(ಭಾನುವಾರ) ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ವಾಕ್ಸಿನೇಷನ್ ಪಡೆದ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೋವಿಡ್ ವಾಕ್ಸಿನೇಷನ್ ಎಲ್ಲರೂ ಪಡೆಯಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಕಾಂಗ್ರೆಸ್ಸಿಗರಿಗೆ ‘ಅಲ್ಲಾ ಹೋ ಅಕ್ಬರ್, ಪಾಕಿಸ್ತಾನ್ ಜಿಂದಾಬಾದ್’ ಎಂದು ಹೇಳಿದ್ದರೆ ಖುಷಿಯಾಗುತ್ತಿತ್ತಾ?
ಶಿವಮೊಗ್ಗದ ಅಭಿವೃದ್ಧಿ ವಿಷಯದಲ್ಲಿ ನಡೆದ ಕಾಂಗ್ರೆಸ್ ರ‍್ಯಾಲಿಯಲ್ಲಿ ಎಂಪಿಎಂ ಮತ್ತು ವಿಐಎಸ್ಎಲ್ ಕಾರ್ಖಾನೆಯ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಈ ಎರಡೂ ಕಾರ್ಖಾನೆಗಳ ಪುನಶ್ಚೇತನ ಮಾಡಲು ಪ್ರಯತ್ನ ನಡೆಸಿದ್ದೇನೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ 10 ಕಾಮಗಾರಿಗಳಿಗೆ ಅನುಮೋದನೆ ಸಿಕ್ಕಿವೆ. ಸುಮಾರು 1190 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ ಸ್ನೇಹಿತರಿಗೆ ವಿಪಕ್ಷದಲ್ಲಿ ಕುಳಿತುಕೊಳ್ಳುವ ಅಭ್ಯಾಸ ಇಲ್ಲ. ಇವರ ದುರಾಡಳಿತದಿಂದ ಬೇಸತ್ತು ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳಲ್ಲೂ ಜನರು ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ ಎಂದು ಹೇಳಿದ್ದಾರೆ.