ಸಂಸದ ಪ್ರತಾಪ ಸಿಂಹ ಹೆಸರು ಇಂಗ್ಲಿಷ್ ನಲ್ಲಿ ಸಂಖ್ಯಾಶಾಸ್ತ್ರದ ಪ್ರಕಾರ ಸ್ವಲ್ಪ ಬದಲು!
ಮೈಸೂರು- ಕೊಡಗು ಲೋಕಸಭಾ ಸದಸ್ಯ ಪ್ರತಾಪ ಸಿಂಹ ಅವರು ತಮ್ಮ ಇಂಗ್ಲಿಷ್ ಹೆಸರಿನಲ್ಲಿ ಸಂಖ್ಯಾಶಾಸ್ತ್ರದ ಅನ್ವಯ ಸಣ್ಣ ಬದಲಾವಣೆ ಮಾಡಿಕೊಂಡಿದ್ದಾರೆ.
ಮೈಸೂರು: ಮೈಸೂರು- ಕೊಡಗು ಲೋಕಸಭಾ ಸದಸ್ಯ ಪ್ರತಾಪ ಸಿಂಹ ಅವರು ತಮ್ಮ ಇಂಗ್ಲಿಷ್ ಹೆಸರಿನಲ್ಲಿ ಸಂಖ್ಯಾಶಾಸ್ತ್ರದ ಅನ್ವಯ ಸಣ್ಣ ಬದಲಾವಣೆ ಮಾಡಿಕೊಂಡಿದ್ದಾರೆ. Prathap simha ಎಂಬ ಹೆಸರನ್ನು ಅವರು Pratap simmha ಎಂದು ಬದಲಿಸಿಕೊಂಡಿರುವುದಾಗಿ ಅಫಿಡೆವಿಟ್ ಮೂಲಕ ಘೋಷಿಸಿಕೊಂಡಿದ್ದಾರೆ.
ಈ ಬಗ್ಗೆ ಕನ್ನಡಪ್ರಭಕ್ಕೆ ಪ್ರತಿಕ್ರಿಯಿಸಿದ ಪ್ರತಾಪ ಸಿಂಹ ಅವರು, ಸಂಖ್ಯಾಶಾಸ್ತ್ರದ ಅನ್ವಯ ಸಣ್ಣ ಬದಲಾವಣೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಈ ಹಿಂದೆ ಅನೇಕ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ, ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಕೆಲವು ರಾಜಕಾರಣಿಗಳು ಸಂಖ್ಯಾಶಾಸ್ತ್ರ ಮತ್ತು ರಾಜಕೀಯ ಭವಿಷ್ಯದ ದೃಷ್ಟಿಯಿಂದ ಬದಲಿಸಿಕೊಂಡ ಉದಾಹರಣೆ ಇದೆ.
ಈ ಹಿಂದೆ ಮೈಸೂರು- ಕೊಡಗು ಮಾಜಿ ಸಂಸದ, ಹಾಲಿ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು ಕೂಡ ತಮ್ಮ ಹೆಸರಿನ ಹಿಂದೆ ಅಡಗೂರು ಸೇರಿಸಿಕೊಂಡಿದ್ದರು.
MP ಚುನಾವಣೆಗೂ ರಾಜ್ಯಾಧ್ಯಕ್ಷರ ನೇಮಕಕ್ಕೂ ಸಂಬಂಧವಿಲ್ಲ
ಮೈಸೂರು(ಅ.25): ಲೋಕಸಭಾ ಚುನಾವಣೆಗೂ, ರಾಜ್ಯಾಧ್ಯಕ್ಷರ ನೇಮಕಕ್ಕೂ ಸಂಬಂಧ ಇಲ್ಲ. ಬಿಜೆಪಿ ಸಂಘಟನೆ ದೃಷ್ಟಿಯಿಂದಷ್ಟೆ ರಾಜ್ಯಾಧ್ಯಕ್ಷರು ಬೇಕು ಎಂದು ಸಂಸದ ಪ್ರತಾಪ ಸಿಂಹ ಹೇಳಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ರಾಜ್ಯಾಧ್ಯಕ್ಷರು ಯಾರಾಗಬೇಕು? ಯಾವಾಗ ಮಾಡಬೇಕು? ಇದನ್ನು ನಮ್ಮ ಹೈಕಮಾಂಡ್ ನಿರ್ಧರಿಸುತ್ತದೆ. ಅದನ್ನು ಹೇಳಲು, ನಾನು ಬಹಳ ಕಿರಿಯ. ನಾನು ಪಕ್ಷಕ್ಕೆ ಬಂದು ಈಗ 10 ವರ್ಷ ಆಗುತ್ತಿದೆ ಅಷ್ಟೆ. ನಾನು ಪಕ್ಷದ ನೇಮಕ ವಿಚಾರದಲ್ಲಿ ಏನೂ ಹೇಳಲು ಆಗುವುದಿಲ್ಲ ಎಂದರು.
ಪ್ರತಾಪ ಸಿಂಹ ಗೆದ್ದರೆ ನಾನು ಊರು ಬಿಟ್ಟು ಹೋಗುತ್ತೇನೆ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್
ಪಕ್ಷದ ಕಾರ್ಯಕರ್ತರು ರಾಜ್ಯ ರಾಜಕಾರಣಕ್ಕೆ ಬನ್ನಿ ಎಂದು ಶೋಭಾ ಕರಂದ್ಲಾಜೆ ಅವರನ್ನು ಕರೆಯುತ್ತಿದ್ದರು. ನಾನು ಅದೇ ದಾಟಿಯಲ್ಲೇ ಶುಭಾಶಯ ಕೋರಿದ್ದೇನೆ. ನಾವೆಲ್ಲ ಗೆಲ್ಲುವುದು ಪ್ರಧಾನಿ ಮೋದಿ ಅವರ ಹೆಸರಿನಿಂದ, ಮೋದಿ ನಮ್ಮ ದೇವರು. ಲೋಕಸಭಾ ಚುನಾವಣೆ ಮೋದಿ ಹೆಸರಿನಲ್ಲೇ ನಡೆಯುತ್ತದೆ ಎಂದು ಹೇಳಿದರು.