ಸೂಲಿಬೆಲೆ [ಸೆ.19]: ಕಾಂಗ್ರೆಸ್‌ ಪಕ್ಷದ ನಾಯಕರು ತಮ್ಮ ತೇಜೋವಧೆಗೆ ಯತ್ನಿಸುವ ಹೇಳಿಕೆಗಳನ್ನು ಕೊಡುತ್ತಿದ್ದು, ಕೂಡಲೇ ಇದನ್ನು ನಿಲ್ಲಿಸದಿದ್ದರೆ ಕಾಂಗ್ರೆಸ್‌ ನಾಯಕರ ಬಂಡವಾಳವನ್ನು ನಾನು ಬಿಚ್ಚಿಡಬೇಕಾಗುತ್ತದೆ ಎಂದು ಅನರ್ಹ ಶಾಸಕ ಎಂಟಿಬಿ ನಾಗರಾಜ್‌ ಕಾಂಗ್ರೆಸ್‌ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಹೊಸಕೋಟೆ ಎಂಟಿಬಿ ಭವನದಲ್ಲಿ ಹಮ್ಮಿಕೊಂಡಿದ್ದ ಅಭಿಮಾನಿಗಳು, ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ನಾಯಕರು ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಹೇಳಿ ನನ್ನ ತೇಜೋವಧೆಗೆ ಮುಂದಾಗಿದ್ದಾರೆ. 

ಕ್ಷೇತ್ರದಲ್ಲಿ ರಾಜಕಾರಣ ಮಾಡಲಿ. ಕ್ಷೇತ್ರಕ್ಕೆ ನಾನು ಮಾಡಿರುವ ಅಭಿವೃದ್ಧಿ ಕಾರ್ಯಗಳೇ ನನಗೆ ಶ್ರೀರಕ್ಷೆಯಾಗಿವೆ. ಎಷ್ಟೋ ಚುನಾವಣೆಗಳಲ್ಲಿ ಕಾಂಗ್ರೆಸ್‌ ಪಕ್ಷದ ನಾಯಕರು ನನ್ನ ಹತ್ತಿರ ಹಣ ಪಡೆದು ಈಗ ನನ್ನ ಮೇಲೆ ಆರೋಪಗಳನ್ನು ಮಾಡುತ್ತಿರುವುದು ಸಹಿಸಲು ಸಾಧ್ಯವಿಲ್ಲ ಎಂದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಸೆ.21ಕ್ಕೆ ಹೊಸಕೋಟೆಯಲ್ಲಿ ಸ್ವಾಭಿಮಾನ ಸಮಾವೇಶ ನಡೆಸಲಿ. ನನ್ನ ವಿರುದ್ಧ ಸುಳ್ಳು ಆರೋಪಗಳ ಮಾಡಿದಲ್ಲಿ ಸಹಿಸಿಕೊಂಡು ಇರಲು ಆಗೋಲ್ಲ ಎಂದು ಹೇಳಿದರು.