ಮೈಸೂರು(ಫೆ.06): ಬೆಂಗಳೂರು ಮತ್ತು ಕಾರವಾರ ನಡುವೆ ಪ್ರತಿನಿತ್ಯ ಸಂಚರಿಸುವ ರೈಲನ್ನು ವಾರದಲ್ಲಿ ನಾಲ್ಕು ದಿನ ಮೈಸೂರು ಮಾರ್ಗವಾಗಿ ಸಂಚರಿಸುವಂತೆ ಮಾಡಬೇಕು ಎಂದು ಮೈಸೂರು- ಕೊಡಗು ಲೋಕಸಭಾ ಸದಸ್ಯ ಪ್ರತಾಪಸಿಂಹ ಅವರು ರೈಲ್ವೆ ಸಚಿವ ಸುರೇಶ್‌ ಅಂಗಡಿ ಅವರನ್ನು ಕೋರಿದರು.

ಬೆಳಗಿನ ವೇಳೆ ಮೈಸೂರು- ಮಂಗಳೂರು ರೈಲು ಸಂಚಾರಕ್ಕೆ ಹೆಚ್ಚು ಬೇಡಿಕೆ ಇರುವುದರಿಂದ ಈ ರೈಲು ಮೈಸೂರು ಮಾರ್ಗವಾಗಿ ಸಂಚರಿಸಿದರೆ ಅನುಕೂಲವಾಗಲಿದೆ. ಈ ಸಂಬಂಧ ರೈಲ್ವೆ ವಲಯವು ಸರ್ವೇ ನಡೆಸಿದೆ.

ದಾರಿ ತಪ್ಪಿ ಬಂದ ಪುಟ್ಟ ಆನೆ ಮರಿಯ ಆಕ್ರಂದನ..! ಅಮ್ಮನಿಗಾಗಿ ಅಳು

ಬಸ್‌ಗಳು ಚಾರ್ಮಾಡಿ ಘಾಟ್‌ ಮೂಲಕ ಸಂಚರಿಸುವುದರಿಂದ ಮಹಿಳೆಯರು ಮತ್ತು ಮಕ್ಕಳಿಗೆ ಅನಾನುಕೂಲವಾಗಿದೆ. ಈ ರೈಲು ಮಾರ್ಗಕ್ಕೆ ಅನುಮತಿ ನೀಡುವುದರಿಂದ ರಾಜ್ಯದ ಎರಡು ಪ್ರಮುಖ ನಗರಗಳಿಗೆ ಸಂಪರ್ಕ ಕಲ್ಪಿಸಿದಂತೆ ಆಗುತ್ತದೆ ಎಂದು ಅವರು ಕೋರಿದ್ದಾರೆ.

ಅಂತೆಯೇ ಮೈಸೂರಿನ ರೈಲ್ವೆ ಮ್ಯೂಸಿಯಮ್‌ ನವೀಕರಣ ಮತ್ತು ಅಭಿವೃದ್ಧಿಗೆ ಅಗತ್ಯವಿರುವ . 5 ಕೋಟಿ ನೀಡಲು ಸೂಚನೆ ನೀಡಿದ ಸಚಿವ ಸುರೇಶ್‌ ಅಂಗಡಿ ಅವರಿಗೆ ಧನ್ಯವಾದ ಅರ್ಪಿಸಿದರು.