ಬೆಂಗಳೂರು [ಜ.18]: ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪ ಹೊತ್ತಿರುವ ಸಂಸದ ಬಿ.ಎನ್‌.ಬಚ್ಚೇಗೌಡ ಅವರ ವಿರುದ್ಧ ಇದುವರೆಗೂ ಶಿಸ್ತು ಕ್ರಮ ಕೈಗೊಳ್ಳದಿರುವ ಬಗ್ಗೆ ಮಾಜಿ ಸಚಿವ ಎಂ.ಟಿ.ಬಿ.ನಾಗರಾಜ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರ ವಿರುದ್ಧ ಕ್ರಮ ಆಗಬೇಕು. ನಾನು ಉಪಚುನಾವಣೆ ಮುಗಿದ ನಂತರದ ದಿನದಿಂದಲೂ ಮುಖ್ಯಮಂತ್ರಿಗಳನ್ನು ಒತ್ತಾಯ ಮಾಡುತ್ತಿದ್ದೇನೆ. ಆದರೂ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಬೇಸರ ಹೊರಹಾಕಿದರು.

ಸಿನಿಮಾ ನಿರ್ಮಾಣಕ್ಕೆ ಎಂಟಿಬಿ ಎಂಟ್ರಿ!...

ನಮ್ಮೆಲ್ಲರ ತ್ಯಾಗದಿಂದ ಈ ಸರ್ಕಾರ ಬಂದಿದೆ. ಸಮಯ ಸಂದರ್ಭ ಕೂಡಿ ಬಂದಾಗ ಸಚಿವರಾಗುತ್ತೇವೆ. ಹೈಕಮಾಂಡ್‌ ನಿರ್ಧಾರಕ್ಕೆ ನಾನು ಬದ್ಧ. ನಾನು ಯಾವುದೇ ಒತ್ತಡ ಹೇರಿಲ್ಲ. ಹೇರುವುದೂ ಇಲ್ಲ. ಈಗಾಗಲೇ ಮುಖ್ಯಮಂತ್ರಿಗಳಿಗೆ ಸಾಕಷ್ಟುಒತ್ತಡ ಇದೆ. ನಾನು ಒತ್ತಡ ಹೇರೋಕೆ ಹೋಗುವುದಿಲ್ಲ ಎಂದು ತಿಳಿಸಿದರು.