*  ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಎಂ.ಎಂ. ಸಜ್ಜನ*  1972-78 ರವರೆಗೆ ಮುದ್ದೇಬಿಹಾಳ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದ ಸಜ್ಜನ*  ಸಜ್ಜನ ನಿಧನಕ್ಕೆ ವಿವಿಧ ಮಠಾಧೀಶರು, ಗಣ್ಯರು ಹಾಗೂ ರಾಜಕಾರಣಿಗಳ ಸಂತಾಪ

ವಿಜಯಪುರ(ಫೆ.01):  ವಿಜಯಪುರ(Vijayapura) ಜಿಲ್ಲೆಯ ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಂ.ಎಂ. ಸಜ್ಜನ (95) ಇಂದು(ಮಂಗಳವಾರ) ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಮಾಜಿ ಶಾಸಕರು ಇಂದು‌‌ ಬೆಳಗಿನ ಜಾವ ಇಹಲೋಕ ತ್ಯಜಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಲ್ಲಪ್ಪ ಮುರಿಗೆಪ್ಪ ಸಜ್ಜನ(MM Sajjan) ಅವರು 1972-78 ರವರೆಗೆ ಮುದ್ದೇಬಿಹಾಳ(Muddebihal) ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ಇಂದು ಸಾಯಂಕಾಲ 4 ಗಂಟೆಗೆ ಮುದ್ದೇಬಿಹಾಳ ಪಟ್ಟಣದ ವೀರಶೈವ ಲಿಂಗಾಯತ ರುದ್ರಭೂಮಿಯಲ್ಲಿ ಮೃತರ ಅಂತ್ಯಕ್ರಿಯೆ(Funeral) ನಡೆಯಲಿದೆ ಎಂಬ ಮಾಹಿತಿ ಕುಟುಂಬಸ್ಥರಿಂದ ತಿಳಿದು ಬಂದಿದೆ.

Kolar: ಶ್ರೀಪಾದರಾಜ ಮಠದ ಕೇಶವನಿಧಿ ಶ್ರೀ ವಿಧಿವಶ

ಮಾಜಿ ಶಾಸಕ ಎಂ.ಎಂ. ಸಜ್ಜನ ನಿಧನಕ್ಕೆ ನಾಡಿನ ವಿವಿಧ ಮಠಾಧೀಶರು, ಗಣ್ಯರು ಹಾಗೂ ರಾಜಕಾರಣಿಗಳು ಸಂತಾಪ(Condolences) ವ್ಯಕ್ತಪಡಿಸಿದ್ದಾರೆ.